ಕಾಲೇಜು ವಿದ್ಯಾರ್ಥಿಗಳಿಗೆ ಪ್ರೀತಿ ಪಾಠ ಮಾಡಿದ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ
ಮೈಸೂರು, ಜುಲೈ 21 : ಉನ್ನತ ಶಿಕ್ಷಣ ಸಚಿವ ಗಂಭೀರವದನ ಜಿ.ಟಿ.ದೇವೇಗೌಡ ಅವರು ಇಂದು ಪ್ರೀತಿ ಕಲಿಸುವ ಮೇಷ್ಟ್ರಾಗಿ ಬದಲಾಗಿದ್ದರು. ಹೌದು, ಅವರಿಂದು ಕಾಲೇಜು ವಿದ್ಯಾರ್ಥಿಗಳಿಗೆ ಪ್ರೀತಿ ಪಾಠ ಮಾಡಿದರು.
ಪ್ರೀತಿ ಎಂದರೇನು ಎಬುದೇ ಕೆಲರಿಗೆ ಗೊತ್ತಿಲ್ಲ, ಪ್ರೀತಿ ಮಾಡಿ ಓಡಿ ಹೋಗುವುದನ್ನೇ ನಿಜವಾದ ಪ್ರೇಮ ಎಂದು ತಪ್ಪು ತಿಳಿದುಕೊಂಡಿದ್ದಾರೆ. ಎಲ್ಲಾ ಸಮಯದಲ್ಲೂ ಒಬ್ಬರನ್ನೊಬ್ಬರು ಗೌರವದಿಂದ, ಸಮಾನವಾಗಿ ಕಾಣುವುದೇ ಪ್ರೀತಿ ಎಂದು ಅವರು ವ್ಯಾಖ್ಯಾನಿಸಿದರು.
ಪರಸ್ಪರ ಆಕರ್ಷಣೆಯೇ ಪ್ರೀತಿಯಲ್ಲ ಎಂದ ಅವರು, ಕೆಲ ವರ್ಷಗಳ ಹಿಂದೆ ವರನಿಗೆ ವರದಕ್ಷಿಣೆ ನೀಡುವ ಪರಿ ಪಾಠವಿತ್ತು. ಆದರೆ ಈಗ ವಧು ದಕ್ಷಿಣೆ ಕೊಟ್ಟು ಮದುವೆ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಬದಲಾದ ಪರಿಸ್ಥಿತಿ ಬಗ್ಗೆ ವ್ಯಂಗ್ಯ ಮಾಡಿದರು.

ಪೋಷಕರು ಮಕ್ಕಳಿಗೆ ಕಷ್ಟಪಟ್ಟು ಶಿಕ್ಷಣ ಕೊಡಿಸುತ್ತಾರೆ. ಆ ಮಕ್ಕಳು ಪೋಷಕರಿಗೂ, ಗ್ರಾಮಕ್ಕೂ, ಕಾಲೇಜಿಗೂ ಒಳ್ಳೆಯ ಹೆಸರು ಬರುವಂತೆ ಸಾಧನೆ ಮಾಡಬೇಕೆಂದು ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಪ್ರೀತಿಯ ಹೆಸರಿನಲ್ಲಿ ಮನೆ ಬಿಟ್ಟು ಓಡಿ ಹೋಗುವುದು ಸರಿಯಾದ ಕ್ರಮವಲ್ಲ ಎಂದ ಅವರು. ಈಗಿನ ಕಾಲದಲ್ಲಿ ಪ್ರೀತಿಸಿ ಮದುವೆಯಾಗುವದಕ್ಕೆ ಜಾತಿಗಳು ಅಡ್ಡಿಯಿಲ್ಲ. ಆದರೆ ಉತ್ತಮ ಗುಣಗಳು, ಉತ್ತಮ ನಡವಳಿಕೆ ಇರುವ ಜೀವನ ಸಂಗಾತಿಯನ್ನು ನೀವು ಹುಡುಕಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿದ್ಯಾವಂತರಾಗಿ ನೀವೇ ನಿಮ್ಮ ಸಂಗಾತಿಯ ಆಯ್ಕೆಯಲ್ಲಿ ತಪ್ಪು ದಾರಿ ತುಳಿಯಬಾರದು. ಬಹಳಷ್ಟು ಜನ ಪ್ರೀತಿಸಿ ಅದ್ಧೂರಿಯಿಂದ ಮದುವೆಯಾಗುತ್ತಾರೆ. ಆದರೆ ಮದುವೆಯಾಗಿ ಕೆಲವು ದಿನದಲ್ಲೇ ಡಿವೋರ್ಸ್ ನೀಡುತ್ತಾರೆ. ಈಗಿನ ವಕೀಲರು ಹಾಗೂ ಪೊಲೀಸರಿಗೆ ಡಿವೋರ್ಸ್ ಕೇಸ್‌ಗಳೇ ಹೆಚ್ಚಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications