ಮೈಸೂರಿನಲ್ಲಿ ಅಕ್ರಮ ಸಂಬಂಧಕ್ಕೆ ವಿವಾಹಿತ ಮಹಿಳೆ ಕೊಲೆ
ಮೈಸೂರು, ಮಾರ್ಚ್ 16: ಅಕ್ರಮ ಸಂಬಂಧಕ್ಕೆ ವಿವಾಹಿತ ಮಹಿಳೆಯೊಬ್ಬಳು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ತಿ.ನರಸೀಪುರ ತಾಲ್ಲೂಕಿನ ಅಕ್ಕೂರುದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಬಹಿರಂಗಪಡಿಸಿದ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಅವರು ಘಟನೆಗೆ ಸಂಬಂಧಪಟ್ಟ ಎಲ್ಲ ನಾಲ್ವರು ಆರೋಪಿಗಳನ್ನೂ ಬಂಧಿಸಲಾಗಿದೆ ಎಂದು ತಿಳಿಸಿದರು. ಘಟನೆಯ ಪೂರ್ಣ ವಿವರ ಇಲ್ಲಿದೆ.
ಅಕ್ಕೂರುದೊಡ್ಡಿಯ ವೆಂಕಟರಂಗ ನಾಯಕ ಎಂಬುವವರ ಪತ್ನಿ ರಾಜಮ್ಮ ಕಳೆದ ಜನವರಿ 28 ರಂದು ಮನೆಯಿಂದಲೇ ಕಾಣೆಯಾಗಿದ್ದರು. ಈ ಕುರಿತು ಅವರ ಪತಿ ಹನೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.
ಹನೂರು ಪೊಲೀಸರು ಪತ್ತೆ ಕಾರ್ಯಾಚರಣೆ ಆರಂಭಿಸಿದಾಗ ರಾಜಮ್ಮನಿಗೆ ಆರೋಪಿ ಮಹೇಶ್ ಎಂಬಾತನೊಂದಿಗೆ ಕೆಲವು ವರ್ಷಗಳಿಂದ ಅನೈತಿಕ ಸಂಬಂಧವಿತ್ತು ಎಂದು ತಿಳಿದು ಬಂದಿದೆ.

ರಾಜಮ್ಮನನ್ನು ಸಾಯಿಸಲು ತೀರ್ಮಾನ
ಇದೇ ಕಾರಣದಿಂದ ರಾಜಮ್ಮ ನೀನು ನನ್ನೊಂದಿಗೆ ಇರಬೇಕು, ಬೇರೆ ಮನೆ ಮಾಡಿ ನನ್ನನ್ನು ಕರೆದುಕೊಂಡು ಹೋಗು ಎಂದು ದಿನಾಲೂ ಮಹೇಶ್‌ನನ್ನು ಒತ್ತಾಯಿಸುತ್ತಿದ್ದಳು.
ಆದರೆ, ಮಹೇಶ್‌ನಿಗೆ ಮದುವೆ ಈಗಾಗಲೇ ಸಂಸಾರವಿದ್ದ ಕಾರಣಕ್ಕೆ ರಾಜಮ್ಮಳ ಕೋರಿಕೆಯನ್ನು ತಿರಸ್ಕರಿಸಿದ್ದ. ಆದರೆ, ರಾಜಮ್ಮನ ವಿಪರೀತ ಹಿಂಸೆಯಿಂದ ಜಿಗುಪ್ಸೆಗೊಂಡು ಈಕೆಯನ್ನೇ ಸಾಯಿಸಿದರೆ ತಾನು ನೆಮ್ಮದಿಯಾಗಿರಬಹುದೆಂದು ಯೋಚಿಸಿದ್ದ. ಅದರಂತೆ ರಾಜಮ್ಮನನ್ನು ಮುಗಿಸಿಬಿಡಲು ಸಂಚು ರೂಪಿಸಿದ್ದ .

ಶವವನ್ನು ತೋಟದಲ್ಲೇ ಹೂತರು
ಮೊದಲೇ ಪೂರ್ವ ಯೋಜನೆಯಂತೆ ಮಹೇಶನು, ಜ. 28 ರಂದು ತಿ.ನರಸೀಪುರ ತಾಲ್ಲೂಕಿನ ಅಕ್ಕೂರುದೊಡ್ಡಿ ಗ್ರಾಮದ ಬಳಿ ತನ್ನ ಸಹಚರ ಸೋಮ ಎಂಬಾತ ನೋಡಿಕೊಳ್ಳುತ್ತಿದ್ದ ತೋಟದ ಮನೆಗೆ ರಾಜಮ್ಮನನ್ನು ಕರೆದುಕೊಂಡು ಬಂದಿದ್ದಾನೆ.
ಅಲ್ಲಿ ಇತರ ಮೂವರು ಸಹಚರರೊಂದಿಗೆ ಸೇರಿಕೊಂಡು ಗುದ್ದಲಿಯಲ್ಲಿ ಹೊಡೆದು ರಾಜಮ್ಮನನ್ನು ಕೊಲೆ ಮಾಡಿದ್ದಾರೆ. ನಂತರ ಶವವನ್ನು ಅಲ್ಲೇ ಬಿಟ್ಟು ಹೋಗಿದ್ದು, ಎರಡ್ಮೂರು ದಿನಗಳ ನಂತರ ಬಂದು ಸಾಕ್ಷ್ಯ ನಾಶಪಡಿಸಲು ಶವವನ್ನು ತೋಟದಲ್ಲೇ ಹೂತಿಟ್ಟಿದ್ದರು.

ನಾಲ್ಕು ಜನ ಸಹಚರರೊಂದಿಗೆ ಕೊಲೆ
ಇದಕ್ಕೆ ಚೌಡಯ್ಯ ಮತ್ತು ಮಹದೇವ ಸಹಕಾರ ನೀಡಿದ್ದಾರೆ ಎಂದು ಮಹೇಶ್‌ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಬಾಯಿಬಿಟ್ಟಿದ್ದಾನೆ. ಕೊಲೆ ಮಾಡಿರುವ ವಿಷಯವನ್ನು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಎಸ್ಪಿ ರಿಷ್ಯಂತ್ ತಿಳಿಸಿದರು.
ತಿ.ನರಸೀಪುರ ತಾಲೂಕಿನ ಅಲಗೂಡು ಗ್ರಾಮದ ಮಹೇಶ್ ಅಲಿಯಾಸ್ ದೇವರಗುಡ್ಡ (38), ಅಕ್ಕೂರು ದೊಡ್ಡಿ ಗ್ರಾಮದ ಸೋಮ (34), ಮಹದೇವ ಅಲಿಯಾಸ್ ಮಹದೇವ ನಾಯಕ(50), ಹೆಮ್ಮಿಗೆ ಗ್ರಾಮದ ಚೌಡಯ್ಯ (58) ಬಂಧಿತರಾಗಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ನಿನ್ನೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹೂತಿಟ್ಟ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ
ಈತನ ಬಂಧನ ವಿಷಯ ತಿಳಿಯುತ್ತಿದ್ದಂತೆ ತಲಕಾಡಿನ ಮರಳಿನ ಪುಟ್ಟ ದ್ವೀಪದಲ್ಲಿ ಅವಿತುಕೊಂಡಿದ್ದ ಸೋಮನನ್ನು ಸೆರೆಹಿಡಿದ ಪೊಲೀಸರು, ನಂತರ ಚೌಡಯ್ಯ ಮತ್ತು ಮಹದೇವನನ್ನು ಬಂಧಿಸಿದ್ದಾರೆ.
ಹೂತಿಟ್ಟ ಶವವನ್ನು ಹೊರತೆಗೆದು ಮೈಸೂರು ಉಪವಿಭಾಗಾಧಿಕಾರಿ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಕೃತ್ಯಕ್ಕೆ ಉಪಯೋಗಿಸಿದ್ದ ಆಯುಧ(ಸಲಿಕೆ), ಮೊಬೈಲ್‌ಗಳು, ಮೃತರ ತಾಳಿ, ಕರಿಮಣಿ ಸರವನ್ನು ವಶಪಡಿಸಿಕೊಳ್ಳಲಾಗಿದೆ.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications