ದೇಸಿ ತಳಿಗಳ ಹಸು ಸಂರಕ್ಷಣೆಗೆ ಯದುವೀರ್ ಸಹಕಾರ
ಮೈಸೂರು, ಫೆಬ್ರವರಿ 17; ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ಮಾಡಿದರು. ಗೋಹತ್ಯೆ ನಿಷೇಧ ಕಾಯ್ದೆ ರಾಜ್ಯದಲ್ಲಿ ಜಾರಿಯಾಗಿದ್ದಕ್ಕೆ ಯದುವೀರ್ ಸಚಿವರಿಗೆ ಅಭಿನಂದನೆ ಸಲ್ಲಿಸಿದರು.
ಬುಧವಾರ ಮೈಸೂರಿನ ಅರಮನೆಯಲ್ಲಿ ಪ್ರಭು ಚವ್ಹಾಣ್ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಭೇಟಿ ಮಾಡಿದರು. ಅಮೃತ್ ಮಹಲ್ ತಳಿಗಳ ಬಗ್ಗೆ ಈ ಸಂದರ್ಭದಲ್ಲಿ ಚರ್ಚೆ ನಡೆಸಿದರು.
ಸುಮಾರು 45 ಸಾವಿರ ಎಕರೆ ಗೋಮಾಳ ಅಮೃತ್ ಮಹಲ್ ತಳಿಗಳ ಅಭಿವೃದ್ಧಿಗೆ ಮಿಸಲಿಡಲಾಗಿತ್ತು ಎಂದು ಯದುವೀರ್ ಹೇಳಿದರು. ಹಳ್ಳಿಕಾರ್ ಮತ್ತು ಅಮೃತ್ ಮಹಲ್ ತಳಿಗಳ ಸಂರಕ್ಷಣೆಗೆ ಎಲ್ಲಾ ರೀತಿಯ ಸಹಕಾರವನ್ನು ತಮ್ಮ ಭೇರುಂಡ ಫೌಂಡೇಷನ್ ವತಿಯಿಂದ ನೀಡುತ್ತೇವೆ ಎಂದು ಸಚಿವರಿಗೆ ಯದುವೀರ್ ಭರವಸೆ ನೀಡಿದರು.

ಯುದ್ಧದ ಸಂದರ್ಭದಲ್ಲಿ ಅಮೃತ್ ಮಹಲ್ ಗೋವುಗಳನ್ನು ಬಳಸಿಕೊಂಡು ವೈರಿಗಳನ್ನು ಹಿಮ್ಮೆಟ್ಟಿಸಿದ ಉದಾಹರಣೆಗಳಿವೆ ಎಂದು ಯದುವೀರ್ ಸಚಿವರ ಜೊತೆ ಚರ್ಚೆ ನಡೆಸಿದರು.
ಅಮೃತ್ ಮಹಲ್ ಕಾವಲಿನಲ್ಲಿ ಸುಮಾರು 5000 ಎಕರೆಯಲ್ಲಿ ಮೇವು ಬೆಳೆಯುವ ಉದ್ದೇಶವಿದೆ ಎಂದು ಸಚಿವರು ಮಾಹಿತಿ ನೀಡಿದರು. ಗೋಹತ್ಯೆ ನಿಷೇಧ ಕಾಯ್ದೆ ರಾಜ್ಯದಲ್ಲಿ ಜಾರಿಯಾಗಿದ್ದಕ್ಕೆ ಯದುವೀರ್ ಸಚಿವರಿಗೆ ಅಭಿನಂದನೆ ಸಲ್ಲಿಸಿದರು. ಈ ಕಾಯ್ದೆಯ ಅನುಷ್ಠಾನ ನಮ್ಮಲ್ಲಿರುವ ದೇಸಿ ತಳಿಗಳ ಸಂರಕ್ಷಣೆಗೆ ನಾಂದಿ ಹಾಡಿದಂತಾಗಿದೆ ಎಂದು ಯದುವೀರ್ ಹರ್ಷ ವ್ಯಕ್ತಪಡಿಸಿದರು.












Click it and Unblock the Notifications