ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬ್ರಾಹ್ಮಣರಿಗೆ ಜಾತಿ ಪ್ರಮಾಣ ಪತ್ರಕ್ಕೆ ಶಾಸಕ ರಾಮದಾಸ್ ಒತ್ತಾಯ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜೂನ್ 11: ಬ್ರಾಹ್ಮಣ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡಲು ರಾಜ್ಯ ಸರ್ಕಾರ ಅಗತ್ಯ ಆದೇಶ ಹೊರಡಿಸುವಂತೆ ಶಾಸಕ ಎಸ್.ಎ.ರಾಮದಾಸ್ ಮನವಿ ಮಾಡಿದ್ದಾರೆ.

ಸರ್ಕಾರವು ಸಮುದಾಯದ ಕಲ್ಯಾಣಕ್ಕಾಗಿ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ರಚನೆ ಮಾಡಿದೆ. ಆದರೆ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗ ನಿಮಿತ್ತ ಅಗತ್ಯ ಜಾತಿ ಪ್ರಮಾಣ ಪತ್ರ ನೀಡಲು ಅನೇಕ ತೊಂದರೆಗಳಾಗುತ್ತಿವೆ. ಇದರಿಂದ ಜಾತಿ ಪ್ರಮಾಣ ಪತ್ರ ನೀಡುತ್ತಿರಲಿಲ್ಲ. ನಿನ್ನೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಕಂದಾಯ ಸಚಿವ ಅಶೋಕ್ ಜಾತಿ ಪ್ರಮಾಣ ಪತ್ರ ನೀಡಲು ಸ್ಥಳದಲ್ಲೇ ಆದೇಶ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಸರ್ಕಾರ ರಾಜ್ಯದ ಎಲ್ಲಾ ತಹಶೀಲ್ದಾರ್ ಗಳಿಗೆ ಆದೇಶ ನೀಡಿ ತಕ್ಷಣ ಜಾತಿ ಪ್ರಮಾಣ ಪತ್ರ ನೀಡಬೇಕು ಎಂದು ಮನವಿ ಮಾಡಿದರು.

ಪ್ರತಾಪ್ ಸಿಂಹ- ರಾಮದಾಸ್ ಕಿತ್ತಾಟ ಅಂತ್ಯವಾಗೋದು ಯಾವಾಗ?ಪ್ರತಾಪ್ ಸಿಂಹ- ರಾಮದಾಸ್ ಕಿತ್ತಾಟ ಅಂತ್ಯವಾಗೋದು ಯಾವಾಗ?

ಇದೇ ವೇಳೆ ಮೈಸೂರು ತಾಲೂಕು ಕಸಬಾ ಹೋಬಳಿ ಕುರುಬಾರಹಳ್ಳಿಯ ಸ.ನಂ.4ರಲ್ಲಿ ಸಿದ್ದಾರ್ಥ ಬಡಾವಣೆಯ 205 09 ½ ಎಕರೆ, ಕೆ.ಸಿ.ಬಡಾವಣೆಯ 44.20 ಎಕರೆ ಪ್ರದೇಶವನ್ನು ಬಿ.ಖರಾಬು ಶೀರ್ಷಿಕೆಯಿಂದ ವಿಹಿತಗೊಳಿಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಒಟ್ಟು 354.29 ½ ಎಕರೆ/ಗುಂಟೆ ಜಮೀನನ್ನು ಉಚಿತವಾಗಿ ಮಂಜೂರು ಮಾಡಬೇಕೆಂಬ ಮಾರ್ಪಾಡಿನೊಂದಿಗೆ ಸಚಿವ ಸಂಪುಟದ ಟಿಪ್ಪಣಿಯ ಕಂಡಿಕೆ 12ರಲ್ಲಿ ಒಳಗೊಂಡಿರುವ ಪ್ರಸ್ತಾವನೆಗಳನ್ನು ಸಚಿವ ಸಂಪುಟ ಅನುಮೋದಿಸಿದೆ ಎಂದು ತಿಳಿಸಿದರು.

MLA Ramdas Requested Government To Issue Caste Certificate For Brahmins

ರಾಜ್ಯಸಭೆ ಟಿಕೆಟ್ ಕುರಿತು ಪ್ರತಿಕ್ರಿಯಿಸಿ, ಸಾಮಾನ್ಯ ಕಾರ್ಯಕರ್ತರಿಗೆ ಬಿಜೆಪಿಯಲ್ಲಿ ಮಾತ್ರ ಟಿಕೆಟ್ ನೀಡಲಾಗುತ್ತಿದ್ದು, ಮುಖ್ಯಮಂತ್ರಿಗಳು ಹಾಗೂ ಹೈಕಮಾಂಡ್ ಟಿಕೆಟ್ ತೀರ್ಮಾನ ಮಾಡುತ್ತಾರೆ. ಪಕ್ಷ ಕಟ್ಟಿದ್ದ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿದ್ದು ಖುಷಿಯ ವಿಚಾರ. ಎಲ್ಲರಿಗೂ ನಮ್ಮ ಪಕ್ಷ ಸ್ಥಾನಮಾನ ನೀಡುತ್ತದೆ, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿಯೇ ಹೈಕಮಾಂಡ್ ಈ ನಿರ್ಧಾರ ತೆಗೆದುಕೊಂಡಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿಕ್ಕೆ ಕಾರಣರಾದವರಿಗೆ ಮುಖ್ಯಮಂತ್ರಿಗಳು ಹಾಗೂ ಹೈಕಮಾಂಡ್ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬದಲಾವಣೆಯ ಮಾತೇ ಇಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ ಪಕ್ಷ ನನಗೆ ಮಾತೃ ಸಮಾನ ಎಂದರು. ಯಡಿಯೂರಪ್ಪ ಬದಲಾವಣೆ ಊಹಾಪೋಹ ಎಂದು ಸ್ಪಷ್ಟಪಡಿಸಿದರು.

English summary
MLA Ramadas has requested the state government to issue a caste certificate to the Brahmin community
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X