ಸಾಮಾನ್ಯ ಕಾರ್ಯಕರ್ತನಂತೆ ಪಕ್ಷದ ಕಚೇರಿ ಕೆಲಸ ಮಾಡಿದ ಶಾಸಕ ತನ್ವೀರ್ ಸೇಠ್

ಮೈಸೂರು, ಜುಲೈ 28: ರಾಜ್ಯ ಸಚಿವರಾಗಿ, ಶಾಸಕರಾಗಿ ಕೆಲಸ ಮಾಡಿ ರಾಜಕೀಯದಲ್ಲಿ ತಮ್ಮದೇ ಪ್ರಭಾವ ಹೊಂದಿರುವ ಮೈಸೂರಿನ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್, ತಮ್ಮ ಪಕ್ಷದ ಕಚೇರಿಯಲ್ಲಿ ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡಿ ಸರಳತೆ ಮೆರೆದಿದ್ದಾರೆ.

ಕಳೆದ ಕೆಲವು ತಿಂಗಳುಗಳ ಹಿಂದೆ ಮಾರಣಾಂತಿಕ ಹಲ್ಲೆಗೊಳಗಾಗಿ ಚೇತರಿಸಿಕೊಂಡಿರುವ ಶಾಸಕ ತನ್ವೀರ್ ಸೇಠ್, ತಮ್ಮ ಕ್ಷೇತ್ರದಲ್ಲಿ ಹೆಚ್ಚಾಗಿರುವ ಕೊರೊನಾ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ.

MLA Tanveer Sait Who Worked In The Party Office As A Actvist

ಈ ನಡುವೆ ಮಾರಣಾಂತಿಕ ಹಲ್ಲೆಗೊಳಗಾಗಿ ಚೇತರಿಸಿಕೊಂಡಿರುವ ಶಾಸಕ ತನ್ವೀರ್ ಸೇಠ್, ಮಂಗಳವಾರ ಮೊದಲ ಬಾರಿಗೆ ನಗರ ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ ನೀಡಿದ್ದರು. ಈ ವೇಳೆ ಕೋವಿಡ್-19 ನಿಯಂತ್ರಿಸುವ ಸಂಬಂಧ ಮಂಗಳವಾರ ಸಂಜೆ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಗಾಗಿ ಸಿದ್ಧತೆ ಮಾಡಲಾಗುತ್ತಿತ್ತು.

MLA Tanveer Sait Who Worked In The Party Office As A Actvist

ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಕೈ ಜೋಡಿಸಿದ ಶಾಸಕ ತನ್ವೀರ್ ಸೇಠ್, ತಾವೂ ಸಹ ಕುರ್ಚಿಗಳನ್ನು ಜೋಡಿಸಿ, ಸಭೆಗೆ ಅಗತ್ಯವಿದ್ದ ಸಿದ್ಧತೆ ಪೂರ್ಣಗೊಳ್ಳಲು ಸಹಾಯ ಮಾಡಿದರು. ಶಾಸಕ ತನ್ವೀರ್ ಸೇಠ್ ಅವರು ಕಾರ್ಯಕರ್ತರ ಜೊತೆ ಬೆರೆತು ಕೆಲಸ ಮಾಡಿ, ಇತರೆ ನಾಯಕರಿಗೆ ಮಾದರಿಯಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+