• search
 • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಸಚಿವ ಎಸ್.ಟಿ ಸೋಮಶೇಖರ್ ಕಿಡಿ

By ಮೈಸೂರು ಪ್ರತಿನಿಧಿ
|

ಮೈಸೂರು, ಮೇ 29: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಾರ್ಯವೈಖರಿ ಬಗ್ಗೆ ಸ್ಥಳೀಯ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿರುವ ಬೆನ್ನಲ್ಲೇ, ಇದೀಗ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಸಹ ಡಿಸಿ ವಿರುದ್ಧ ಕಿಡಿಕಾರಿದ್ದಾರೆ.

ಮೈಸೂರು ಜಿಲ್ಲಾಧಿಕಾರಿ ಹಾಗೂ ಬಿಜೆಪಿ ನಾಯಕರ ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದ್ದು, ರೋಹಿಣಿ ಸಿಂಧೂರಿ ಕಾರ್ಯವೈಖರಿಯ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಸಹ ಆಕ್ರೋಶಗೊಂಡಿದ್ದಾರೆ.

   ಮೈಸೂರು: ಕೊರೊನಾ 3ನೇ ಅಲೆ ತಡೆಗೆ ಜಿಲ್ಲಾ ಮಟ್ಟದ ಸಮಿತಿ ರಚನೆ-ಸಮಿತಿಯಲ್ಲಿ ಜಿಲ್ಲಾಧಿಕಾರಿ ರೋಹಿಣಿಗೆ ಕೊಕ್

   ಮೈಸೂರಿನಲ್ಲಿ ಮಾತನಾಡಿದ ಅವರು, ಶಾಸಕರು, ಸಂಸದರು ಹೇಳುವ ಮಾತನ್ನು ನಾನೂ ಕೇಳಬೇಕು, ಬೇರೆಯವರು ಕೇಳಬೇಕು. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳಿಗೆ ಹೇಳುವ ಅಧಿಕಾರ ಇದೆ. ಪಾಲಿಸುವ ಬದ್ಧತೆ ನನಗೂ ಇದೆ, ಅಧಿಕಾರಿಗಳೂ ಸಹ ಇದನ್ನು ಪಾಲಿಸಬೇಕು ಎಂದು ಸಚಿವ ಸೋಮಶೇಖರ್ ಹೇಳಿದರು.

   ಕೋವಿಡ್ ವಿಚಾರದಲ್ಲಿ ವೈಯುಕ್ತಿಕ ಏನೂ ಇಲ್ಲ ಎಂದು ಸಂಸದ ಪ್ರತಾಪ್‌ ಸಿಂಹ ಪರ ಬ್ಯಾಟಿಂಗ್ ಮಾಡಿದ ಸಚಿವ ಎಸ್.ಟಿ ಸೋಮಶೇಖರ್, ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಡೆಗೆ ಅಸಮಧಾನ ವ್ಯಕ್ತಪಡಿಸಿದರು.

   ಇದೇ ವೇಳೆ ಟಾಸ್ಕ್‌ಫೋರ್ಸ್ ರಚನೆಗೆ ಎಂಎಲ್‌ಸಿ ಎಚ್.ವಿಶ್ವನಾಥ್ ಟೀಕೆ ಕುರಿತು ಮಾತನಾಡಿದ ಅವರು, ಟಾಸ್ಕ್‌ಫೋರ್ಸ್‌ಗೆ ಅಧಿಕಾರ ಇಲ್ಲ ಎನ್ನುವುದಾದರೆ ಇವರಿಗೆ ಹೇಳುವ ಅಧಿಕಾರ ಏನಿದೆ. ಇವರಿಗೆ ಅಧಿಕಾರ ಕೊಟ್ಟವರು ಯಾರು‌? ಅಧಿಕಾರಕ್ಕಾಗಿ ಟಾಸ್ಕ್‌ಫೋರ್ಸ್ ರಚಿಸಿಲ್ಲ, ಸೇವೆಗಾಗಿ ರಚಿಸಲಾಗಿದೆ ಎಂದು ಸ್ವಪಕ್ಷದ ಎಂಎಲ್ಸಿ ವಿರುದ್ಧ ಸಚಿವರು ವಾಗ್ದಾಳಿ ನಡೆಸಿದರು.

   English summary
   Mysuru district Incharge Minister ST Somashekhar is also outraged over the work performance of DC Rohini Sindhuri.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X