ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ವಿಧಾನ ಪರಿಷತ್ ನಲ್ಲಿ ಗೂಂಡಾಗಿರಿ ಮಾಡಿದವರ ಅಮಾನತು ಮಾಡಿ''

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಡಿಸೆಂಬರ್ 16: ವಿಧಾನ ಪರಿಷತ್ ಸಭಾಪತಿಗಳ ಖುರ್ಚಿಗೆ ಅದರದ್ದೇ ಆದ ಗೌರವವಿದೆ. ಆದರೆ, ಮೊದಲ ಬಾರಿ ಎಂಎಲ್ಸಿ ಆದವರೂ ಸಹ ಆ ಖುರ್ಚಿಯಲ್ಲಿ ಕೂರುತ್ತಾರೆಂದರೆ ಏನರ್ಥ? ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಪ್ರಶ್ನಿಸಿದರು.

ಸಭಾಪತಿಗಳ ಮೇಲೆ ಅವಿಶ್ವಾಸ ನಿರ್ಣಯವನ್ನು ನಮ್ಮ ಪಕ್ಷದ ಸದಸ್ಯರು ಮಂಡಿಸಿದ್ದು, ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲವೇ? ಎಲ್ಲರಿಗೂ ನೀತಿ, ಕಾನೂನು ಹೇಳುವ ಅವರು ತಮ್ಮ ಪಕ್ಷದ ನಾಯರಿಗೆ ಬುದ್ಧಿ ಹೇಳಲಿ, ಗೂಂಡಾಗಿರಿ ಮಾಡಿದವರನ್ನು ಅಮಾನತು ಮಾಡಲಿ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

ಖುರ್ಚಿಯಿಂದ ಎಳೆದಾಡಿದ್ದು ಖಂಡನೀಯ

ಖುರ್ಚಿಯಿಂದ ಎಳೆದಾಡಿದ್ದು ಖಂಡನೀಯ

ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗೌರವಾನ್ವಿತ ಹಿರಿಯ ಸದಸ್ಯರೂ, ಉಪ ಸಭಾಪತಿಗಳಾದ ಧರ್ಮೇಗೌಡರನ್ನು ಎಳೆದಾಡಿ, ಗೂಂಡಾಗಿರಿ ಮಾಡಿ ಬಲತ್ಕಾರವಾಗಿ ಖುರ್ಚಿಯಿಂದ ಎಳೆದಾಡಿದ್ದು ಖಂಡನೀಯ. ಇದು ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

ಮೈಸೂರು ಜಿಲ್ಲಾಧಿಕಾರಿ ನೇಮಕ, ರೋಹಿಣಿ ಸಿಂಧೂರಿಗೆ ಹಿನ್ನಡೆ!ಮೈಸೂರು ಜಿಲ್ಲಾಧಿಕಾರಿ ನೇಮಕ, ರೋಹಿಣಿ ಸಿಂಧೂರಿಗೆ ಹಿನ್ನಡೆ!

ಪಕ್ಷದಿಂದ ಅಮಾನತು ಮಾಡಬೇಕು

ಪಕ್ಷದಿಂದ ಅಮಾನತು ಮಾಡಬೇಕು

ಕಾಂಗ್ರೆಸ್ ನವರಿಗೆ ಮರ್ಯಾದೆ ಉಳಿಸಿಕೊಳ್ಳಬೇಕೆಂದಿದ್ದರೆ ಹೀಗೆ ಗೂಂಡಾಗಿರಿ ಮಾಡಿದವರನ್ನು ಪಕ್ಷದಿಂದ ಅಮಾನತು ಮಾಡಬೇಕು. ಚಿಂತಕರ, ಬುದ್ದಿವಂತರ ಚಾವಡಿ ಎಂದೇ ಹೆಸರಾಗಿದ್ದ ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಇಂತಹ ಕೀಳುಮಟ್ಟದ ರಾಜಕೀಯಕ್ಕೆ ಇಳಿಯುತ್ತದೆ ಎಂದರೆ ಹೇಗೆ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಸಭಾಪತಿಗಳ ನಡೆ ಸರಿಯಲ್ಲ

ಸಭಾಪತಿಗಳ ನಡೆ ಸರಿಯಲ್ಲ

ಸಭಾಪತಿಗಳ ಮೇಲೆ ಆರೋಪ ಬಂದ ಮೇಲೆ ಅವರು ಆ ಖುರ್ಚಿಯಲ್ಲಿ ಕೂರುವಂತಿಲ್ಲ. ಅವಿಶ್ವಾಸ ನಿರ್ಣಯ ಗೊತ್ತುವಳಿಯಾದ ಮೇಲೆ ಸಭಾಪತಿಗಳಾದವರು ಖುರ್ಚಿಯನ್ನು ಬಿಟ್ಟುಕೊಡಬೇಕು. 14 ದಿನದ ಅವಧಿಯಲ್ಲಿ ಅವಕಾಶ ಕಲ್ಪಿಸಿ ಸರಿಯಾದ ರೀತಿಯಲ್ಲಿ ನಡೆದುಕೊಳ್ಳಬೇಕು. ಆದರೆ, ಅದಕ್ಕೆ ಅವಕಾಶ ಕೊಡದ ಸಭಾಪತಿಗಳ ನಡೆ ಸರಿಯಲ್ಲ ಎಂದು ಖಂಡಿಸಿದರು.

ಕರ್ನಾಟಕ ಮೇಲ್ಮನೆಯಲ್ಲಿ 'ಸಣ್ಣತನ' ತೋರಿದ ಸದಸ್ಯರುಕರ್ನಾಟಕ ಮೇಲ್ಮನೆಯಲ್ಲಿ 'ಸಣ್ಣತನ' ತೋರಿದ ಸದಸ್ಯರು

ಕಾಂಗ್ರೆಸ್ಸಿಗರ ಪೂರ್ವನಿಯೋಜಿತ ಸಂಚು

ಕಾಂಗ್ರೆಸ್ಸಿಗರ ಪೂರ್ವನಿಯೋಜಿತ ಸಂಚು

ಇದು ಕಾಂಗ್ರೆಸ್ಸಿಗರ ಪೂರ್ವನಿಯೋಜಿತ ಸಂಚು. ಕಾಂಗ್ರೆಸ್ ಶಾಸಕಾಂಗ ಪಕ್ಷದಲ್ಲಿಯೇ ಗೂಂಡಾಗಿರಿ ಮಾಡುವ ಹಾಗೂ ದಾಂಧಲೆ ಮಾಡುವ ಬಗ್ಗೆ ತೀರ್ಮಾನಿಸಲಾಗಿದೆ. ಇದು ಅವರ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ. ಕಾಂಗ್ರೆಸ್ ವರ್ತನೆ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿದ್ದೇವೆ ಎಂದು ಸಚಿವ ಸೋಮಶೇಖರ್ ಹೇಳಿದರು. ಇದೇ ವೇಳೆ ಚಾಮರಾಜ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಎಲ್.ನಾಗೇಂದ್ರ, ಮಹಾನಗರ ಪಾಲಿಕೆ ಆಯುಕ್ತರಾದ ಗುರುದತ್ತ ಹೆಗಡೆ ಸೇರಿದಂತೆ ಅಧಿಕಾರಿಗಳು ಹಾಗೂ ಮುಖಂಡರು ಹಾಜರಿದ್ದರು.

English summary
Minister ST Somashekhar has demanded the suspension of Congress MLCs who were disrespectful in the Council.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X