ಎಚ್‌ಡಿ ಕೋಟೆ ತಾಲೂಕಿನ ಜನರಿಗೆ ಶೀಘ್ರದಲ್ಲೇ ಪುನರ್ವಸತಿ ಸೌಲಭ್ಯ; ಆರ್.ಅಶೋಕ್ ಭರವಸೆ
ಮೈಸೂರು, ನವೆಂಬರ್, 19: ಗ್ರಾಮೀಣ ಭಾಗದ ಜನರು ಇದ್ದಲ್ಲಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಸಮಸ್ಯೆಗಳನ್ನು ಬಗೆಹರಿಸಬೇಕು. ಇದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಮೈಸೂರಿನಲ್ಲಿ ತಿಳಿಸಿದರು. ಹಾಗೆಯೇ ಎಚ್‌ಡಿ ಕೋಟೆ ತಾಲೂಕಿನ ಜನರಿಗ ಶೀಘ್ರದಲ್ಲೇ ಪುನರ್‌ವಸತಿ ಕಲ್ಪಿಸುತ್ತೇವೆ ಎಂದು ಭರವಸೆ ನೀಡಿದರು.
ಶನಿವಾರ ಎಚ್.ಡಿ ಕೋಟೆ ತಾಲೂಕಿನ ಭೀಮನ ಕೊಲ್ಲಿಯ ದೇವಸ್ಥಾನದ ಅವಣದಲ್ಲಿ ಹಮ್ಮಿಕೊಂಡಿದ್ದ ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮವಾಸ್ತವ್ಯ ಎನ್ನುವುದು ಪಾಠಶಾಲೆ ಇದ್ದ ಹಾಗೆ. ಗ್ರಾಮ ವಾಸ್ತವ್ಯದಿಂದ ಹಳ್ಳಿಯ ಜನರ ಸಮಸ್ಯೆಗಳನ್ನು ಅರಿಯಲು ಸಾಧ್ಯವಾಗುತ್ತದೆ. ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಎಚ್.ಡಿ ಕೋಟೆ ತಾಲೂಕು ಅರಣ್ಯ ಪ್ರದೇಶದ ಅಂಚಿನಲ್ಲಿದ್ದು, ಇಲ್ಲಿ ಪ್ರಾಣಿಗಳ ಮತ್ತು ಮನುಷ್ಯನ ನಡುವೆ ಸಂಘರ್ಷ ಇದೆ. ಇಂತಹ ಸಮಸ್ಯೆಗಳಿದ್ದರೂ ಜನರು ಇಲ್ಲಿನ ಪರಿಸರಕ್ಕೆ ಹೊಂದಿಕೊಂಡು ಜೀವನ ನಡೆಸುತ್ತಿದ್ದಾರೆ. ಈ ವ್ಯಾಪ್ತಿಯಲ್ಲಿ ಹಾಡಿಗಳು ಹೆಚ್ಚಾಗಿದ್ದು, ಗಿರಿಜನ ಹೆಚ್ಚಾಗಿ ವಾಸಿಸುತ್ತಾರೆ. ಹಾಡಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತನೆ ಮಾಡಿ ಗ್ರಾಮಗಳಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಸ್ಥಳದಲ್ಲಿ ವಾಸಿಸುವ ಜನರಿಗೆ ಮಾಶಾಸನ, ಪೌತಿ ಖಾತೆ ಬದಲಾವಣೆ, ಸೌಲಭ್ಯಗಳ ವಿತರಣೆ ಹಾಗೂ ಹಕ್ಕು ಪತ್ರಗಳ ವಿತರಣೆ ಮಾಡಲಾಗುವುದು. ಪೌತಿ ಖಾತೆ ಮಾಡುವಾಗ ಹೆಣ್ಣು ಮಕ್ಕಳ ಸಹಿ ಪಡೆಯುವುದು ಕಡ್ಡಾಯವಾಗಿದೆ. ಏಕೆಂದರೆ ಹೆಣ್ಣು ಮಕ್ಕಳಿಗೂ ತಂದೆ ಆಸ್ತಿಯಲ್ಲಿ ಸಮಾನ ಹಕ್ಕಿರುತ್ತದೆ ಎಂದು ತಿಳಿಸಿದರು.

ಜಾಗವನ್ನು ಖಾತೆ ಮಾಡಿ ಕೊಡುವ ಭರವಸೆ
ಬಡವರು ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡಿದ್ದರೆ, ಅಂತಹವರಿಗೆ 94 ಸಿ ಅಡಿಯಲ್ಲಿ ಆ ಜಾಗವನ್ನು ಖಾತೆ ಮಾಡಿ ಕೊಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಜಮೀನನ್ನು ಉಳಿಮೆ ಮಾಡುತ್ತಿದ್ದರೆ, ಈ ಹಿಂದೆ ಕ್ರಿಮಿನಲ್ ಪ್ರಕರಣದ ದಾಖಲಿಸಲಾಗುತ್ತಿತ್ತು. ಇದೀಗ ಯಾವುದೇ ಕ್ರಿಮಿನಲ್ ಪ್ರಕರಣ ದಾಖಲಿಸದಂತೆ ಕಾನೂನು ತಿದ್ದುಪಡಿ ಮಾಡಲಾಗಿದೆ. ಕೋಳಿ ಸಾಕಾಣಿಕೆಗೆ ಈ ಹಿಂದೆ ಭೂ ಪರಿವರ್ತನೆ ಮಾಡಿಸಬೇಕಿತ್ತು. ಆದರೆ ಕಾನೂನು ತಿದ್ದುಪಡಿ ಮಾಡಿ ಕೋಳಿ ಸಾಕಾಣಿಕೆಯನ್ನು ಕೃಷಿ ವ್ಯಾಪ್ತಿಗೆ ತರಲಾಗಿದೆ.
ಭೂಮಿಯನ್ನು ಖಾತೆ ಮಾಡಿಸಲು ಇದ್ದ 30 ದಿನಗಳ ಅವಧಿಯನ್ನು ಏಳು ದಿನಗಳಿಗೆ ಇಳಿಸಲಾಗಿದೆ. ಎಸ್‌ಸಿ, ಎಸ್‌ಟಿ ಸಮುದಾಯದವರಿಗೆ ಸರ್ಕಾರ ನೀಡಿರುವ ಜಮೀನಿನಲ್ಲಿ ಮನೆ ನಿರ್ಮಾಣಕ್ಕೆ ಭೂ ಪರಿವರ್ತನೆ ಮಾಡಿಕೊಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಮನೆ ನಿರ್ಮಿಸಿಕೊಳ್ಳಲು ಬ್ಯಾಂಕ್ ಸಾಲ ಪಡೆಯುವುದಕ್ಕಾಗಿ ಭೂ ಪರಿವರ್ತನೆ ಮಾಡಲು ಏಳು ದಿನಗಳೊಳಗೆ ಅವಕಾಶ ಕಲ್ಪಿಸಲಾಗಿದೆ. ಹಲೋ ಕಂದಾಯ ಸಚಿವರೇ ಸಹಾಯ ವಾಣಿಯ ಮೂಲಕ 72 ಗಂಟೆಗಳೊಳಗೆ ಹಿರಿಯ ನಾಗರೀಕರಿಗೆ ಪಿಂಚಣಿ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದರು.

ಮಳೆ ಹಾನಿಗೆ ಒಳಗಾದವರಿಗೆ ಪರಿಹಾರ
ಜಿಲ್ಲೆಯಲ್ಲಿ ಮಳೆ ಹನಿಗೊಳಗಾದ 3,060 ರೈತರಿಗೆ 2.5 ಕೋಟಿ ರೂಪಾಯಿ ಪರಿಹಾರ, 5,444 ಮನೆಗಳ ಹಾನಿಗೆ 45 ಕೋಟಿ ರೂಪಾಯಿ ಹಾಗೂ ಕೋವಿಡ್‌ನಿಂದ ಮೃತಪಟ್ಟ 3,644 ಕುಟುಂಬಗಳಿಗೆ ತಲಾ ಒಂದು ಲಕ್ಷದಂತೆ 27 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ.
ಎಚ್‌ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು ಮಾತನಾಡಿ, ಎಚ್‌ಡಿ ಕೋಟೆ ತಾಲೂಕಿನಲ್ಲಿ 120 ಹಾಡಿಗಳಿದ್ದು, ಇಲ್ಲಿ ಗಿರಿಜನರು ಹೆಚ್ಚಾಗಿ ವಾಸಿಸುತ್ತಾರೆ. ಸರ್ಕಾರಿ ಜಮೀನುಗಳಲ್ಲಿ ಇವರು ಮನೆಗಳನ್ನು ನಿರ್ಮಿಸಿಕೊಂಡಿದ್ದು, ಹಕ್ಕು ಪತ್ರಗಳನ್ನು ನೀಡಬೇಕು. ತಾಲೂಕಿನಲ್ಲಿ 48 ಪುನರ್‌ವಸತಿ ಗ್ರಾಮಗಳಿದ್ದು, ಇವುಗಳನ್ನು ಕಂದಾಯ ಗ್ರಾಮಗಳಾಗಿ ಘೋಷಣೆ ಮಾಡಬೇಕು. ಎಚ್‌ಡಿ ಕೋಟೆ ತಾಲೂಕು ವಿಸ್ತೀರ್ಣದಲ್ಲಿ ದೊಡ್ಡದಿದ್ದು, ವಿಸ್ತೀರ್ಣದ ಆಧಾರದಲ್ಲಿ ಹೆಚ್ಚಿನ ಅನುದಾನ ನೀಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.

ಎಲ್ಲರಿಗೂ ಸೌಲಭ್ಯ ಸಿಗುವಂತೆ ಕ್ರಮ
ಗ್ರಾಮ ವಾಸ್ತವ್ಯ ಕಾರ್ಯಕ್ರಮದಿಂದ ಜನರ ನಡುವೆ ಇದ್ದರೆ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಹೇಳಿದರು. ಶನಿವಾರ 7,000ಕ್ಕೂ ಹೆಚ್ಚು ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ. ಸ್ವೀಕಾರ ಮಾಡುವ ಅರ್ಜಿಗಳಲ್ಲಿ ಬಹುತೇಕ ಸ್ಥಳದಲ್ಲಿ ಪರಿಹಾರ ನೀಡಲಾಗುವುದು. ಉಳಿದ ಅರ್ಜಿಗಳಿಗೆ ಎರಡು ವಾರದೊಳಗೆ ಪರಿಹಾರಗಳನ್ನು ನೀಡಲಾಗುವುದು ಎಂದರು.

ಮಳಿಗೆಗಳನ್ನು ಉದ್ಘಾಟಿಸಿದ ಸಚಿವರು
ಎಚ್‌ಡಿ ಕೋಟೆ ತಾಲೂಕಿನಲ್ಲಿ ಕಂದಾಯ ಸಚಿವರಿಗೆ ಪೂರ್ಣ ಕುಂಭದ ಮೂಲಕ ಅದ್ದೂರಿ ಸ್ವಾಗತ ಮಾಡಲಾಯಿತು. ವಿವಿಧ ಇಲಾಖೆಗಳು ಸಾರ್ವಜನಿಕರಿಗೆ ನೀಡುವ ಸೌಲಭ್ಯಗಳ ಕುರಿತು ತೆರೆದಿರುವ ಮಳಿಗೆಗಳನ್ನು ಸಚಿವರು ಉದ್ಘಾಟಿಸಿದರು. ಅಲ್ಲದೇ ವೇದಿಕೆಯಲ್ಲಿ ವಿಕಲಚೇತನ ಫಲಾನುಭವಿಗಳಿಗೆ ಕೃತಕ ಕಾಲನ್ನು ಜೋಡಣೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಮೈಸೂರು ವಿಭಾಗಿಯ ಆಯುಕ್ತರಾದ ಪ್ರಕಾಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿಗಳಾದ ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಆರ್.ಚೇತನ್, ಅಪರ ಜಿಲ್ಲಾಧಿಕಾರಿಗಳಾದ ಮಂಜುನಾಥ್ ಸ್ವಾಮಿ, ಎನ್.ಬೇಗೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸುಶೀಲಮ್ಮ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ












Click it and Unblock the Notifications