ಮೈಸೂರಿನಲ್ಲಿ ಹೆಂಡತಿ ಗೆದ್ದಿದ್ದಕ್ಕೆ ಪತಿಗೆ ನಡುರಸ್ತೆಯಲ್ಲೇ ಕ್ಷೀರಾಭಿಷೇಕ

ಮೈಸೂರು, ಸೆಪ್ಟೆಂಬರ್.4: ಮೈಸೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು ತಮ್ಮ ಅಂದಾಭಿಮಾನ ಪ್ರದರ್ಶಿಸಿರುವ ಘಟನೆ ನಡೆದಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಹಿಳಾ ಅಭ್ಯರ್ಥಿ ಗೆಲುವು ಸಾಧಿಸಿದ್ದಕ್ಕೆ ಆಕೆಯ ಪತಿಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಮೈಸೂರು ಮಹಾನಗರ ಪಾಲಿಕೆ 36ನೇ ವಾರ್ಡ್ ಸದಸ್ಯೆಯಾಗಿ ರುಕ್ಮಿಣಿ ಆಯ್ಕೆಯಾಗಿದ್ದಾರೆ. ನೂತನ ಸದಸ್ಯೆ ರುಕ್ಮಿಣಿ ಮಾದೇಗೌಡ ಅವರ ಪತಿ ಮಾದೇಗೌಡರಿಗೆ ಅಭಿಮಾನಿಗಳು ಎರಡು ಬಿಂದಿಗೆಯಲ್ಲಿ ಹಾಲಿನ ಅಭಿಷೇಕ ಮಾಡಿದ್ದಾರೆ.

ಮಾದೇಗೌಡ ಶ್ರೀರಾಂಪುರ ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದು, ಯರಗನಹಳ್ಳಿ ವಾರ್ಡ್ ನ ಕೃಷ್ಣ ದೇವಸ್ಥಾನದ ಬಳಿ ಹಾಲಿನ ಅಭಿಷೇಕ ಮಾಡಲಾಗಿದೆ.

Milks anointed video is now viral in social media

"ಜನ ಕುಡಿಯುವ ಹಾಲನ್ನು ಅಭಿಷೇಕ ಮಾಡಿರುವುದು ನಾಚಿಕೆಗೇಡಿನ ವಿಷಯ. ಅಧಿಕಾರ ಸಿಕ್ಕ ತಕ್ಷಣ ಈ ರೀತಿ ಮಾಡುವುದು ಸರಿಯಲ್ಲ. ಅಭಿಮಾನಿಗಳು ಈ ರೀತಿ ಮಾಡುವುದನ್ನು ಅವರು ತಡೆಯಬಹುದು. ಆದರೆ ಅವರೂ ತಮ್ಮ ಕಾರ್ಯಕರ್ತರಿಗೆ ಬುದ್ಧಿ ಮಾತನ್ನು ಹೇಳಲಿಲ್ಲ" ಎಂದು ಜನರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.

Milks anointed video is now viral in social media

ಅಭಿಷೇಕ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಎಲ್ಲೆಡೆ ವೈರಲ್ ಆಗಿದ್ದು, ಈ ವಿಡಿಯೋ ನೋಡಿದ ಎಲ್ಲರೂ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+