ಶಾಸಕ ಎಂ.ಪಿ ರವೀಂದ್ರ ಅಸ್ವಸ್ಥ: ಜನನಾಯಕರ ವಿರುದ್ಧ ಆಕ್ರೋಶ
ಮೈಸೂರು, ಜನವರಿ 19 : ದಾವಣಗೆರೆ ಜಿಲ್ಲೆ ಹರಪನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ.ಪಿ.ರವೀಂದ್ರ ಅಸ್ವಸ್ತರಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ
ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ರವೀಂದ್ರ ಅವರು ಮೂರು ದಿನಗಳಿಂದ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗೆ ಸುತ್ತೂರು ಜಾತ್ರೆಯಲ್ಲಿ ಭಾಗವಹಿಸಿ ರವೀಂದ್ರ ಭಾಷಣ ಮಾಡಿದ್ದರು. ಆದರೆ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಜ.17ರಂದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ರವೀಂದ್ರ ಅವರು ಅಸ್ವಸ್ತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ, ಆರೋಗ್ಯ ಸ್ಥಿತಿ ವಿಚಾರಿಸಲು ಯಾವ ನಾಯಕರು ಆಗಮಿಸಿಲ್ಲ ಎಂದು ಹೇಳಲಾಗುತ್ತಿದೆ. ಎಂ.ಪಿ.ರವೀಂದ್ರ ಮಾಜಿ ಉಪಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಅವರ ಏಕೈಕ ಪುತ್ರರಾಗಿದ್ದಾರೆ.













Click it and Unblock the Notifications