ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಸಂಚಾರಿ ವಿಜ್ಞಾನ ಪ್ರಯೋಗಾಲಯಕ್ಕೆ ಚಾಲನೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಡಿಸೆಂಬರ್ 28: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ವಿಶೇಷ ಅಭಿವೃದ್ಧಿ ಯೋಜನೆ ಅನುದಾನದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಿರ್ಮಿಸಲಾಗಿರುವ ಸಂಚಾರಿ ವಿಜ್ಞಾನ ಪ್ರಯೋಗಾಲಯಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.

ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ಮುಂಭಾಗ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಚ್.ಹೊನ್ನೇಗೌಡ ಚಾಲನೆ ನೀಡಿದರು. ಬಳಿಕ ಮಾತನಾಡಿ, ಸಂಪೂರ್ಣ ವಿಜ್ಞಾನದ ಕುರಿತು ಮಾಹಿತಿಯನ್ನು ಹೊತ್ತಿರುವ ಈ ಪ್ರಯೋಗಾಲಯದ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು.[ಆಳ್ವಾಸ್ ವಿದ್ಯಾರ್ಥಿಗಳಿಂದ ವೈಜ್ಞಾನಿಕ ವಿಜ್ಞಾನ ಪ್ರದರ್ಶನ]

Mobile science laboratory flagged off in mysore university.

ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನ ತುಂಬಾ ಕಷ್ಟದ ವಿಷಯ ಎಂಬ ಭಾವನೆ ಇದೆ. ಅದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಈ ಸಂಚಾರಿ ಪ್ರಯೋಗಾಲಯ ಕರ್ತವ್ಯ ನಿರ್ವಹಿಸಲಿದೆ ಎಂದು ತಿಳಿಸಿದರು.[ಮೈಸೂರಲ್ಲೇ ಡಯಾಗ್ನೋಸ್ಟಿಕ್ ಪ್ರಯೋಗಾಲಯ ಸ್ಥಾಪಿಸಿ]

ಈ ಸಂದರ್ಭ ವಿಜ್ಞಾನ ಅಭಿವೃದ್ಧಿ ಸಮಿತಿ ಸಂಚಾಲಕ ಡಾ.ಎಂ.ಎಸ್.ಚಂದ್ರಶೇಖರ್, ವಿಜ್ಞಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರೊ ಕ್ಲೆಟಸ್ ಜೆ.ಎಂ.ಡಿಸೋಜಾ, ಮೈಸೂರು ವಿವಿ ಕುಲಸಚಿವ ಪ್ರೊ.ಆರ್.ರಾಜಣ್ಣ ಇತರರು ಹಾಜರಿದ್ದರು.

English summary
Mobile science laboratory flagged off in mysore university. The mobile science lab was built to take advantage of high school students, said Chancellor of Mysore University.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X