ಕೊರೊನಾದಿಂದ ಯಾರೂ ಹಸಿವಿನಿಂದ ಇರಬಾರದು: ಸಚಿವ ಸೋಮಣ್ಣ
ಮೈಸೂರು, ಏಪ್ರಿಲ್ 01: ಲಾಕ್‌ಡೌನ್ ಹಿನ್ನೆಲೆಯಲ್ಲಿ ಯಾರೊಬ್ಬರೂ ಹಸಿವಿನಿಂದ ಇರಬಾರದು, ಅಗತ್ಯವಿರುವ ಎಲ್ಲರಿಗೂ ಕರ್ನಾಟಕ ಸರ್ಕಾರದ ವತಿಯಿಂದ ಊಟೋಪಚಾರ ವ್ಯವಸ್ಥೆಯಾಗುತ್ತದೆ ಎಂದು ವಸತಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ತಿಳಿಸಿದರು.
ನಂಜನಗೂಡಿನ ಕಾರ್ಖಾನೆಯೊಂದರಲ್ಲೇ ಹೆಚ್ಚಿನ ಕೋವಿಡ್-19 ಪ್ರಕರಣ ವರದಿಯಾದ ಹಿನ್ನೆಲೆಯಲ್ಲಿ, ಕಾರ್ಖಾನೆ ಆವರಣ ಹಾಗೂ ನಂಜನಗೂಡಿನ ಸುತ್ತಮುತ್ತಲಿನ ಪರಿಸ್ಥಿತಿಯನ್ನು ಅವಲೋಕಿಸಿ ಕಡಕೊಳದಲ್ಲಿರುವ ಕೆಇಬಿ ಇಂಜಿನಿಯರ್ಸ್ ಸಭಾಂಗಣದಲ್ಲಿ ಅವರು ಅಧಿಕಾರಿಗಳ ಸಭೆ ನಡೆಸಿದರು.
ಇದೊಂದು ರಾಷ್ಟ್ರೀಯ ವಿಕೋಪವಾಘಿದ್ದು, ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕೆಲಸಮಾಡಬೇಕು. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಕ್ವಾರಂಟೈನ್ನಲ್ಲಿರುವವರು ಹೊರಗಡೆ ಬರದಂತೆ ಎಚ್ಚರವಹಿಸಬೇಕೆಂದು ತಿಳಿಸಿದರು.

ಕ್ವಾರಂಟೈನ್ ನಲ್ಲಿರುವವರ ಮನೆಗಳಿಗೆ ಪೊಲೀಸರು ಪ್ರತಿದಿನ ಹೋಗಿ ಬರುತ್ತಾರೆ. ಅವರೊಟ್ಟಿಗೆ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಸಹ ಹೋಗಿ ಬರಬೇಕು. ನರ್ಸ್ ಗಳನ್ನು ಈ ಕೆಲಸಕ್ಕೆ ನಿಯೋಜಿಸಬಾರದು. ನರ್ಸ್ ಗಳನ್ನು ಆಸ್ಪತ್ರೆ ಕೆಲಸಗಳಿಗೆ ನಿಯೋಜಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆಯ 1,485 ನೌಕರರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಈ ಪೈಕಿ 761 ನಂಜನಗೂಡಿನವರು, 697 ನೌಕರರು ಇತರೆ ತಾಲ್ಲೂಕಿನವರು ಎಂದು ತಹಶೀಲ್ದಾರ್ ಮಹೇಶ್ ಮಾಹಿತಿ ನೀಡಿದರು. ನಂಜನಗೂಡು ಹಾಗೂ ಸುತ್ತಮುತ್ತ ಸ್ಯಾನಿಟೈಜರ್ ಸ್ಪ್ರೇ ಮಾಡಲಾಗಿದೆ. ಕೆಲವರನ್ನು ಖಾಸಗಿ ಹೋಟೆಲ್‌ಗಳಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಅವರಿಗೆ ಅಗತ್ಯವಿರುವ ಪರಿಕರಗಳನ್ನು ನೀಡಲಾಗಿದೆ ಎಂದು ತಿಳಿಸಿದರು.
ಹೋಮ್ ಕ್ವಾರಂಟೈನ್ ನಲ್ಲಿರುವ ಯಾರೊಬ್ಬರೂ ಹೊರಗೆ ಬಾರದಂತೆ ಪೊಲೀಸರು ಖಾತರಿ ಪಡಿಸಿಕೊಳ್ಳುತ್ತಾರೆ. ಈ ಬಗ್ಗೆ ಯಾರಿಗೂ ಆತಂಕ ಬೇಡ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಹೇಳಿದರು.
ಸಭೆಯಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಹರ್ಷವರ್ಧನ್, ಜಿಲ್ಲಾ ಪಂಚಾಯಿತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications