• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮಾಡಿದ್ದು ಸತ್ಯ: ರಮೇಶ್ ಜಾರಕಿಹೋಳಿ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜೂನ್ 25: "ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮಾಡಿದ್ದು ಸತ್ಯ. ಆದರೆ, ಕೆಲವು ಹಿರಿಯರ ಸಲಹೆ ಮೇರೆಗೆ ಈಗ ಅದನ್ನು ಕೈಬಿಟ್ಟಿದ್ದೇನೆ,'' ಎಂದು ಶಾಸಕ ರಮೇಶ್ ಜಾರಕಿಹೋಳಿ ಸ್ಪಷ್ಟಪಡಿಸಿದರು.

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಲ್ಲಿರುವ ಸುತ್ತೂರು ಮಠದಲ್ಲಿ ಶ್ರೀಗಳನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, "ನಾನು ಮನಸ್ಸು ನೊಂದು ರಾಜೀನಾಮೆ ನಿರ್ಧಾರ ಮಾಡಿದ್ದು ನಿಜ. ಆದರೆ ಕೆಲವು ಹಿರಿಯರ ಸಲಹೆ ಮೇರೆಗೆ ಈಗ ಅದನ್ನು ಕೈಬಿಟ್ಟಿದ್ದೇನೆ. ಇನ್ನು 8 ರಿಂದ 10 ದಿನ ನನಗೆ ಮಾಧ್ಯಮದವರು ದಯವಿಟ್ಟು ಬಿಟ್ಟು ಬಿಡಿ. ನಾನು ಅಲ್ಲಿಯವರೆಗೂ ಏನು ಮಾತನಾಡಲ್ಲ,'' ಎಂದರು.

"ರಾಜೀನಾಮೆ ಕೊಟ್ಟರೂ ನಾನೊಬ್ಬನೇ ಕೊಡ್ತೇನೆ. ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಮುಳುಗುವ ಹಡಗು ನಾನೇಕೆ ಆ ಪಕ್ಷಕ್ಕೆ ಹೋಗಲಿ. ಬಿಜೆಪಿ ಪಕ್ಷ ನನ್ನನ್ನು ಬಹಳ ಗೌರವದಿಂದ ನಡೆಸಿಕೊಂಡಿದೆ. ನಾನು ಬಿಜೆಪಿಗೆ ದ್ರೋಹ ಮಾಡುವ ಕೆಲಸ ಎಂದಿಗೂ ಮಾಡುವುದಿಲ್ಲ ಪ್ರಶ್ನೆಯೊಂದಕ್ಕೆ,'' ಉತ್ತರಿಸಿದರು.

"ನಾನು ಮುಂಬೈಗೆ ಹೋಗಿದ್ದು ಸತ್ಯ. ದೇವೇಂದ್ರ ಫಡ್ನವೀಸ್ ನನ್ನ ರಾಜಕೀಯ ಗಾಡ್ ಫಾದರ್. ಅವರ ಬಳಿ ನನ್ನ ಮನಸ್ಸಿನ ನೋವುಗಳನ್ನು ಹೇಳಿಕೊಂಡಿದ್ದೇನೆ. ಸ್ವಾಮೀಜಿ ಬಳಿ ಬಂದು ಸಚಿವ ಸ್ಥಾನಕ್ಕೆ ಒತ್ತಡ ಹಾಕಿಸುವ ಸ್ಥಿತಿಗೆ ನಾನು ಬಂದಿಲ್ಲ. ನಾನು ಸ್ವಾಮೀಜಿ ಬಳಿ ಬಂದಿದ್ದು, ಅವರ ಮಾತೃಶ್ರೀ ನಿಧನಕ್ಕೆ ಸಂತಾಪ ಸೂಚಿಸಲು ಬಂದಿದ್ದೆ,'' ಎಂದು ತಿಳಿಸಿದರು.

"ಇಲ್ಲಿ ಯಾವ ರಾಜಕಾರಣವನ್ನು ಚರ್ಚೆ ಮಾಡಿಲ್ಲ. ಇನ್ನೊಬ್ಬರನ್ನು ಸಚಿವನ್ನಾಗಿ ಮಾಡುವ ಶಕ್ತಿ ಇರುವ ನಾನು, ಸಚಿವನಾಗೋಕೆ ಲಾಬಿ ಮಾಡುತ್ತೇನಾ? ಅಂತ ಪ್ರಶ್ನಿಸಿದರು. ಇರುವ ಶಾಸಕ ಸ್ಥಾನವನ್ನೇ ಬಿಡುವ ಚಿಂತನೆ‌ ಮಾಡಿದ್ದೆ. ಇಲ್ಲಿ ಸಚಿವ ಸ್ಥಾನದ ಲಾಬಿ ಮಾಡುವ ಪ್ರಶ್ನೆಯೇ ಇಲ್ಲ. ಸರ್ಕಾರ ಬೀಳಿಸಿ ಸರ್ಕಾರ ರಚಿಸುವ ಶಕ್ತಿ ದೇವರು ಕೊಟ್ಟಿದ್ದಾನೆ. ಇಂತಹ ನಾನು ಸಚಿವನಾಗುವುದಕ್ಕೆ ಲಾಬಿ ಮಾಡುತ್ತೇನಾ? ನನಗೆ ಇನ್ನು ಆ ಸ್ಥಿತಿ ಬಂದಿಲ್ಲ. ಸಿಎಂ ಯಡಿಯೂರಪ್ಪ ಎರಡು ವರ್ಷ ಪೂರೈಸುತ್ತಾರೆ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲಿ ನಡೆಯಲಿದೆ. ನಾವು ಮತ್ತೇ ಅಧಿಕಾರಕ್ಕೆ ಬರುತ್ತೇವೆ,'' ಎಂದು ವಿಶ್ವಾಸ ವ್ಯಕ್ತಪಡಿಸಿದರು.

English summary
MLA Ramesh Jarkiholi says he quit the decision to resign as a legislator and will not return to Congress. Read on.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X