• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ತಾಯಿ ಚಾಮುಂಡೇಶ್ವರಿ ದಯೆಯಿಂದ ಆರೋಗ್ಯವಾಗಿದ್ದೇನೆ: ಶಾಸಕ ರಾಮದಾಸ್ ಟ್ವೀಟ್

|

ಮೈಸೂರು, ಅಕ್ಟೋಬರ್ 19: ಮೈಸೂರಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಅವರ ಆರೋಗ್ಯದಲ್ಲಿ ಸೋಮವಾರ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಬಗ್ಗೆ ತೀವ್ರ ಎದೆ ನೋವಿನಿಂದ ಚೇತರಿಸಿಕೊಂಡು ಟ್ವೀಟ್ ಮಾಡಿರುವ ಶಾಸಕ ಎಸ್.ಎ ರಾಮದಾಸ್, ""ಇಂದು ಬೆಳಗಿನ ಜಾವದಲ್ಲಿ ನನಗೆ ಸ್ವಲ್ಪ ಸುಸ್ತು ಹಾಗೂ ಎದೆ ನೋವು ಕಾಣಿಸಿಕೊಂಡಿತು. ತಕ್ಷಣವೇ ನಾನು ಸಮೀಪವಿರುವ ಜಯದೇವ ಹೃದ್ರೋಗ ಆಸ್ಪತ್ರೆಗೆ ತೆರಳಿ ಚಿಕಿತ್ಸೆಗೆ ಒಳಪಟ್ಟಿದ್ದೇನೆ'' ಎಂದು ತಿಳಿಸಿದ್ದಾರೆ.

ಬೇರೆ ಎಲ್ಲಾ ಪರೀಕ್ಷೆಗಳ ಜೊತೆಗೆ ಕೋವಿಡ್ ಪರೀಕ್ಷೆ ಕೂಡಾ ಮಾಡಿದ್ದು, ವರದಿಯಲ್ಲಿ ಕೊರೊನಾ ನೆಗೆಟಿವ್ ಎಂದು ಬಂದಿರುತ್ತದೆ, ನಾನು ತಾಯಿ ಚಾಮುಂಡೇಶ್ವರಿ ದಯೆಯಿಂದ ಆರೋಗ್ಯವಾಗಿದ್ದೇನೆ, ವೈದ್ಯರ ಸಲಹೆ ಮೇರೆಗೆ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ಟ್ವಿಟ್ಟರ್ ನಲ್ಲಿ ಹೇಳಿದ್ದಾರೆ.

ಮಾಜಿ ಸಚಿವ ಎಸ್.ಎ.ರಾಮದಾಸ್ ಅವರ ಆರೋಗ್ಯದಲ್ಲಿ ಏರುಪೇರಾಗಿ, ಸೋಮವಾರ ಮುಂಜಾನೆ 5 ಗಂಟೆ ಹೊತ್ತಿಗೆ ಅವರಿಗೆ ಏಕಾಏಕಿ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿತ್ತು.

ಕೂಡಲೇ ಮೈಸೂರಿನ ಜಯದೇವ ಆಸ್ಪತ್ರೆಗೆ ಶಾಸಕ ಎಸ್.ಎ ರಾಮದಾಸ್ ಅವರನ್ನು ದಾಖಲಿಸಲಾಗಿತ್ತು. ಕಳೆದ ಫೆಬ್ರುವರಿ ತಿಂಗಳಲ್ಲಿಯೂ ಶಾಸಕ ರಾಮದಾಸ್ ಅವರು ಮೈಸೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಆಗ ಅವರಿಗೆ ಲಘು ಹೃದಯಾಘಾತವಾಗಿತ್ತು. ಆನಂತರ ಹೃದಯಕ್ಕೆ ಸ್ಟಂಟ್ ಅಳವಡಿಕೆ ಮಾಡಲಾಗಿತ್ತು.

English summary
"I got a little tired and chest pain this morning. I was immediately rushed to the nearby Jayadeva Heart Hospital and treated' MLA SA Ramadas tweeted,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X