ಮೈಸೂರು ಮೇಯರ್ ಚುನಾವಣೆ: ಹೈಕೋರ್ಟ್ ನಿಂದ ಗ್ರೀನ್ ಸಿಗ್ನಲ್

ಮೈಸೂರು, ಫೆಬ್ರವರಿ 23: ಮೈಸೂರು ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಮೈಸೂರು ಮಹಾನಗರ ಪಾಲಿಕೆ ಮೇಯರ್ ಮೀಸಲಾತಿ ಪ್ರಶ್ನಿಸಿ ಪಾಲಿಕೆ ಸದಸ್ಯರೊಬ್ಬರು ರಿಟ್ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಚುನಾವಣೆ ನಡೆಸಲು ಹಸಿರು ನಿಶಾನೆ ನೀಡಿದೆ.

ಅಲ್ಲದೇ ನಿಗದಿತ ದಿನಾಂಕದಂದು ಚುನಾವಣೆ ನಡೆಸಲು ನ್ಯಾಯಾಲಯ ಹಸಿರು ನಿಶಾನೆ ನೀಡಿತು. ಮೈಸೂರು ಮೇಯರ್ ಮೀಸಲಾತಿ ಪ್ರಶ್ನಿಸಿ ಸಮೀವುಲ್ಲಾ ಎಂಬುವವರು ರಿಟ್ ಅರ್ಜಿ ಸಲ್ಲಿಸಿದ್ದರು.

Mysuru Mayor Election: Green Signal From High Court

2018ರಿಂದ ಸತತವಾಗಿ ಮೇಯರ್ ಸ್ಥಾನವನ್ನು ಮಹಿಳೆಗೆ ಮೀಸಲಿರಿಸಲಾಗಿದೆ. 2018ರ ಜ.24ರಿಂದ ನ.17ರವರೆಗೆ ಎಸ್ಸಿ-ಮಹಿಳೆ, ಸಾಮಾನ್ಯ-ಮಹಿಳೆ ಮೀಸಲು ನಿಗದಿಪಡಿಸಲಾಗಿತ್ತು. 2020ರಲ್ಲಿ ಬಿಸಿಎ-ಮಹಿಳೆ ಇತ್ತು.

ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ 'ಸಾಮಾನ್ಯ-ಮಹಿಳೆ' ಮೀಸಲು ನಿಗದಿಪಡಿಸಿ 2021ರ ಫೆ.11ರಂದು ನಗರಾಭಿವೃದ್ಧಿ ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ರಿಟ್ ಅರ್ಜಿಯಲ್ಲಿ ಪ್ರಶ್ನಿಸಲಾಗಿತ್ತು. ಆದರೆ ಹೈಕೋರ್ಟ್ ಚುನಾವಣೆಗೆ ಯಾವುದೇ ಅಡೆತಡೆ ನೀಡಿಲ್ಲ.

ಇದೇ ಬುಧವಾರ (ಫೆ.24) ರಂದು ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ನಡೆಯಲಿದ್ದು, ಸಾಮಾನ್ಯ ಮಹಿಳೆಗೆ ಮೀಸಲಾತಿ ಒಲಿದು ಬಂದಿದೆ. ಸದ್ಯದ ಮಾಹಿತಿ ಪ್ರಕಾರ ಜೆಡಿಎಸ್-ಬಿಜೆಪಿ ಪಕ್ಷಗಳು ಮೇಯರ್ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಸುಳಿವು ಸಿಕ್ಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+