• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೇಶಕ್ಕೆ ಮೋದಿ, ರಾಜ್ಯಕ್ಕೆ ಎಚ್ ಡಿಕೆ ಎಂದ ಸಚಿವ ಜಿ.ಟಿ ದೇವೇಗೌಡ

|

ಮೈಸೂರು, ಜುಲೈ 3: ದೇಶಕ್ಕೆ ಪ್ರಧಾನಿ ಮೋದಿ ಹಾಗೂ ರಾಜ್ಯಕ್ಕೆ ಸಿಎಂ ಕುಮಾರಸ್ವಾಮಿ. ಇದನ್ನು ಯಾರೂ ಬದಲಿಸಲು ಸಾಧ್ಯವಿಲ್ಲ ಎಂದಿದ್ದಾರೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ.

ಮತ್ತೆ ಮೋದಿಯನ್ನು ಹೊಗಳಿದ ಜಿಟಿ ದೇವೇಗೌಡ: ದಾಲ್ ಮೇ ಕಾಲಾ ಹೇ?

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ಐದು ವರ್ಷ ಅಧಿಕಾರ ನಡೆಸುತ್ತಾರೆ. ರಾಜ್ಯದಲ್ಲಿ ಸಿಎಂ ಎಚ್.ಡಿ ಕುಮಾರಸ್ವಾಮಿ ನಾಲ್ಕು ವರ್ಷ ಅಧಿಕಾರ ನಡೆಸುತ್ತಾರೆ. ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಯಾವುದೇ ತೊಂದರೆ ಇಲ್ಲ ಎಂದರು.

ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ನಿನ್ನೆ ನೀಡಿದ್ದ ಹೇಳಿಕೆಗೆ ಈಗಲೂ ಬದ್ಧ. ಮುಂದೆಯೂ ಬದ್ಧನಾಗಿಯೇ ಇರುತ್ತೇನೆ. ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಿಲ್ಲ. ಈ ವಿಚಾರದಲ್ಲಿ ಎರಡೆರಡು ಮಾತುಗಳಿಗೆ ಅವಕಾಶವೇ ಇಲ್ಲ. ಸರ್ಕಾರ ರಚನೆಯಾದ ಪ್ರಾರಂಭದಲ್ಲಿ ಬಿಜೆಪಿಯವರು ಪ್ರಯತ್ನ ಮಾಡಿದ್ದರು. ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾದ ಮೇಲೆ ಎಲ್ಲವೂ ನಿಂತು ಹೋಗಿದೆ ಎಂದರು.

English summary
Modi is for country and Kumaraswamy is for karnataka. Nobody can change this, said gt devegowda. By this statement, once again Minister G T Devegowda spoke in favor of BJP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X