ಶಾಸಕ ರಾಮದಾಸ್‌ಗೆ ಲಘು ಹೃದಯಾಘಾತ
Recommended Video
ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ರಾಮದಾಸ್ ಗೆ ಚಿಕಿತ್ಸೆ | Ramdas | Mysore | Heart Attack | Oneindia kannada
ಮೈಸೂರು, ಫೆಬ್ರವರಿ 11: ಮೈಸೂರು ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.
ನಿನ್ನ ಮಧ್ಯರಾತ್ರಿ ಒಂಟಿಕೊಪ್ಪಲಿನಲ್ಲಿರುವ ಮನೆಯಲ್ಲಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಲಭಿಸಿದೆ. ತಕ್ಷಣವೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯ ರಾತ್ರಿಯಲ್ಲೇ ವೈದ್ಯರ ತಂಡದಿಂದ ಆ್ಯಂಜಿಯೋಪ್ಲಾಸ್ಟ್ ಚಿಕಿತ್ಸೆ ನಡೆದಿದ್ದು, ರಕ್ತನಾಳ ಹೆಪ್ಪುಗಟ್ಟಿದ್ದರಿಂದ ಹೃದಯಾಘಾತವಾಗಿದೆ ಎಂದು ಮಾಹಿತಿ ನೀಡಿದ್ದಾರೆ. ವೈದ್ಯರು ರಾಮದಾಸ್ ಅವರಿಗೆ ಸ್ಟಂಟ್ ಅಳವಡಿಸಿದ್ದಾರೆ.

ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮುಗಿದಿದ್ದು, ಯಾವುದೇ ಅಪಾಯ ಇಲ್ಲ ಎಂದು ರಾಮದಾಸ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.












Click it and Unblock the Notifications