• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರು ಡಿಸಿ ದಿಢೀರ್ ವರ್ಗಾವಣೆ; ಸ್ಪಷ್ಟನೆ ಕೊಟ್ಟ ಸೋಮಶೇಖರ್

By ಮೈಸೂರು ಪ್ರತಿನಿಧಿ
|

ಮೈಸೂರು, ಆಗಸ್ಟ್ 29: ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ಅವರು ತಾವು ಮಸ್ಸೂರಿಗೆ ತರಬೇತಿಗಾಗಿ 2 ವರ್ಷ ಹೋಗುವವರಿದ್ದು, ಇದಕ್ಕಾಗಿ ತಮಗೆ ಅಲ್ಲಿಗೆ ತೆರಳಲು ಅನುಮತಿ ನೀಡುವಂತೆ ಅವರೇ ಕೋರಿದ್ದರು. ಹೀಗಾಗಿ ಅವರಿಗೆ ಸಿಎಂ ಅನುಮತಿ ನೀಡಿದ್ದಾರೆ. ಅವರನ್ನು ಸರ್ಕಾರ ವರ್ಗಾವಣೆ ಮಾಡಿಲ್ಲ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದರು.

ಮೈಸೂರಿನಲ್ಲಿಂದು ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಭಿರಾಂ ಜಿ.ಶಂಕರ್ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, 15 ದಿನಗಳ ಹಿಂದೆಯೇ ಮುಖ್ಯಮಂತ್ರಿಗಳ ಬಳಿ ಹೆಚ್ಚಿನ ತರಬೇತಿಗಾಗಿ ಮಸ್ಸೂರಿಗೆ ಹೋಗಬೇಕಾಗಿ ಕೋರಿಕೊಂಡಿದ್ದರು. ತಮಗೆ ತರಬೇತಿಯಿಂದ ವೃತ್ತಿಜೀವನದಲ್ಲಿ ಅನುಕೂಲವಾಗುತ್ತದೆ ಎಂದು ನನ್ನ ಬಳಿಯೂ ಕೇಳಿಕೊಂಡಿದ್ದರು. ಇಲ್ಲದಿದ್ದರೆ ಅವರನ್ನು ಡಿಸೆಂಬರ್ ವರೆಗೆ ಎಲ್ಲಿಯೂ ಹೋಗದಂತೆ ನಾನೇ ತಡೆಯುತ್ತಿದ್ದೆ ಎಂದು ತಿಳಿಸಿದರು.

ಮೈಸೂರು ಜಿಲ್ಲಾಧಿಕಾರಿ ಅಭಿರಾಮ್. ಜಿ. ಶಂಕರ್ ದಿಢೀರ್ ವರ್ಗಾವಣೆ

ಒಂದು ತಿಂಗಳು ಹಾಗೂ 2 ತಿಂಗಳು ರಜೆ ಸಿಗದೆ ಕೆಲಸ ನಿರ್ವಹಣೆ ಮಾಡುತ್ತಿರುವವರಿಗೆ ಮಧ್ಯೆ ಮಧ್ಯೆ ರಜೆ ನೀಡಲು ಸೂಚಿಸಲಾಗಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮೈಸೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದಕ್ಕಾಗಿ ನಾನು ಇಂದು ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ನೀಡುತ್ತೇನೆ ಎಂದರು. ಮೈಸೂರು ದಸರಾಗೆ ಸಂಬಂಧಪಟ್ಟಂತೆ ಸಿಎಂ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರ ಗಮನಕ್ಕೆ ತಂದಿದ್ದೇನೆ. ಇನ್ನು ಹೈಪವರ್ ಕಮಿಟಿಯನ್ನು ಮೈಸೂರಿನಲ್ಲಿಯೇ ರಚನೆ ಮಾಡಬೇಕೆಂಬ ನಿಟ್ಟಿನಲ್ಲಿ ಮಾತುಕತೆ ನಡೆದಿದೆ. ಈ ಬಾರಿ ಆನೆಗಳ ಸವಾರಿ ಸೇರಿದಂತೆ ಯಾವ ರೀತಿಯಾಗಿ ಆಚರಣೆ ಮಾಡಬೇಕು ಎಂದು ಕಮಿಟಿಯಲ್ಲಿ ಚರ್ಚಿಸಿ ವಾರದೊಳಗೆ ತೀರ್ಮಾನ ಪ್ರಕಟಿಸಲಾಗುವುದು ಎಂದು ತಿಳಿಸಿದರು.

English summary
DC Abhiram G. Shankar requested that he wants to get training in mussoorie for 2 years. Thus CM has given permission. He has not been transferred by the government, said ST Somashekhar in mysuru,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X