ಸಾಮೂಹಿಕ ವಿವಾಹಕ್ಕೆ ನೋಂದಾವಣಿ ಮತ್ತಿತರ ಸುದ್ದಿ

ಮೈಸೂರು, ಜೂನ್ 30 : ಜಿಲ್ಲಾಡಳಿತದ ವತಿಯಿಂದ ಆಗಸ್ಟ್ ಮೊದಲ ವಾರದಲ್ಲಿ ಚಾಮುಂಡಿಬೆಟ್ಟದಲ್ಲಿ ನಡೆಯುವ ಸರಳ ಸಾಮೂಹಿಕ ವಿವಾಹಕ್ಕೆ ಆಯಾಯ ತಹಶೀಲ್ದಾರ್ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವ ದಿನಾಂಕವನ್ನು ವಿಸ್ತರಿಸಲಾಗಿದ್ದು, ಆಸಕ್ತರು ಜುಲೈ 10ರವರೆಗೆ ಹೆಸರು ನೋಂದಾಯಿಸಿಕೊಳ್ಳಬಹುದು.

ಆಗಸ್ಟ್ 5ರೊಳಗಾಗಿ ದಾಖಲಾತಿ ಸಲ್ಲಿಸಿ

2017-18ನೇ ಸಾಲಿಗೆ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ, ಖಾದಿ ಮತ್ತು ಗ್ರಾಮೋದ್ಯೋಗ ಮತ್ತು ಮಂಡಳಿ ಮತ್ತು ಖಾದಿ ಗ್ರಾಮೋದ್ಯೋಗ ಆಯೋಗದ ವತಿಯಿಂದ ಆಯ್ದ ಕೈಗಾರಿಕೆ ಹಾಗೂ ಸೇವಾ ಚಟುವಟಿಕೆಗಳಿಗೆ www.kvic.org.in ಅಥವಾ PMEGP online appliction ವೆಬ್‍ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು.

Mass marriage at Chamundi hills and other Mysuru news

ಅರ್ಜಿಗಳನ್ನು ಆನ್‍ಲೈನ್ ಮುಖಾಂತರ ಜುಲೈ 31ರೊಳಗೆ ಸಲ್ಲಿಸಿದ ಅರ್ಜಿಗಳಿಗೆ ಮಾತ್ರ ಸಂದರ್ಶನಕ್ಕೆ ಪರಿಗಣಿಸಲಾಗುವುದೆಂದು. ಅಗತ್ಯ ದಾಖಲಾತಿಗಳನ್ನು ದ್ವಿಪ್ರತಿಯಲ್ಲಿ ಆಯಾಯ ಕಚೇರಿಗಳಿಗೆ ಆಗಸ್ಟ್ 5ರೊಳಗೆ ಸಲ್ಲಿಸುವುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ - 0821-2520886.

ಸಾಂಸ್ಕೃತಿಕ ಕಲಾತಂಡಗಳ ನೋಂದಣಿ ವಿಸ್ತರಣೆ

ಭಾರತ ಸರ್ಕಾರದ ಸಾಂಗ್ ಅಂಡ್ ಡ್ರಾಮ್ ವಿಭಾಗದಿಂದ ಕಲಾತಂಡಗಳ ಹಾಗೂ ಕಲಾವಿದರ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದ್ದು, ಅರ್ಜಿಯನ್ನು ಜುಲೈ 25ರವರೆಗೆ ಸಲ್ಲಿಸಬಹುದಾಗಿದೆ ಎಂದು ಸಾಂಗ್ ಅಂಡ್ ಡ್ರಾಮ್ ವಿಭಾಗದ ಜಿ.ಜೈಕುಮಾರ್ ತಿಳಿಸಿದ್ದಾರೆ.

ಸಿದ್ದಲಿಂಗಯ್ಯ ಮೈಸೂರು ಪ್ರವಾಸ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಅವರು ಜುಲೈ 4ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಮೈಸೂರಿನ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯದಲ್ಲಿ ಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 12-30 ಗಂಟೆಗೆ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ ಭೇಟಿ ನೀಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+