ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಂಜನಗೂಡು: ನಾಮಪತ್ರ ಸಲ್ಲಿಕೆಗೆ ಮಾರ್ಚ್ 21 ಕಡೆಯ ದಿನಾಂಕ

ಭಾರತ ಚುನಾವಣಾ ಆಯೋಗದ ಮಾರ್ಗ ಸೂಚಿಯಂತೆ ಚುನಾವಣೆಗೆ ಸ್ಪರ್ಧಿಸುವ ಒಬ್ಬ ಅಭ್ಯರ್ಥಿಯು ಗರಿಷ್ಠ 28ಲಕ್ಷಗಳನ್ನು ವೆಚ್ಚ ಮಾಡಬಹುದಾಗಿದೆ. ಉಳಿದಂತೆ ಈಗಾಗಲೇ ಜಾರಿಯಾಗಿರುವ ನೀತಿ ಸಂಹಿತೆಯನ್ನು ಉಲ್ಲಂಘಿಸುವಂತಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮಾರ್ಚ್ 13 : ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಿ.ರಂದೀಪ್ ಮಾತನಾಡಿ ಮಾರ್ಚ್ 14ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಅಂದಿನಿಂದ ಮಾರ್ಚ್ 21ರವರೆಗೆ ಸಾರ್ವಜನಿಕ ರಜಾ ದಿನವನ್ನು ಹೊರತುಪಡಿಸಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ಗಂಟೆಯವರೆಗೆ ಉಮೇದುವಾರಿಕೆ ಸಲ್ಲಿಸಬಹುದು. [ಸಿಎಂ ಸಿದ್ದರಾಮಯ್ಯ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದರಾ?]

March 21st will be last date to file nominationh: Mysuru DC told

ಉಮೇದುದಾರ ಅಥವಾ ಸೂಚಕರಲ್ಲಿ ಯಾರಾದರೊಬ್ಬರು ಚುನಾವಣಾಧಿಕಾರಿ ಅಥವಾ ಸಹಾಯಕ ಚುನಾವಣಾಧಿಕಾರಿಗೆ ಉಮೇದುವಾರಿಕೆಯನ್ನು ಸಲ್ಲಿಸಬೇಕು. ಚುನಾವಣೆ ಸಂಬಂಧ ಅಭ್ಯರ್ಥಿಯು ಎಲ್ಲಾ ದಾಖಲಾತಿಗಳನ್ನು ನಾಮಪತ್ರ ಸಲ್ಲಿಸುವ ಕಡೆಯ ದಿನವಾದ ಮಾ.21ರ ಮಧ್ಯಾಹ್ನ 3 ಗಂಟೆಯೊಳಗೆ ಸಲ್ಲಿಸಬೇಕು ಎಂದು ತಿಳಿಸಿದರು.

ಭಾರತ ಚುನಾವಣಾ ಆಯೋಗದ ಮಾರ್ಗ ಸೂಚಿಯಂತೆ ಚುನಾವಣೆಗೆ ಸ್ಪರ್ಧಿಸುವ ಒಬ್ಬ ಅಭ್ಯರ್ಥಿಯು ಗರಿಷ್ಠ 28ಲಕ್ಷಗಳನ್ನು ವೆಚ್ಚ ಮಾಡಬಹುದಾಗಿದೆ. ಉಳಿದಂತೆ ಈಗಾಗಲೇ ಜಾರಿಯಾಗಿರುವ ನೀತಿ ಸಂಹಿತೆಯನ್ನು ಉಲ್ಲಂಘಿಸುವಂತಿಲ್ಲ ಎಂದು ಅವರು ಎಚ್ಚರಿಸಿದ್ದಾರೆ. [ಇದು ಪ್ರಚಾರವೋ, ವಿಜಯೋತ್ಸವವೋ ಗೊತ್ತಾಗುತ್ತಿಲ್ಲ: ಬಿ.ಎಸ್.ವೈ]

ನಂಜನಗೂಡು ವಿಧಾನ ಸಭಾ ಕ್ಷೇತ್ರದಲ್ಲಿ 236 ಮತಗಟ್ಟೆಗಳಿದ್ದು, 1,01267 ಪುರುಷರು, 99,231 ಮಹಿಳೆಯರು ಸೇರಿದಂತೆ ಒಟ್ಟು 2,00,498 ಮತದಾರರಿದ್ದಾರೆ ಎಂದು ಸಹ ಅವರು ಮಾಹಿತಿ ನೀಡಿದರು.

English summary
Nanjangud by election, candidates will be required to file nomination before 21st of this month, Mysuru district commissioner Randeep told.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X