ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋಡಿಹಳ್ಳಿ ಚಂದ್ರಶೇಖರ್ ರಾಜಕೀಯಕ್ಕೆ ಸಚಿವ ಎಸ್.ಟಿ ಸೋಮಶೇಖರ್ ಕಿಡಿ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಡಿಸೆಂಬರ್ 14: ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮೈಸೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ, ಪರಿಸ್ಥಿತಿಯನ್ನು ಅವಲೋಕಿಸಿದರು.

ಮುಷ್ಕರ ಮುಂದುವರಿದಿದ್ದರೂ ಬಸ್ ಸಂಚಾರ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಖುದ್ದು ಬಸ್ ಗಳ ಬಳಿ ತೆರಳಿದ ಸಚಿವರು, ಮಾಹಿತಿಯನ್ನು ಪಡೆದುಕೊಂಡರು. ಜೊತೆಗೆ ಪ್ರಯಾಣಿಕರನ್ನು ಮಾತನಾಡಿಸಿ, ಅಭಿಪ್ರಾಯ ಸಂಗ್ರಹಿಸಿದರು. ಕಳೆದ ಎರಡು-ಮೂರು ದಿನಗಳಿಂದ ಆದ ತೊಂದರೆಗೆ ಬೇಸರ ವ್ಯಕ್ತಪಡಿಸಿದರು.

ಪಟ್ಟು ಸಾಧಿಸುವುದು ಸರಿಯಲ್ಲ

ಪಟ್ಟು ಸಾಧಿಸುವುದು ಸರಿಯಲ್ಲ

ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರು ಮಾತನಾಡಲು ಸಿದ್ಧರಿದ್ದರೂ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವುದು ಸರಿಯಲ್ಲ. ಈಗಾಗಲೇ 9 ಬೇಡಿಕೆಗಳನ್ನು ಈಡೇರಿಸುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಯಾರದ್ದೋ ಮಾತು ಕೇಳಿಕೊಂಡು ಪಟ್ಟು ಸಾಧಿಸುತ್ತಿರುವುದು ಸರಿಯಲ್ಲ ಎಂದು ಪರ್ತಕರ್ತರ ಪ್ರಶ್ನೆಗೆ ಸಚಿವ ಸೋಮಶೇಖರ್ ಉತ್ತರಿಸಿದರು.

ಕೋಡಿಹಳ್ಳಿ ಸಮಾಜಘಾತುಕ ಕೃತ್ಯ ಮಾಡುತ್ತಿದ್ದಾರೆ; ಈಶ್ವರಪ್ಪಕೋಡಿಹಳ್ಳಿ ಸಮಾಜಘಾತುಕ ಕೃತ್ಯ ಮಾಡುತ್ತಿದ್ದಾರೆ; ಈಶ್ವರಪ್ಪ

ಕೊರೊನಾ ಸಂಕಷ್ಟದಿಂದ ಆರ್ಥಿಕ ಪರಿಸ್ಥಿತಿ ಚೇತರಿಕೆ

ಕೊರೊನಾ ಸಂಕಷ್ಟದಿಂದ ಆರ್ಥಿಕ ಪರಿಸ್ಥಿತಿ ಚೇತರಿಕೆ

ಲಾಕ್ ಡೌನ್ ಸಂದರ್ಭದಲ್ಲಿ ಕೆ.ಎಸ್.ಆರ್.ಟಿ.ಸಿ ಹಾಗೂ ಬಿಎಂಟಿಸಿಗಳಿಗೆ ಸರ್ಕಾರವೇ ವೇತನ ಕೊಟ್ಟಿದೆ. ಅಲ್ಲದೆ, ಈ ಸಂದರ್ಭದಲ್ಲಿ ಕೆಲ ಸಮಯ ಬಸ್ ಸಂಚಾರವಿರಲಿಲ್ಲ. ಹೀಗಿದ್ದರೂ ಸರ್ಕಾರ ಉತ್ತಮವಾಗಿ ನೋಡಿಕೊಂಡಿದೆ. ಅಲ್ಲದೆ, ವೇತನದಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಂಡಿದೆ. ಈಗಲೂ ಸಹ ಕೊರೊನಾ ಸಂಕಷ್ಟದಿಂದ ಆರ್ಥಿಕ ಪರಿಸ್ಥಿತಿ ಚೇತರಿಸಿಕೊಳ್ಳುತ್ತಿದೆ. ಸ್ವಲ್ಪ ಸಮಯದ ಬಳಿಕ ಎಲ್ಲವೂ ಸರಿಹೊಂದಿದ ಮೇಲೆ ಕ್ರಮ ಬೇಡಿಕೆಗಳನ್ನು ಇಡಬಹುದಿತ್ತು ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು.

ಕೋಡಿಹಳ್ಳಿ ರಾಜಕೀಯಕ್ಕೆ ಸಚಿವರ ಕಿಡಿ

ಕೋಡಿಹಳ್ಳಿ ರಾಜಕೀಯಕ್ಕೆ ಸಚಿವರ ಕಿಡಿ

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರು ರೈತಪರ ಹೋರಾಟವನ್ನು ಮಾಡಿಕೊಂಡಿರಲಿ. ಅದು ಬಿಟ್ಟು ಎಲ್ಲ ಕಡೆ ಮೂಗು ತೂರಿಸಬಾರದು. ಅವರು ಯಾವ ನಾಟಕವಾಡಿದರೂ ಜನಕ್ಕೆ ಅರ್ಥವಾಗುತ್ತದೆ. ಅವರು ತಮ್ಮ ಡ್ರಾಮಾಗಳನ್ನು ಬಿಟ್ಟು 9 ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿರುವುದಕ್ಕೆ ಅಭಿನಂದನೆ ಸೂಚಿಸಬೇಕಿತ್ತು. ಅದು ಬಿಟ್ಟು ಸಾರಿಗೆ ನೌಕರರನ್ನು ಎತ್ತಿಕಟ್ಟಿ ಹೋರಾಟ ಮಾಡುವಂತೆ ಮಾಡುವುದು ಸರಿಯೇ? ಎಲ್ಲ ಕಡೆಯೂ ಕೋಡಿಹಳ್ಳಿ ಚಂದ್ರಶೇಖರ್ ಅವರು ಕಾಂಟ್ರ್ಯಾಕ್ಟ್ ತೆಗೆದುಕೊಂಡಿದ್ದಾರೆಯೇ? ಅವರು ರೈತರ ಪರ ಹೋರಾಟ ಮಾಡಲಿ, ಇಂತಹ ರಾಜಕೀಯ ಬೇಡ ಎಂದು ಕಟುವಾಗಿ ನುಡಿದರು. ಕೋಡಿಹಳ್ಳಿ ಅವರು ಏನೇ ಪಿತೂರಿ ಮಾಡಿದರೂ ಸಹ ಸಾರಿಗೆ ನೌಕರರು ಅರ್ಥಮಾಡಿಕೊಳ್ಳಬೇಕಿತ್ತು. ಇಂತಹ ಕೊರೊನಾ ಸಂದಿಗ್ಧ ಸ್ಥಿತಿಯಲ್ಲಿ ಹೋರಾಟ ಬೇಕಿರಲಿಲ್ಲ. ಸಾರ್ವಜನಿಕರಿಗೆ ತೊಂದರೆ ಕೊಟ್ಟು ಹೋರಾಟ ನಡೆಸುವುದು ಎಷ್ಟು ಸರಿ ಎಂದು ಸಚಿವರು ತಿಳಿಸಿದರು.

ಕನಿಷ್ಠ ಬೆಂಬಲ ಬೆಲೆ ತೆಗೆಯಲ್ಲ

ಕನಿಷ್ಠ ಬೆಂಬಲ ಬೆಲೆ ತೆಗೆಯಲ್ಲ

ಎಪಿಎಂಸಿ ಕಾಯ್ದೆಯ ತಿದ್ದುಪಡಿ ನೀತಿಯನ್ನು ಬದಲಾಯಿಸುವುದಿಲ್ಲ. ರೈತರಿಗೆ ಅನುಕೂಲವನ್ನುಂಟು ಮಾಡುವ ಈ ಕಾಯ್ದೆಯಿಂದ ಲಾಭವೇ ವಿನಃ ಹಾನಿಯಿಲ್ಲ. ರೈತ ತಾನು ಬೆಳೆದ ಬೆಳೆಯನ್ನು ರಾಜ್ಯದ ಯಾವುದೇ ಮೂಲೆಯಲ್ಲಿ ಬೇಕಿದ್ದರೂ ಮಾರಾಟ ಮಾಡಬಹುದು. ತನ್ನ ಬೆಳೆಗೆ ರೈತನೇ ದರ ನಿಗದಿ ಮಾಡಿಕೊಳ್ಳಬಹುದು. ಅಲ್ಲದೆ, ಕನಿಷ್ಠ ಬೆಂಬಲ ಬೆಲೆ ಈಗಲೂ ಇದೆ, ಮುಂದೆಯೂ ಇರುತ್ತದೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ. ಇಂತಹ ಒಂದು ಸತ್ವಯುತ ಕಾಯ್ದೆಯನ್ನು ಏಕೆ ಬದಲಿಸಬೇಕು? ಎಂದು ಸಚಿವರು ಪ್ರಶ್ನಿಸಿದರು. ಇನ್ನು ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಹೇಗೆ ರೈತರಿಗೆ ಪ್ರಯೋಜನಕಾರಿ ಎಂಬ ಬಗ್ಗೆ, 4 ಕಂದಾಯ ವಿಭಾಗದಲ್ಲಿಯೂ ಸಹ ಸಭೆಗಳನ್ನು ನಡೆಸಿ ರೈತರಿಗೆ ಮತ್ತೊಮ್ಮೆ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತೇವೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಪಂಚಲಿಂಗ ದರ್ಶನ ಮಹೋತ್ಸವಕ್ಕೆ ಸುಸೂತ್ರ ಚಾಲನೆ

ಪಂಚಲಿಂಗ ದರ್ಶನ ಮಹೋತ್ಸವಕ್ಕೆ ಸುಸೂತ್ರ ಚಾಲನೆ

ಪಂಚಲಿಂಗ ದರ್ಶನವು ಸುಸೂತ್ರ ಹಾಗೂ ಸರಾಗವಾಗಿ ಆಯಿತು. ಮುಂಜಾನೆ 4.30 ರಿಂದ 5.45ರ ವರೆಗೆ ನಿರ್ವಿಘ್ನವಾಗಿ ನೆರವೇರಿದೆ. 7 ವರ್ಷಕ್ಕೊಮ್ಮೆ ಮಹೋತ್ಸವ ನಡೆಯುತ್ತಿರುವುದರಿಂದ ಭಕ್ತರಿಗೂ ಸಹ ದರ್ಶನಕ್ಕೆ ಅವಕಾಶ ಸಿಗಬೇಕು. ಈಗ ಜಿಲ್ಲಾಡಳಿತ ಹೇರಿರುವ 1500 ಜನರ ನಿರ್ಬಂಧವನ್ನು ಸಡಿಲಿಸಿ ಹಂತ ಹಂತವಾಗಿ ಅನುಮತಿ ನೀಡಿ ಹೆಚ್ಚಿನವರಿಗೆ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.

ಸುಸೂತ್ರ ಪಂಚಲಿಂಗ ಮಹೋತ್ಸವ ಕಾರ್ಯಕ್ರಮಕ್ಕೆ ಸೂಚಿಸಿರುವ ಸಿಎಂ

ಸುಸೂತ್ರ ಪಂಚಲಿಂಗ ಮಹೋತ್ಸವ ಕಾರ್ಯಕ್ರಮಕ್ಕೆ ಸೂಚಿಸಿರುವ ಸಿಎಂ

ಸಾರಿಗೆ ನೌಕರರ ಮುಷ್ಕರ ನಡೆಯುತ್ತಿರುವ ಕಾರಣಕ್ಕೆ ಮುಖ್ಯಮಂತ್ರಿಗಳು ಪಂಚಲಿಂಗ ದರ್ಶನಕ್ಕೆ ಭಾಗವಹಿಸಲಿಲ್ಲ. ಮೊದಲು ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಿ, ಸಾರ್ವಜನಿಕರಿಗೆ ಸ್ಪಂದಿಸಬೇಕೆಂಬ ನಿಟ್ಟಿನಲ್ಲಿ ಬೆಂಗಳೂರಿನಲ್ಲಿಯೇ ಉಳಿದುಕೊಂಡಿದ್ದಾರೆ. ಆದರೆ, ಪಂಚಲಿಂಗ ದರ್ಶನ ಮಹೋತ್ಸವದ ಯಶಸ್ಸಿಗಾಗಿ ಅವರು 2 ಬಾರಿ ಸಭೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದರು. ಇಂದೂ ಸಹ ಕರೆ ಮಾಡಿ ಪೂಜೆ, ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಜೊತೆಗೆ ಉಸ್ತುವಾರಿ ಸಚಿವನಾಗಿರುವ ನನಗೆ ಸುಸೂತ್ರವಾಗಿ ನಡೆಸಿಕೊಡಬೇಕೆಂದು ಸಲಹೆ- ಸೂಚನೆ ನೀಡಿದ್ದಾರೆಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು. ಈ ಸಂದರ್ಭದಲ್ಲಿ ಶಾಸಕರಾದ ಎಲ್.ನಾಗೇಂದ್ರ, ಮುಡಾ ಅಧ್ಯಕ್ಷರಾದ ಎಚ್.ವಿ.ರಾಜೀವ್ ಇದ್ದರು.

English summary
Mysuru District In charge Minister ST Somashekhar visited the Mysuru KSRTC bus stop and reviewed the situation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X