ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಚುರುಕುಗೊಂಡ ತನಿಖೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಆಗಸ್ಟ್ 26; ಸಾಂಸ್ಕೃತಿಕ ನಗರಿ ಮೈಸೂರನ್ನು ಬೆಚ್ಚಿಬೀಳಿಸಿದ್ದ ವಿದ್ಯಾರ್ಥಿನಿಯ ಗ್ಯಾಂಗ್ ರೇಪ್ ಪ್ರಕರಣದ ತನಿಖೆ ಚುರುಕುಗೊಂಡಿದೆ. ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು, ದುಷ್ಕೃತ್ಯವೆಸಗಿರುವ ಕಾಮುಕರ ಬಂಧನಕ್ಕೆ ಟೊಂಕ ಕಟ್ಟಿದ್ದಾರೆ.

ಗ್ಯಾಂಗ್ ರೇಪ್ ಕುರಿತು ಈಗಾಗಲೇ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಚುರುಕುಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಘಟನಾ ಸ್ಥಳದ ಮೊಬೈಲ್ ಲೊಕೇಶ್ ಪರಿಶೀಲನೆಯಲ್ಲಿ‌ ತೊಡಗಿರುವ ಪೊಲೀಸರು, ಆಗಸ್ಟ್ 24ರಂದು ಸಂಜೆ 6.30ರಿಂದ 7.30ರವರೆಗೆ ಗ್ಯಾಂಗ್ ರೇಪ್ ನಡೆದಿದೆ ಎನ್ನಲಾಗಿರುವ ಸ್ಥಳದ ಸುತ್ತಮುತ್ತಲಿನಲ್ಲಿ ಮೊಬೈಲ್ ಬಳಕೆಯ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಅತ್ಯಾಚಾರ ಪ್ರಕರಣ: ಶುಕ್ರವಾರ ಮೈಸೂರು ಪೊಲೀಸರ ಸಭೆ ಕರೆದ ಗೃಹ ಸಚಿವ ಆರಗ ಜ್ಞಾನೇಂದ್ರಅತ್ಯಾಚಾರ ಪ್ರಕರಣ: ಶುಕ್ರವಾರ ಮೈಸೂರು ಪೊಲೀಸರ ಸಭೆ ಕರೆದ ಗೃಹ ಸಚಿವ ಆರಗ ಜ್ಞಾನೇಂದ್ರ

ಮೊಬೈಲ್ ಪೋನ್‌ ಬಳಕೆಯ ಆಧಾರದ ಮೇಲೆ ಆರೋಪಿಗಳ ಪತ್ತೆಗೆ ಮುಂದಾಗಿರುವ ಪೊಲೀಸರು, ಮೊಬೈಲ್ ಟವರ್ ಲೊಕೇಶನ್ ಟ್ರೇಸಿಂಗ್ ಮೂಲಕ ತನಿಖೆ ನಡೆಸಿ, ಆರೋಪಿಗಳ ಗುರುತು ಪತ್ತೆಗೆ ಮುಂದಾಗಿದ್ದಾರೆ. ಮಂಗಳವಾರ ರಾತ್ರಿ ಎಂಬಿಎ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಬುಧವಾರ ಘಟನೆ ಬೆಳಕಿಗೆ ಬಂದಿತ್ತು.

 ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ವಿದ್ಯಾರ್ಥಿನಿಯ ಗೆಳೆಯ ಹೇಳಿದ್ದೇನು? ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ವಿದ್ಯಾರ್ಥಿನಿಯ ಗೆಳೆಯ ಹೇಳಿದ್ದೇನು?

MBA Student Gangrape In Mysuru Probe In Full Swing

ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಈ ವೇಳೆ ದುಷ್ಕರ್ಮಿಗಳು ಮದ್ಯಪಾನ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಹೀಗಾಗಿ ಕೃತ್ಯ ನಡೆದ ಸ್ಥಳದಲ್ಲೇ ಆರೋಪಿಗಳು ಸಾಕಷ್ಟು ಸಮಯ ಕಳೆದಿರುವ ಕಾರಣದಿಂದ ಹೆಚ್ಚಾಗಿ ಮೊಬೈಲ್ ಬಳಕೆ ಮಾಡಿರುವ ಸಾಧ್ಯತೆಯಿಂದ ಲೊಕೇಶನ್ ಹಾಗೂ ಪೋನ್‌ ಕರೆಗಳ ಪರಿಶೀಲನೆಗೆ ಪೊಲೀಸರು ತೀರ್ಮಾನಿಸಿದ್ದಾರೆ.

ಬೆದರಿಕೆ ಹಾಕಿದ್ದರು; ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ಆರಂಭಗೊಂಡ ಬೆನ್ನಲ್ಲೇ ಸಾಕಷ್ಟು ಮಾಹಿತಿ ಹೊರಬೀಳುತ್ತಿದೆ. ಈ ಪೈಕಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಕಿರಾತಕರು, ಈ ಕುರಿತು ದೂರು ಕೊಡದಂತೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಮೈಸೂರಿನಲ್ಲಿ ಅತ್ಯಾಚಾರ; ಸರ್ಕಾರದ ಕಿವಿ ಹಿಂಡಿದ ಸಿದ್ದರಾಮಯ್ಯ! ಮೈಸೂರಿನಲ್ಲಿ ಅತ್ಯಾಚಾರ; ಸರ್ಕಾರದ ಕಿವಿ ಹಿಂಡಿದ ಸಿದ್ದರಾಮಯ್ಯ!

ಅಲ್ಲದೇ ಯುವತಿ ಮೇಲೆ ಗ್ಯಾಂಗ್ ರೇಪ್ ಮಾಡಿರುವ ಕಾಮುಕರು ವೀಡಿಯೋ ಕೂಡ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಇದನ್ನು ಮುಂದಿಟ್ಟುಕೊಂಡು ಪೊಲೀಸರಿಗೆ ದೂರು ಕೊಡದಂತೆ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಂದೊಮ್ಮೆ ದೂರು ಕೊಟ್ಟಿದ್ದೆ ಆದಲ್ಲಿ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿಯೂ ಬೆದರಿಕೆ ಹಾಕಿದ್ದರು ಎಂಬ ಮಾಹಿತಿ ಸಿಕ್ಕಿದೆ.

ಹಣಕ್ಕೆ ಬೇಡಿಕೆ ಇಟ್ಟಿದ್ದರು; ಎಂಬಿಎ ವಿದ್ಯಾರ್ಥಿನಿ ಅತ್ಯಾಚಾರ ನಡೆಸಿದ ನಡೆಸಿದ ಪಾಪಿಗಳು ವಿದ್ಯಾರ್ಥಿನಿಯಿಂದ 3 ಲಕ್ಷ ರೂ.‌ ಹಣಕ್ಕೆ ಬೇಡಿಕೆ ಇಟ್ಟಿದ್ದರ ಬಗ್ಗೆಯೂ ಮಾಹಿತಿ ಲಭ್ಯವಾಗುತ್ತಿದೆ.

ಅಲ್ಲದೇ ಕಾಮುಕರ ಒತ್ತಾಯಕ್ಕೆ ಮಣಿದ ಸಂತ್ರಸ್ತ ಯುವತಿ ಹಾಗೂ ಆಕೆಯ ಸ್ನೇಹಿತ ಹಣ ಕೊಡುವುದಾಗಿ ಒಪ್ಪಿದ್ದರು.‌ ಆದರೆ ಘಟನೆ ನಡೆದ 2 ಗಂಟೆಯ ಬಳಿಕವೂ ಹಣ ನೀಡದಿದ್ದಾಗ ಸಂತ್ರಸ್ತ ವಿದ್ಯಾರ್ಥಿನಿ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದ ಕಿರಾತಕರು, ಕಲ್ಲಿನಿಂದ ಹಲ್ಲೆ‌ ಮಾಡಿ ಇಬ್ಬರ ಮೊಬೈಲ್ ಕಿತ್ತುಕೊಂಡಿದ್ದರು.

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಎಡಿಜಿಪಿ ಪ್ರತಾಪ್ ರೆಡ್ಡಿ ಸ್ಥಳಕ್ಕೆ ಭೇಟಿ ನೀಡುವ ಮೂಲಕ ಪ್ರಕರಣದ ಮಾಹಿತಿ ಪಡೆದಿದ್ದಾರೆ. ಇವರೊಂದಿಗೆ ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ ಸಹ ಸ್ಥಳಕ್ಕೆ ಭೇಟಿ ನೀಡಿ, ಮತ್ತಷ್ಟು ಸಾಕ್ಷಿ ಸಂಗ್ರಹಕ್ಕೆ ಮುಂದಾಗಿದ್ದಾರೆ.

ಗೃಹ ಸಚಿವರ ಭೇಟಿ; ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಳೆದ ಕೆಲವು ದಿನಗಳಿಂದ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು, ಅದರಲ್ಲೂ ಇತ್ತೀಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ದರೋಡೆ ಪ್ರಕರಣ ಮೈಸೂರಿಗರನ್ನ ಆತಂಕಕ್ಕೆ ದೂಡಿದೆ‌.‌

ಈ ಹಿನ್ನೆಲೆ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಇಂದು ಸಂಜೆ ಮೈಸೂರಿಗೆ ಆಗಮಿಸಲಿರುವ ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜ್ಯುವೆಲರಿ ಅಂಗಡಿಯಲ್ಲಿ ನಡೆದ ಶೂಟ್‌ ಔಟ್ ಹಾಗೂ ಅತ್ಯಾಚಾರ ಪ್ರಕರಣದ ಕುರಿತು ಮಾಹಿತಿ ಪಡೆಯಲಿದ್ದಾರೆ.

ಅನೈತಿಕ ಚಟುವಟಿಕೆಗಳ ತಾಣ; ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಕುರಿತು ತನಿಖೆ ಆರಂಭವಾಗಿರುವ ಬೆನ್ನಲ್ಲೇ ಪ್ರಕರಣ ನಡೆದ ಸ್ಥಳ ಅನೈತಿಕ ಚಟುವಟಿಕೆಗಳ ತಾಣವಾಗಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಸಾಮೂಹಿಕ ಅತ್ಯಾಚಾರ ನಡೆದ ಸ್ಥಳದಲ್ಲಿ ಸಿಕ್ಕಿರುವ ಮದ್ಯದ ಬಾಟಲ್‌, ಕಾಂಡೋಮ್ ಇದಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ. ಮೈಸೂರಿನ ಹೊರವಲಯದ ಲಲಿತಾದ್ರಿಪುರ ಸಮೀಪದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಸಂಜೆ ವೇಳೆ ನಿರಂತರವಾಗಿ ಪಾರ್ಟಿ ನಡೆಯುವ ಜೊತೆಗೆ ಅನೈತಿಕ ಚಟುವಟಿಕೆಗಳು ಸಹ ನಡೆದಿದೆ. ಆದರೆ ಜನವಸತಿ ಪ್ರದೇಶದಿಂದ‌ ಕೂಗಳತೆ ದೂರದಲ್ಲೇ ಇಷ್ಟೆಲ್ಲಾ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದರೂ ಪೊಲೀಸರು ಕಣ್ಣುಮುಚ್ಚಿ ಕುಳಿತಿದ್ದಾರಾ? ಎಂಬ ಅನುಮಾನ ಕೂಡ ವ್ಯಕ್ತವಾಗುತ್ತಿದೆ.

English summary
Police probe in full swing in Mysuru MBA student gang rape case. MBA student was allegedly gangraped by five unidentified persons in Mysuru on Tuesday night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X