• search
 • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

'ಕೊಡಗಿಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಅಭಿಯಾನಕ್ಕೆ ಯಾವುದೇ ಅರ್ಥವಿಲ್ಲ'

|
   ಹರ್ಷಿಕಾ ಪೂಣಚ್ಛ ಬಗ್ಗೆ ಮಾತನಾಡಿದ ಸಾ.ರಾ.ಮಹೇಶ್ | FILMIBEAT KANNADA

   ಮೈಸೂರು, ಜೂನ್ 17: ಕೊಡಗು ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಕೆಂಬ ಅಭಿಯಾನದ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸಾ ರಾ ಮಹೇಶ್ ಗರಂ ಆಗಿ ಮಾತನಾಡಿದ್ದಾರೆ. ಕೊಡಗಿಗೆ ತುರ್ತಾಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಕೆಂದು ಒತ್ತಾಯಿಸುವ ಅಭಿಯಾನಕ್ಕೆ ಅರ್ಥವೇ ಇಲ್ಲ ಎಂದು ಕಿಡಿಕಾರಿದ್ದಾರೆ.

   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರಿಗೆ ಪ್ರಚಾರದ ಹುಚ್ಚು. ಹೀಗಾಗಿ ಸುಮ್ಮನೆ ಮಾತನಾಡುತ್ತಾರೆ. ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೊಡಗು ಜಿಲ್ಲಾಸ್ಪತ್ರೆ ಅಭಿವೃದ್ಧಿಗೆ 100 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಇದಕ್ಕಾಗಿ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಹೀಗಿರುವಾಗ ಅಭಿಯಾನ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದಿದ್ದಾರೆ.

   ಕೊಡಗಿನಲ್ಲೂ ಆಸ್ಪತ್ರೆಗೆ ಅಭಿಯಾನ - ಸ್ಯಾಂಡಲ್ ವುಡ್ ಬೆಂಬಲ

   ಕೊಡಗು ಆಸ್ಪತ್ರೆ ಈಗ ಅಭಿವೃದ್ಧಿಯಾಗುತ್ತಿದೆ. ಈ ಹಂತದಲ್ಲಿ ಅಭಿಯಾನ ಮಾಡುತ್ತಿದ್ದಾರೆ. ಮುಂದೆ ಆಸ್ಪತ್ರೆ ಚೆನ್ನಾಗಿ ಆದರೆ ನಮ್ಮ ಒತ್ತಡದಿಂದಲೇ ಆಯಿತು ಎಂದು ಹೇಳಿಕೊಂಡು ತಿರುಗುತ್ತಾರೆ ಎಂದು ಅಭಿಯಾನ ಮಾಡುವವರ ವಿರುದ್ಧ ಸಾ ರಾ ಮಹೇಶ್ ತಿರುಗಿ ಬಿದ್ದಿದ್ದಾರೆ.

   ಕೊಡಗು ಸಂತ್ರಸ್ತರ ಮನೆಗಳ ಗುಣಮಟ್ಟದ ವಿಚಾರದ ಬಗ್ಗೆ ಹರ್ಷಿಕಾ ಪೂಣಚ್ಚ ವೀಡಿಯೋ ಹಿನ್ನೆಲೆ, ಅವರು ಯಾರು? ಅವರು ಯಾವ ಸಿನಿಮಾ ನಟಿ? ಅವರು ಸಿನಿಮಾ ಬಗ್ಗೆ ಮಾತ್ರ ಮಾತನಾಡಲಿ, ಕೊಡಗು ಸಂತ್ರಸ್ತರ ಮನೆಗಳ ಬಗ್ಗೆ ಹರ್ಷಿಕಾ ಪೂಣಚ್ಚರಿಗೆ ಏನು ಗೊತ್ತು? ವಾಸ್ತವ ಅರ್ಥ ಮಾಡಿಕೊಳ್ಳದೆ ತಜ್ಞರಂತೆ ಮಾತನಾಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

   ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

   English summary
   Tourism and Sericulture Minister Sa Ra Mahesh lashes out at Sandalwood actor Harshika Poonachcha for criticising the govt over the quality of houses constructed for Kodagu flood victims, says she should stick to cinema and not to speak like an expert and there is no meaning in this campaign he said.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more