ಮಗನ ಸೋಲಿನ ಸೇಡಿಗೆ ಸಂಸದೆ ವಿರುದ್ಧ ಕೀಳಾಗಿ ಮಾತನಾಡಬಾರದು
ಮೈಸೂರು, ಜುಲೈ 5: "ತಮ್ಮ ಮಗನ ಸೋಲಿನ ಸೇಡಿಗೆ ಒಬ್ಬ ಸಂಸದೆ ವಿರುದ್ಧ ಕೀಳುಮಟ್ಟಕ್ಕೆ ಇಳಿದು ಮಾತನಾಡುವುದು ಸರಿಯಲ್ಲ,'' ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಕಿಡಿಕಾರಿದರು.
ಮೈಸೂರು ನಗರದ ಖಾಸಗಿ ಹೋಟೆಲ್‌ನಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರೊಂದಿಗೆ ರಹಸ್ಯ ಮಾತುಕತೆ ನಡೆಸಿ, ಹೊರ ಬಂದ ಎಚ್. ವಿಶ್ವನಾಥ್, ಸಂಸದೆ ಸುಮಲತಾ ಹಾಗೂ ಕುಮಾರಸ್ವಾಮಿ ಮಾತಿನ ಸಮರ ವಿಚಾರಕ್ಕೆ ಪ್ರತಿಕ್ರಿಯಿಸಿದರು.
"ಮಿಸ್ಟರ್ ಕುಮಾರಸ್ವಾಮಿ ಮೈಂಡ್ ಯುವರ್ ಲಾಂಗ್ವೇಜ್, ನಿಮ್ಮ ಮಗನ ಸೋಲಿನ ಸೇಡನ್ನು ಈ ರೀತಿ ತೀರಿಸಿಕೊಳ್ಳುತ್ತಿದ್ದೀರಾ? ಎಂದು ಪ್ರಶ್ನಿಸಿ, ಅಣೆಕಟ್ಟಿನ ಸಮಸ್ಯೆ ಇದ್ದರೆ ಪರಿಶೀಲಿಸೋಣ ಅಂತಾ ಹೇಳಬೇಕು. ಅದನ್ನು ಬಿಟ್ಟು ಹೆಣ್ಣು ಮಗಳನ್ನು ಮಲಗಿಸಿ ಅಂದರೆ ಅದೆಂತಹ ಭಾಷೆ,'' ಎಂದು ಪ್ರಶ್ನಿಸಿದರು.
ಸುಮಲತಾ ರೆಬೆಲ್ ಆ್ಯಕ್ಟರ್, ರೆಬೆಲ್ ಸಂಸದೆ. ಜೊತೆಗೆ ಮಂಡ್ಯದ ಸೊಸೆ, ರೆಬೆಲ್‌ಸ್ಟಾರ್ ಅಂಬರೀಶ್ ಅವರ ಧರ್ಮಪತ್ನಿ. ಅಂತಹ ಹೆಣ್ಣು ಮಗಳಿಗೆ ಅವಮಾನ ಮಾಡುತ್ತೀರಾ? ಎರಡು ಬಾರಿ ಸಿಎಂ ಆದವರ ಬಾಯಲ್ಲಿ ಇಂತಹ ಮಾತು ಬರಬಾರದು,'' ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಗುಡುಗಿದರು.

ವಿಜಯೇಂದ್ರ ವಿರುದ್ಧ ಕಿಡಿ
ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅವರನ್ನು ಜೈಲಿಗೆ ಕಳುಹಿಸಿದ್ದೆ ಪುತ್ರ ವಿಜಯೇಂದ್ರ. ಅವರ ನಕಲಿ ಸಹಿ ಮಾಡಿ ಅವರನ್ನು ಜೈಲಿಗೆ ಕಳುಹಿಸಿದ್ದ. ಈಗ ಇಡೀ ಕುಟುಂಬವನ್ನು ಜೈಲಿಗೆ ಕಳುಹಿಸುತ್ತಾನೆ,'' ಎಂದು ವಿಜಯೇಂದ್ರ ವಿರುದ್ಧವೂ ಎಚ್. ವಿಶ್ವನಾಥ್ ವಾಗ್ದಾಳಿ ನಡೆಸಿದರು.

ಶ್ರೀರಾಮುಲು ಮುಗಿಸಲು ಹೊರಟಿರುವುದು ವಿಜಯೇಂದ್ರನೆ
"ವಿಜಯೇಂದ್ರನ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಈತನಿಂದ ಹಿಂದುಳಿದ ನಾಯಕರನ್ನು ತುಳಿಯುವ ಕೆಲಸವಾಗುತ್ತಿದೆ. ನನ್ನನ್ನು ರಾಜಕೀಯವಾಗಿ ಮುಗಿಸಿದ್ದೆ ಈತ. ರಮೇಶ್ ಜಾರಕಿಹೊಳಿ, ಶ್ರೀರಾಮುಲುರನ್ನು ಮುಗಿಸಲು ಹೊರಟಿರುವುದು ವಿಜಯೇಂದ್ರನೆ. ಜಾರಕಿಹೊಳಿ ಪ್ರಕರಣದಲ್ಲಿ ವಿಜಯೇಂದ್ರ ಪಾತ್ರ ಇದೆ. ಎಷ್ಟು ದಿನ ನಿಮ್ಮದು ನಡೆಯುತ್ತೇ ಎಂಬುದನ್ನು ನಾವು ನೋಡುತ್ತೇವೆ. ರಾಜಕಾರಣದಲ್ಲಿ ಇದು ಸರಿಯಲ್ಲ,'' ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ಸೋಮಶೇಖರ್‌ಗೆ ಟಾಂಗ್
"ಯಡಿಯೂರಪ್ಪ ವಿರುದ್ಧ ಮಾತನಾಡುವವರು ಅವರ ಧೂಳಿಗೂ ಸಮರಲ್ಲ,'' ಎಂಬ ಸಚಿವ ಎಸ್.ಟಿ. ಸೋಮಶೇಖರ್ ಹೇಳಿಕೆಗೆ ಪ್ರತಿಕ್ರಿಯಿಸಿ, ""ಸೋಮಶೇಖರ್, ನೀನು ಬೇಕಾದರೆ ಯಡಿಯೂರಪ್ಪನ ಪಾದ ನೆಕ್ಕು. ಅವರ ಮಗನ ಭ್ರಷ್ಟಾಚಾರ, ಅವ್ಯವಹಾರ ನಿಮ್ಮ ಕಣ್ಣಿಗೆ ಕಾಣುತ್ತಿಲ್ಲವಾ? ಎಂದು ಪ್ರಶ್ನಿಸಿ, ರಾಜ್ಯದಲ್ಲಿ 104 ಸ್ಥಾನ ಬಂದಿದ್ದು, ಯಡಿಯೂರಪ್ಪನಿಂದ ಅಲ್ಲ. 25 ಸಂಸದರು ಗೆದ್ದಿದ್ದು ಯಡಿಯೂರಪ್ಪರಿಂದ ಅಲ್ಲ. ಇದು ಆಗಿದ್ದು ಪ್ರಧಾನಿ ನರೇಂದ್ರ ಮೋದಿಯವರಿಂದ. ಅವರ ಹೆಸರನ್ನೇ ಕರ್ನಾಟಕದಲ್ಲಿ ಯಡಿಯೂರಪ್ಪ ಮರೆಸಿದ್ದಾರೆ,'' ಎಂದು ಸಿಎಂ ವಿರುದ್ಧ ಎಂಎಲ್‌ಸಿ ವಿಶ್ವನಾಥ್ ಗುಡುಗಿದರು.
ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲೇಬೇಕು
"ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲೇಬೇಕು. ಇದರ ಪ್ರಕ್ರಿಯೆ ನಡೆದಿದ್ದು, ಬಲ ಬರುವುದು ತಡವಾಗಬಹುದು, ಆದರೆ ಖಂಡಿತವಾಗಿ ಸಿಎಂ ಬದಲಾವಣೆ ಆಗಲಿದ್ದಾರೆ,'' ಎಂದು ಭವಿಷ್ ನುಡಿದರು.
"ಸಚಿವ ಯೋಗೇಶ್ವರ್ ಹೇಳಿಕೆ ಸಮರ್ಥಿಸಿಕೊಂಡ ಎಚ್. ವಿಶ್ವನಾಥ್, "ಸರ್ಕಾರದ ಯಾವುದೇ ಭ್ರಷ್ಟಾಚಾರದ ಬಗ್ಗೆ ವಿರೋಧ ಪಕ್ಷದವರು ಮಾತನಾಡುತ್ತಿಲ್ಲ. ಎಚ್.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ ಧ್ವನಿ ಎತ್ತುತ್ತಿಲ್ಲ. ಜಿಂದಾಲ್ ಭೂಮಿ ಪರಭಾರೆ ವಿಚಾರದಲ್ಲಿ ಬಿಜೆಪಿ ಸದಸ್ಯನಾಗಿರುವ ನಾನು ವಿರೋಧಿಸಿದೆ. ಆದರೆ ಬೇರೆ ಯಾರೂ ಇದನ್ನು ಕೇಳಲಿಲ್ಲ. ಇದರಿಂದ ಸ್ಪಷ್ಟವಾಗಿ ತಿಳಿಯಲಿದೆ,'' ಎಂದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications