ಮೈಸೂರು ಕಾಂಗ್ರೆಸ್‌ ಬಿಕ್ಕಟ್ಟು; ಡಿಕೆಶಿ ಭೇಟಿಗೆ ತನ್ವೀರ್ ಸೇಠ್‌ಗೆ ಕರೆ!

ಮೈಸೂರು, ಫೆಬ್ರವರಿ 26: ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ, ಉಪ ಮೇಯರ್ ಚುನಾವಣೆ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ಉಲ್ಬಣಿಸಿರುವ ಅಸಮಾಧಾನ ಮತ್ತಷ್ಟು ಬಿಗಡಾಯಿಸಿದೆ.

ಪಾಲಿಕೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಯೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದವು. ಆದರೆ, ಈ ಮೈತ್ರಿ ಇದೀಗ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ನಡುವೆ ಅಸಮಾಧಾನಕ್ಕೆ ಎಡೆಮಾಡಿಕೊಟ್ಟಿದೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಶಾಸಕ ತನ್ವೀರ್ ಸೇಠ್ ಬೆಂಬಲಿಗರು ಆಕ್ರೋಶಗೊಂಡು, ಪ್ರತಿಭಟನೆ ನಡೆಸಿದ್ದಾರೆ. ಶಾಸಕ ತನ್ವೀರ್ ಸೇಠ್‌ಗೆ ಕಾಂಗ್ರೆಸ್ ಹೈಕಮಾಂಡ್‌ ಬುಲಾವ್ ನೀಡಿದ್ದು, ಮಾರ್ಚ್ 1ರಂದು ಭೇಟಿಯಾಗುವಂತೆ ಸೂಚಿಸಿದೆ.

MLA Tanveer Sait To Meet DK Shiva Kumar On March 1

ತನ್ವೀರ್ ಸೇಠ್‌ ಅವರಿಗೆ ಕರೆ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ತಮ್ಮನ್ನು ಭೇಟಿ ಮಾಡುವಂತೆ ಸೂಚನೆ ನೀಡಿದ್ದಾರೆ. ಮಾರ್ಚ್ 1ರಂದು ತನ್ವೀರ್ ಸೇಠ್ ಡಿ. ಕೆ. ಶಿವಕುಮಾರ್ ಭೇಟಿಯಾಗಲಿದ್ದಾರೆ.

ಮೈಸೂರು ಮಹಾನಗರ ಪಾಲಿಕೆ ಆಡಳಿತದಿಂದ ಬಿಜೆಪಿಯನ್ನು ದೂರವಿಡುವ ಲೆಕ್ಕಾಚಾರದೊಂದಿಗೆ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ತೀರ್ಮಾನ ತೆಗೆದುಕೊಂಡ ತನ್ವೀರ್ ಸೇಠ್ ವಿರುದ್ಧ ಕೆಲವು ಪಕ್ಷದ ನಾಯಕರು ಅಸಮಾಧಾನಗೊಂಡಿದ್ದಾರೆ.

ಪಾಲಿಕೆಯಲ್ಲಿ ಬಿಜೆಪಿ ಆಡಳಿತ ನಡೆಸಲು ವಿಫಲವಾಗಿದೆ. ಆದರೆ, ಜೆಡಿಎಸ್ ಜೊತೆಗಿನ ಮೈತ್ರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒಪ್ಪಿಗೆ ಇರಲಿಲ್ಲ ಎಂಬುದು ಅಸಮಾಧಾನಕ್ಕೆ ಕಾರಣವಾಗಿದೆ. ಇದರಿಂದಾಗಿ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ಉಂಟಾಗಿದೆ.

ಮೇಯರ್ ಚುನಾವಣೆಯಲ್ಲಿ ಸಿದ್ದರಾಮಯ್ಯ ಮಾತು ಮೀರಿದವರಿಗೆ ನೋಟಿಸ್ ನೀಡುವ ಕುರಿತು ಸುದ್ದಿಗಳು ಹಬ್ಬಿವೆ. ಪ್ರಮುಖವಾಗಿ ಶಾಸಕ ತನ್ವೀರ್ ಸೇಠ್ ಸೇರಿದಂತೆ ಚುನಾವಣೆ ಜವಾಬ್ದಾರಿ ಹೊತ್ತ ಎಲ್ಲಾ‌ ನಾಯಕರಿಗೂ ನೋಟೀಸ್ ನೀಡಲಾಗುತ್ತದೆಯೇ? ಕಾದು ನೋಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+