ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಚಿವ ಸೋಮಶೇಖರ್‌, ಶಾಸಕ ಜಿಟಿಡಿಗೂ ಕೊರೊನಾ ಸೋಂಕು ದೃಢ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಆಗಸ್ಟ್ 5: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ ಸೋಮಶೇಖರ್‌ ಅವರಿಗೂ ಕೂಡಾ ಕೊರೊನಾ ಸೋಂಕು ಧೃಡಪಟ್ಟಿದೆ.

Recommended Video

Kabini Reservoir ಪ್ರದೇಶದಲ್ಲಿ ಭಾರೀ ಮಳೆ; ಒಳಹರಿವು ಏರಿಕೆ | Oneindia Kannada

ಈ ಕುರಿತು ಶಾಸಕ ಜಿ.ಟಿ ದೇವೇಗೌಡ ಅವರು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ವಿಷದು ತಿಳಿದು ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ಅವರು ಶೀಘ್ರ ಗುಣಮುಖರಾಗಿ ಜನಸೇವೆಯಲ್ಲಿ ತೊಡಗುವಂತಾಗಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುವುದಾಗಿ ಬರೆದುಕೊಂಡಿದ್ದಾರೆ.

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸ ಸೀಲ್ ಡೌನ್‌ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸ ಸೀಲ್ ಡೌನ್‌

ಸೋಮಶೇಖರ್ ಅವರ ಆಪ್ತ ಸಹಾಯಕನಿಗೆ ಜು.28 ರಂದು ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಸಚಿವರನ್ನು ಒಂದು ವಾರಗಳ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಅಲ್ಲದೆ, ಅವರ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿತ್ತು. 7 ದಿನಗಳ ಕಾಲ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಕೂಡ ವಿಧಿಸಲಾಗಿದೆ.

Minister ST Somashekhar And MLA GT Devegowda Are Also Infected With Coronavirus

ಈ ನಡುವೆ ಮಾಜಿ ಸಚಿವ, ಹಾಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಅವರಿಗೂ ಕೊರೊನಾ ಸೋಂಕು ತಗುಲಿದ್ದು, ಈ ಕುರಿತು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ನಾನೂ ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು, ಕೋವಿಡ್ ಪಾಸಿಟಿವ್ ಎಂದು ಬರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಏಳು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು ಕೂಡಲೇ ಕ್ವಾರೆಂಟೈನ್ ಗೆ ಒಳಗಾಗಿ ಮುಂಜಾಗ್ರತೆವಹಿಸಿ ಎಂದು ವಿನಂತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಅದೇ ರೀತಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಆಪ್ತರಿಗೆ ಮೈಸೂರು ಜಿಲ್ಲಾಡಳಿತ ಕೊರೊನಾ ಟೆಸ್ಟ್ ಮಾಡಿಸಿದೆ. ಸಿದ್ದರಾಮಯ್ಯನವರ 29 ಜನ ಆಪ್ತರಿಗೆ ಪರೀಕ್ಷೆ ಮಾಡಿಸಲಾಗಿದ್ದು, ಮಾಜಿ ಸಚಿವ ಡಾ.ಎಚ್.ಸಿ ಮಹದೇವಪ್ಪ, ಸಾಹಿತಿ ದೇವನೂರು ಮಹದೇವ್ ಸೇರಿದಂತೆ 29 ಜನರಿಗೂ ಕೊರೋನಾ ನೆಗೆಟಿವ್ ಬಂದಿದೆ.

ಮೂತ್ರನಾಳದ ಸಮಸ್ಯೆ ಹಾಗೂ ತೀವ್ರ ಜ್ವರದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆ.3 ರ ರಾತ್ರಿ ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅಲ್ಲಿ ಅವರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ನಿನ್ನೆ ಬೆಳಿಗ್ಗೆ ಕೊರೊನಾ ವೈರಸ್ ಸೋಂಕಿರುವುದು ದೃಢಪಟ್ಟಿತ್ತು.

ಅವರು ಜು.30 ಮತ್ತು 31 ರಂದು ಮೈಸೂರಿನಲ್ಲಿದ್ದು, ಪತ್ರಕರ್ತರ ಭವನದಲ್ಲಿ ಸಂವಾದ ನಡೆಸಿದ್ದರು. ಅದಕ್ಕಾಗಿ ಪತ್ರಕರ್ತರ ಭವನವನ್ನು ಸ್ಯಾನಿಟೈಸ್ ಮಾಡಿ ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ಅವರ ಶಾರದಾದೇವಿ ನಗರದಲ್ಲಿರುವ ನಿವಾಸವನ್ನು ಸ್ಯಾನಿಟೈಸ್ ಮಾಡಿ ಸೀಲ್ ಡೌನ್ ಮಾಡಲಾಗಿದ್ದು, ಮನೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಕ್ವಾರೆಂಟೈನ್ ಮಾಡಲಾಗಿದೆ. ಇದೇ ವೇಳೆ ಸಿದ್ದರಾಮಯ್ಯನವರ ಸಂಪರ್ಕಕ್ಕೆ ಬಂದವರನ್ನು ತಪಾಸಣೆಗೊಳಪಡಿಸಲಾಗಿದೆ.

English summary
Cooperative Minister ST Somashekhar and MLA GT Deve Gowda have also been Coronavirus infected.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X