ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಪಿಸಿಸಿ ವಿಸರ್ಜನೆ ಬಗ್ಗೆ ಪ್ರತಿಕ್ರಿಯೆಗೆ ಆರ್ ವಿ ದೇಶಪಾಂಡೆ ನಕಾರ

|
Google Oneindia Kannada News

ಮೈಸೂರು, ಜೂನ್ 20: ಕೆಪಿಸಿಸಿ ವಿಸರ್ಜನೆ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಕೇವಲ ಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಇದರಿಂದ ಪಕ್ಷದ ಸಂಘಟನೆಗೆ ಅನುಕೂಲ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.

 ಸಂತ್ರಸ್ತರಿಗೆ ಶೀಘ್ರ ಮನೆ ನೀಡಿ ಎಂದ ಕಂದಾಯ ಸಚಿವರು! ಸಂತ್ರಸ್ತರಿಗೆ ಶೀಘ್ರ ಮನೆ ನೀಡಿ ಎಂದ ಕಂದಾಯ ಸಚಿವರು!

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎಐಸಿಸಿ ಯಾವ ಕ್ರಮ ತೆಗೆದುಕೊಂಡರೂ ಸ್ವಾಗತಿಸುತ್ತೇನೆ ಎಂದರು. ಇದೇ ವೇಳೆ ಎಚ್.ಡಿ. ದೇವೇಗೌಡ, ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ರಾಹುಲ್ ಗಾಂಧಿಗೆ ಪರಸ್ಪರ ದೂರು ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ವಿರುದ್ಧ ದೂರು ಕೇವಲ ಉಹಾಪೋಹ. ರಾಹುಲ್ ಗಾಂಧಿಯ ಹುಟ್ಟುಹಬ್ಬಕ್ಕೆ ಶುಭಾಶಯ ಹೇಳಲು ಅವರು ಹೋಗಿದ್ದರಷ್ಟೆ ಎಂದರು.

Minister RV Deshpande refuses to react on KPCC Discharge

ಇದಕ್ಕೂ ಮುನ್ನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ರಾಜ್ಯದಲ್ಲಿ ಕಳೆದ 18 ವರ್ಷಗಳಿಂದ ಸರಿಯಾಗಿ ಮಳೆಯಾಗಿಲ್ಲ. 4 ವರ್ಷ ಮಾತ್ರ ಮಳೆಯಾಗಿದೆ. ಹೆಚ್ಚಿನ ಮಳೆಯಾಗಲಿ ಎಂದು ಈಶ್ವರ ಹಾಗೂ ತಾಯಿ ಚಾಮುಂಡಿಯಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಚಾಮುಂಡಿ ಬೆಟ್ಟಕ್ಕೆ ಭಕ್ತರ ಸಂಖ್ಯೆ ಜಾಸ್ತಿಯಾಗಿದೆ. ಬೆಟ್ಟಕ್ಕೆ ಮೂಲ ಸೌಕರ್ಯಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದರು.

English summary
I wont react to the discharge of kpcc.I am just performing my duty as minister. This would facilitate the unity of the party, said revenue Minister R.V. Deshpande.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X