ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿಕ್ಷಕರಿಗೆ ವಿಶೇಷ ಆರ್ಥಿಕ ನೆರವು ಘೋಷಿಸಿ: ಶಾಸಕ ತನ್ವೀರ್ ಸೇಠ್ ಒತ್ತಾಯ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮೇ 25: ಕೋವಿಡ್ ಲಾಕ್‌ಡೌನ್‌ನಿಂದಾಗಿ ಅನುದಾನ ರಹಿತ ಶಾಲಾ ಹಾಗೂ ಕಾಲೇಜುಗಳ ಶಿಕ್ಷಕರು ವೇತನವಿಲ್ಲದೇ ಸಂಕಷ್ಟಕ್ಕೀಡಾಗಿದ್ದಾರೆ. ಅವರಿಗೆ ಕೋವಿಡ್ ವಿಶೇಷ ಆರ್ಥಿಕ ನೆರವು ಘೋಷಿಸುವಂತೆ ಸರ್ಕಾರಕ್ಕೆ ಶಾಸಕ ತನ್ವೀರ್ ಸೇಠ್ ಒತ್ತಾಯಿಸಿದ್ದಾರೆ.

ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆದಿರುವ ಶಾಸಕ ತನ್ವೀರ್ ಸೇಠ್, ಕೋವಿಡ್ ಸಂದರ್ಭದಲ್ಲಿ ಮಕ್ಕಳ ಹಿತದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ. ಇದರಿಂದ ಕೆಲಸ, ಸಂಬಳವಿಲ್ಲದೇ ಅನುದಾನ ರಹಿತ, ಖಾಸಗಿ ಅನುದಾನ ರಹಿತ ಶಾಲಾ-ಕಾಲೇಜುಗಳ ಶಿಕ್ಷಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಅವರಿಗೆ ಸರ್ಕಾರ ಕೂಡಲೇ ಆರ್ಥಿಕ ಸಹಾಯ ನೀಡಬೇಕು ಎಂದು ಆಗ್ರಹಿಸಿದರು.

ಕೊರೊನಾ ಸಂಕಷ್ಟದಲ್ಲಿ ವೃದ್ಧೆಯನ್ನು ಬೀದಿಪಾಲು ಮಾಡಿದ ಕುಟುಂಬಕೊರೊನಾ ಸಂಕಷ್ಟದಲ್ಲಿ ವೃದ್ಧೆಯನ್ನು ಬೀದಿಪಾಲು ಮಾಡಿದ ಕುಟುಂಬ

ಖಾಸಗಿ ಶಾಲಾ/ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಶಿಕ್ಷಕೇತರರು ಮತ್ತು ಕುಟುಂಬ ಸದಸ್ಯರು ಕೋವಿಡ್ ಸೋಂಕಿಗೆ ಒಳಗಾದರೆ ಚಿಕಿತ್ಸೆ ಪಡೆಯಲು ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಬೇಕು. ಈ ವರ್ಗದ ಎಲ್ಲಾ ಶಿಕ್ಷಕರಿಗೆ ಕರ್ನಾಟಕ ಶಿಕ್ಷಕರ ಕಲ್ಯಾಣ ನಿಧಿಯ ಅಜೀವ ಸದಸ್ಯತ್ವ ನೀಡಿ, ಅದರಡಿ ಶಾಲಾ ಶಿಕ್ಷಕರಿಗೆ ಇರುವ ಎಲ್ಲಾ ಸೌಲಭ್ಯವನ್ನು ಇವರಿಗೂ ನೀಡಬೇಕು ಎಂದು ಮನವಿ ಮಾಡಿದ್ದಾರೆ.

MLA Tanveer Sait Demanded Govt To Annouce Financial Aid To Non-Grant Teachers

ಪ್ರಸ್ತುತ ಸರ್ಕಾರಿ ಹಾಗೂ ಅನುದಾನಿತ ಶಾಲಾ ಹಾಗೂ ಕಾಲೇಜು ಶಿಕ್ಷಕರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಇದನ್ನು ಎಲ್ಲಾ ಶಿಕ್ಷಕರಿಗೂ ವಿಸ್ತರಿಸಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಜಾರಿಯಲ್ಲಿರುವ ಉಚಿತ ಸೈಕಲ್‌, ಬಿಸಿಯೂಟ, ಕ್ಷೀರಭಾಗ್ಯ ಮೊದಲಾದ ಯೋಜನೆಗಳಿಗೆ ನಿಗದಿಯಾಗಿದ್ದ ಅನುದಾನ ರಜೆ ಹಿನ್ನೆಲೆಯಲ್ಲಿ ಬಳಕೆಯಾಗಿಲ್ಲ. ಈ ಅನುದಾನವನ್ನು ಸಂಕಷ್ಟದಲ್ಲಿರುವ ಅನುದಾನ ರಹಿತ ಶಾಲಾ/ಕಾಲೇಜು ಶಿಕ್ಷಕರಿಗೆ ನೀಡುವಂತೆ ಪತ್ರದಲ್ಲಿ ಕೋರಿದ್ದಾರೆ.

English summary
Teachers of unaided schools and colleges have been inconvenienced without pay because of the Covid-19 lockdown. MLA Tanveer Sait has urged the government to announce special financial assistance.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X