• search
 • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೋವಿಡ್ ಟೆಸ್ಟ್​ಗಾಗಿ ಮೈಸೂರು ಪಾಲಿಕೆಯಿಂದ ಮೊಬೈಲ್ ತಂಡ

By ಮೈಸೂರು ಪ್ರತಿನಿಧಿ
|

ಮೈಸೂರು, ಅಕ್ಟೋಬರ್ 20: ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಮೈಸೂರು ನಗರಕ್ಕೆ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ನಗರಕ್ಕೆ ಹೆಚ್ಚಿನ ಪ್ರವಾಸಿಗರು ಬರುತ್ತಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ಪರೀಕ್ಷೆಗಳನ್ನೂ ನಡೆಸಲು ತೀರ್ಮಾನಿಸಲಾಗಿದೆ.

ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸುವ ಸಲುವಾಗಿ ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಮೊಬೈಲ್ ತಂಡಗಳನ್ನು ರಚನೆ ಮಾಡಲಾಗಿದೆ.

ಮೈಸೂರು ದಸರಾ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ನಗರದ ವಿವಿಧ ಕೈಗಾರಿಕೆಗಳು, ವಾಣಿಜ್ಯೋದ್ಯಮಗಳು, ಶಾಲಾ-ಕಾಲೇಜು ಶಿಕ್ಷಣ ಸಂಸ್ಥೆಗಳು, ಸರ್ಕಾರಿ, ಸರ್ಕಾರೇತರ ಸಂಸ್ಥೆಗಳು ತಮ್ಮ ಸಿಬ್ಬಂದಿಗೆ ಕೊರೊನಾ ಪರೀಕ್ಷೆಯನ್ನು ಮಾಡಿಸಲು ಮುಂದಾಗುವುದಾದಲ್ಲಿ ನಗರ ಪಾಲಿಕೆಯ ಕಂಟ್ರೋಲ್ ರೂಮ್ 0821-2440890, ಮೊ.ಸಂ. 9449841196 ಗೆ‌ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಸರು ನೋಂದಾಯಿಸಿಕೊಂಡ ನಂತರ ಪಾಲಿಕೆಯ ಮೊಬೈಲ್ ತಂಡವು ನಿಮ್ಮ ಸ್ಥಳಕ್ಕೆ ಭೇಟಿ ನೀಡಿ ಉಚಿತವಾಗಿ ಕೋವಿಡ್ ಪರೀಕ್ಷೆಯನ್ನು ಮಾಡುವುದಾಗಿ ನಗರ ಪಾಲಿಕೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಮೈಸೂರಿನ ಕೊರೊನಾ ಪ್ರಕರಣಗಳು: ಮೈಸೂರು ಜಿಲ್ಲಿಯಲ್ಲಿ ಒಟ್ಟು 45,193 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಇದುವರೆಗೂ 37,319 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. 6,947 ಸಕ್ರಿಯ ಪ್ರಕರಣಗಳಿದ್ದು, ಕೊರೊನಾ ಸೋಂಕಿನಿಂದಾಗಿ 927 ಮಂದಿ ಸಾವನ್ನಪ್ಪಿದ್ದಾರೆ.

   ಹುಷಾರು!! ಇನ್ನು 3 ದಿನ ಮಳೆರಾಯನ ತಡಿಯೋಕ್ ಆಗಲ್ಲ | Oneindia Kannada

   English summary
   Mobile teams have been formed by Mysuru municipal corporation to conduct more covid tests
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X