• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

Breaking; ಜಿ. ಟಿ. ದೇವೇಗೌಡರ ಮೊಮ್ಮಗಳು ವಿಧಿವಶ

|
Google Oneindia Kannada News

ಮೈಸೂರು, ಮೇ 15; ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ, ಮಾಜಿ ಸಚಿವ ಜಿ. ಟಿ. ದೇವೇಗೌಡ ಮೊಮ್ಮಗಳು ಸಾವನ್ನಪ್ಪಿದ್ದಾಳೆ. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.

ಜಿ. ಟಿ. ದೇವೇಗೌಡರ ಪುತ್ರ ಜಿ. ಡಿ. ಹರೀಶ್ ಗೌಡ ಪುತ್ರಿ ಗೌರಿ (3) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಶನಿವಾರ ರಾತ್ರಿ ಸಾವನ್ನಪ್ಪಿದ್ದಾಳೆ. ಧೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಗು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿತ್ತು.

ಗೌರಿ ನಿಧನಕ್ಕೆ ಎಚ್. ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಭಾನುವಾರ ಟ್ವೀಟ್ ಮಾಡಿರುವ ಅವರು, 'ಮಾಜಿ ಮಂತ್ರಿಗಳಾದ ಶ್ರೀ ಜಿ.ಟಿ.ದೇವೇಗೌಡರ ಮೊಮ್ಮಗಳು, ಮೂರು ವರ್ಷದ ಹಸುಗೂಸು ಗೌರಿ ಅನಾರೋಗ್ಯದಿಂದ ಅಸುನೀಗಿರುವ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ಮುದ್ದು ಕಂದಳ ಅಗಲಿಕೆ ನನಗೆ ಬಹಳ ದುಃಖ ಉಂಟು ಮಾಡಿದೆ' ಎಂದು ಹೇಳಿದ್ದಾರೆ.

ಜಿಟಿ ದೇವೇಗೌಡ ಅವರ ಮುಂದಿನ ರಾಜಕೀಯ ನಡೆ ಏನುಜಿಟಿ ದೇವೇಗೌಡ ಅವರ ಮುಂದಿನ ರಾಜಕೀಯ ನಡೆ ಏನು

'ಆ ಮಗುವಿನ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಶ್ರೀ ಜಿ.ಟಿ.ದೇವೇಗೌಡರು, ಅವರ ಪುತ್ರ ಹರೀಶ್‌ ಮತ್ತು ಕುಟುಂಬಕ್ಕೆ ಆ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಟ್ವೀಟ್ ಮಾಡಿದ್ದಾರೆ.

ಜಿಟಿ ದೇವಗೌಡ ಬಿಜೆಪಿಗೆ ಬಂದರೆ ಕ್ಷೇತ್ರ ತ್ಯಾಗಕ್ಕೆ ಸಿದ್ಧ: ಶಾಸಕ ನಾಗೇಂದ್ರಜಿಟಿ ದೇವಗೌಡ ಬಿಜೆಪಿಗೆ ಬಂದರೆ ಕ್ಷೇತ್ರ ತ್ಯಾಗಕ್ಕೆ ಸಿದ್ಧ: ಶಾಸಕ ನಾಗೇಂದ್ರ

ಸಿದ್ದರಾಮಯ್ಯ ಸಂತಾಪ; ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ, 'ಮಾಜಿ ಸಚಿವರು, ಆತ್ಮೀಯರು ಆದ ಜಿ. ಟಿ. ದೇವೇಗೌಡರ ಮೊಮ್ಮಗಳು ಗೌರಿಯ ಸಾವಿನ ಸುದ್ದಿ ತಿಳಿದು ಅತೀವ ಸಂಕಟವಾಯಿತು. ಬದುಕಿ ಬಾಳಬೇಕಿದ್ದ ಎಳೆಯ ಕಂದಮ್ಮನ ಅಗಲಿಕೆಯಿಂದ ನೊಂದಿರುವ ಜಿ.ಟಿ ದೇವೇಗೌಡರ ಕುಟುಂಬದ ಶೋಕದಲ್ಲಿ ನಾನೂ ಭಾಗಿ. ಮೃತ ಗೌರಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ, ಮಗುವಿನ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಜಿ. ಟಿ . ದೇವೇಗೌಡರು ಹಾಗೂ ಆಕೆಯ ತಂದೆ, ತಾಯಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಹೇಳಿದ್ದಾರೆ.

MLA GT Deve Gowda Granddaughter Passes Away

English summary
3 year old Gowri granddaughter of MLA G. T. Devegowda passed away at Bengaluru private hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X