ಮೈಸೂರು; ಮಿನಿ ಪಾಕಿಸ್ತಾನ ಘೋಷಣೆ, ಇಬ್ಬರ ಬಂಧನ
ಮೈಸೂರು, ಮೇ 06; 'ಇದು ಮಿನಿ ಪಾಕಿಸ್ತಾನ್' ಎಂಬ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ದೊಡ್ಡಕವಲಂದೆ ಗ್ರಾಮದ ನಿವಾಸಿ ಅನಾನ್ ಅಲಿಖಾನ್ (25) ಹಾಗೂ ಫಯಾಜ್ ಶರೀಫ್(23) ಬಂಧಿತರು. ಇವರನ್ನು ಶುಕ್ರವಾರ ಸಂಜೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕವಲಂದೆ ಠಾಣೆ ಪಿಎಸ್‌ಐ ಮಹೇಂದ್ರ ನೇತೃತ್ವದಲ್ಲಿ ಇಬ್ಬರು ಆರೋಪಿಗಳನ್ನು ಶುಕ್ರವಾರ ವಿಡಿಯೋ ಚಿತ್ರೀಕರಣ ನಡೆಸಿದ್ದ ಸ್ಥಳಕ್ಕೆ ಕರೆದುಕೊಂಡು ಹೋಗಿ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಇಬ್ಬರು ಆರೋಪಿಗಳನ್ನು ಶುಕ್ರವಾರ ಸಂಜೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.

ಬಂಧಿತ ಆರೋಪಿಗಳಲ್ಲಿ ಅನಾನ್ ಅಲಿಖಾನ್ ಎಸ್‌ಎಸ್‌ಎಲ್‌ಸಿಯಲ್ಲಿ ಅನುತ್ತೀರ್ಣನಾಗಿದ್ದ. ಫಯಾಜ್ ಶರೀಫ್ ಐಟಿಐ ವ್ಯಾಸಂಗ ಅರ್ಧಕ್ಕೆ ಮೊಟಕುಗೊಳಿಸಿ ಸ್ಥಳೀಯವಾಗಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ.
ರಂಜಾನ್ ಮೆರವಣಿಗೆ ವೇಳೆ ಇವರು 'ಇದು ಮಿನಿ ಪಾಕಿಸ್ತಾನ್' ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಸಂಬಂಧ ನಂಜನಗೂಡು ನಗರಸಭೆ ಸದಸ್ಯ ಕಪಿಲೇಶ್ ಅವರು ಸಾರ್ವಜನಿಕರಲ್ಲಿ ಅಶಾಂತಿ ಮೂಡಿಸುವ ಹಾಗೂ ದೇಶಭಕ್ತಿ, ಸಾಮರಸ್ಯಕ್ಕೆ ಧಕ್ಕೆ ತರುವ ರೀತಿ ನಡೆದುಕೊಂಡಿರುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಗುರುವಾರ ಪೊಲೀಸರಿಗೆ ದೂರು ನೀಡಿದ್ದರು.












Click it and Unblock the Notifications