ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೋದಿ ಈ ದೇಶ ಕಂಡ ಮೊದಲ ಅಹಿಂದ ಪ್ರಧಾನಿ; ಎಚ್.ವಿಶ್ವನಾಥ್‌

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜುಲೈ 4: "ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ದೇಶ ಕಂಡ ಮೊದಲ ಅಹಿಂದ ಪ್ರಧಾನಿ. ಅಹಿಂದ ಎಂದುಕೊಳ್ಳುವ ಸಿದ್ದರಾಮಯ್ಯ ಇದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಮೋದಿಗೂ, ದೇವರಾಜ ಅರಸು ಅವರಿಗೂ ಸಾಕಷ್ಟು ಸಾಮ್ಯತೆಯಿದೆ" ಎಂದು, ಪ್ರಧಾನಿ ನರೇಂದ್ರ ಮೋದಿಯವರ ಲಡಾಖ್ ಭೇಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ಟೀಕಿಸಿದ್ದಕ್ಕೆ ಉತ್ತರಿಸಿದ್ದಾರೆ ಮಾಜಿ ಸಚಿವ ಅಡಗೂರು ಎಚ್‌.ವಿಶ್ವನಾಥ್‌.

Recommended Video

ತುಂಬಿ ಹರಿದ ಕಾಗಿಣಾ ನದಿ, ನಡುಗಡ್ಡೆಯಲ್ಲಿ ಸಿಲುಕಿದ್ದ 8 ಜನರ ರಕ್ಷಣೆ | Oneindia Kannada

ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪ್ರಧಾನಿ ಮೋದಿ ಅವರಲ್ಲಿ ನಾನು ದೇವರಾಜ ಅರಸು ಅವರನ್ನು ಕಾಣುತ್ತಿದ್ದೇನೆ. ಮೋದಿಯವರನ್ನು ಟೀಕಿಸುವ ಮುನ್ನ ಯೋಚಿಸಿ ಮಾತನಾಡಿ. ಮೋದಿ ಈ ದೇಶ ಕಂಡ ಯಶಸ್ವಿ ನಾಯಕ. ದೇಶದ ಸಮಗ್ರತೆ, ಐಕ್ಯತೆ ಬಗ್ಗೆ ಮಾತನಾಡುವಾಗ ಎಚ್ಚರಿಕೆ ವಹಿಸಬೇಕು" ಎಂದು ಹೇಳಿದ್ದಾರೆ.

ನಡುಕ ಹುಟ್ಟಿಸಿದ ಮಾಜಿ ಸಚಿವ ಎಚ್. ವಿಶ್ವನಾಥ್ 'ಬಾಂಬೆ ಡೇಸ್' ಪುಸ್ತಕ!ನಡುಕ ಹುಟ್ಟಿಸಿದ ಮಾಜಿ ಸಚಿವ ಎಚ್. ವಿಶ್ವನಾಥ್ 'ಬಾಂಬೆ ಡೇಸ್' ಪುಸ್ತಕ!

 ಕಾಂಗ್ರೆಸ್ ನಾಯಕರ ಮೇಲೆ ಟೀಕಾಪ್ರಹಾರ

ಕಾಂಗ್ರೆಸ್ ನಾಯಕರ ಮೇಲೆ ಟೀಕಾಪ್ರಹಾರ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯಿಂದ ಪ್ರಧಾನಿ ನರೇಂದ್ರ ಮೋದಿ ಟೀಕೆ ವಿಚಾರವಾಗಿ ಮಾತನಾಡಿ, ಎಳಸು ಮುಂಡೇದೇ ಸರಿಯಾಗಿ ಮಾತನಾಡು ಎಂದು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮಾಯಾವತಿ ಪತ್ರ ಬರೆದು ರಾಹುಲ್ ಗಾಂಧಿಗೆ ಬುದ್ಧಿ ಹೇಳಿದ್ದಾರೆ. ದೇಶದ ಸಮಗ್ರತೆಯ ವಿಚಾರ ಬಂದಾಗ ಸರಿಯಾಗಿ ಮಾತನಾಡಬೇಕು. ನೀವು ನಿಮ್ಮ ಪಕ್ಷದ ಪ್ರಧಾನಿಗಳಿಗೆ ಸರಿಯಾದ ಗೌರವ ಕೊಟ್ಟಿಲ್ಲ. ಮನಮೋಹನ್ ಸಿಂಗ್, ನರಸಿಂಹರಾವ್ ಅವರನ್ನು ನೀವು ಹೇಗೆ ನಡೆಸಿಕೊಂಡಿರಿ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಟೀಕಾಪ್ರಹಾರ ನಡೆಸಿದರು.

"ಪ್ರತಿಪಕ್ಷ ನಾಯಕರು ದಾಖಲೆ ಕೊಡಲಿ"

ಕೊರೊನಾ ನಿರ್ವಹಣೆಯಲ್ಲಿ ಹಣ ದುರ್ಬಳಕ್ಕೆ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರಧಾನಿ ಮೋದಿ ವಿರುದ್ಧ ಆಪಾದನೆ ಮಾಡುತ್ತಿರುವ ಪ್ರತಿಪಕ್ಷಗಳ ನಾಯಕರು ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಕೇವಲ ಹಿಟ್ ಅಂಡ್ ರನ್‌ನಂತೆ ಆರೋಪ ಮಾಡಬೇಡಿ. ಕಾಂಗ್ರೆಸ್ ನಾಯಕರೇ ಅಪ್ರಬುದ್ಧರಂತೆ ಮಾತನಾಡಬೇಡಿ ಎಂದರು.

ನಾಮ ನಿರ್ದೇಶನದ ಮೂಲಕ ಪರಿಷತ್ ಸ್ಥಾನ; ಎಚ್ ವಿಶ್ವನಾಥ್ ಭರವಸೆನಾಮ ನಿರ್ದೇಶನದ ಮೂಲಕ ಪರಿಷತ್ ಸ್ಥಾನ; ಎಚ್ ವಿಶ್ವನಾಥ್ ಭರವಸೆ

 ಸಿದ್ದರಾಮಯ್ಯ ವಿರುದ್ಧ ವಿಶ್ವನಾಥ್ ವಾಗ್ದಾಳಿ

ಸಿದ್ದರಾಮಯ್ಯ ವಿರುದ್ಧ ವಿಶ್ವನಾಥ್ ವಾಗ್ದಾಳಿ

ಜೆಡಿಎಸ್ ಪ್ರಾಥಮಿಕ ಸದಸ್ಯತ್ವದಿಂದ ಕಿತ್ತು ಹಾಕಿದ್ದ ಸಿದ್ದರಾಮಯ್ಯರನ್ನು ಕಾಂಗ್ರೆಸ್‌ಗೆ ಕರೆ ತಂದಿದ್ದೇ ನಾನು. ಹಿಂದುಳಿದ‌ ವರ್ಗಗಳ ನಾಯಕ ಸಿದ್ದರಾಮಯ್ಯರನ್ನು ಈ ರಾಜ್ಯದ ಮುಖ್ಯಮಂತ್ರಿ ಮಾಡಿದ್ದಕ್ಕೆ ಪಶ್ಚಾತ್ತಾಪ ಆಗಿಲ್ಲ, ಸಂತೋಷವಾಗಿದೆ. ಆದರೆ, ಸಿದ್ದರಾಮಯ್ಯ ಎಲ್ಲರನ್ನೂ ತುಳಿಯುವ ಕೆಲಸ ಮಾಡಿದರು. ಎಲ್ಲರನ್ನೂ ತುಳಿಯುವುದೇ ಅವರ ಕೆಲಸವಾಗಿದೆ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

"ಪ್ರತಿರೋಧದ ಪಕ್ಷಗಳಿಂದ ಸರ್ಕಾರ ರಚಿಸಿದ್ದೇ ತಪ್ಪು"

ರಾಜ್ಯದಲ್ಲಿ ಎರಡು ಪ್ರತಿರೋಧದ ಪಕ್ಷಗಳು ಸೇರಿಕೊಂಡು ಸರ್ಕಾರ ರಚಿಸಿದ್ದೇ ಬ್ಲಂಡರ್. ಕಾಂಗ್ರೆಸ್-ಜೆಡಿಎಸ್ ಸರ್ಕಾರ ರಚನೆ ಮಾಡಿದ ಕ್ರಮ ಬ್ಲಂಡರ್. ನನಗೆ ಎಂ‌ಎಲ್‌ಸಿ ಸ್ಥಾನ ಸಿಗದಿದ್ದರೆ ಆಕಾಶಕ್ಕೂ ಹೋಗುವುದಿಲ್ಲ, ಪಾತಾಳಕ್ಕೂ ಹೋಗುವುದಿಲ್ಲ. ನನಗೆ ಎಂಎಲ್ ‌ಸಿ ಸ್ಥಾನ‌ ನೀಡಲು ಯಾವುದೇ ರೀತಿಯ ಕಾನೂನು ತೊಡಕಿಲ್ಲ ಎಂದು ಆಕಾಂಕ್ಷೆ ವ್ಯಕ್ತಪಡಿಸಿದರು.

English summary
Prime Minister Narendra Modi is the first Ahinda Prime Minister of this country. Im seeing Devaraju urs in modi said Former minister Adaguru H Viswanath in mysuru,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X