ಅನಂತ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ ಸಚಿವ ಜಿಟಿ ದೇವೇಗೌಡ
Recommended Video

ಮೈಸೂರು, ನವೆಂಬರ್.12: ಕೇಂದ್ರ ಸಂಸದೀಯ ವ್ಯವಹಾರ ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ನಿಧನದ ಸುದ್ದಿ ಕೇಳಿ ನನ್ನ ಮನಸ್ಸಿಗೆ ನೋವುಂಟಾಗಿದೆ. ಇವರ ಕುಟುಂಬಕ್ಕೆ ತಾಯಿ ಚಾಮುಂಡೇಶ್ವರಿ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿಟಿ ದೇವೇಗೌಡ ಪ್ರಾರ್ಥಿಸಿದ್ದಾರೆ.
ಬೆಂಗಳೂರು ದಕ್ಷಿಣದಿಂದ ಸತತವಾಗಿ ಲೋಕಸಭೆಗೆ ಆಯ್ಕೆಯಾಗುತ್ತಿದ್ದ ಜನಾನುರಾಗಿ ನಾಯಕನ ಹಠಾತ್ ನಿಧನದಿಂದ ಉತ್ತಮ ಸಂಸದೀಯ ಪಟುವನ್ನು ಕಳೆದುಕೊಂಡಂತಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಕಳೆದ ಕೆಲ ಸಮಯಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು.

ಕ್ಯಾನ್ಸರ್ ಚಿಕಿತ್ಸೆಗೆ ಕಳೆದ ಹಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಸೋಮವಾರ ಬೆಳಗಿನ ಜಾವ ಸುಮಾರು 3 ಗಂಟೆ ಸಮಯದಲ್ಲಿ ಆಸ್ಪತ್ರೆಯಲ್ಲೆ ಕೊನೆಯುಸಿರೆಳೆದಿದ್ದಾರೆ. ಅನಂತ್ ಕುಮಾರ್ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.












Click it and Unblock the Notifications