ಮೈಸೂರಿನಲ್ಲಿ ಹೆಚ್ಚಾದ ಸೋಂಕು; ನರಸಿಂಹರಾಜ ಕ್ಷೇತ್ರದಲ್ಲಿ ಮಿನಿ ಲಾಕ್ ಡೌನ್?

ಮೈಸೂರು, ಜುಲೈ 11: ಮೈಸೂರು ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಅದರಲ್ಲೂ ಮೈಸೂರಿನ ನರಸಿಂಹರಾಜ ಕ್ಷೇತ್ರದಲ್ಲಿ ಪ್ರಕರಣಗಳು ಹೆಚ್ಚಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಆತಂಕ ವ್ಯಕ್ತಪಡಿಸಿದ್ದಾರೆ.

Recommended Video

      Drone Prathap ಇಷ್ಟು ದಿನ ಹೇಳಿದ್ದೆಲ್ಲಾ ಸುಳ್ಳಾ ? | Oneindia Kannada

      ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನರಸಿಂಹರಾಜ ಕ್ಷೇತ್ರದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗಿವೆ. ನರಸಿಂಹರಾಜ ಕ್ಷೇತ್ರದ ಜನರು ಪರೀಕ್ಷೆಗೆ ಸಹಕಾರ ನೀಡುತ್ತಿಲ್ಲ. ಜೊತೆಗೆ ಕ್ಷೇತ್ರದಲ್ಲಿ ಸೋಂಕಿನ ಸಮುದಾಯ ಹರಡುವಿಕೆ ಆಗಿದೆ. ನರಸಿಂಹರಾಜ ಕ್ಷೇತ್ರವನ್ನು ಮಿನಿ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

       ಅಸಮಾಧಾನ ಹೊರಹಾಕಿದ ಸೋಮಶೇಖರ್

      ಅಸಮಾಧಾನ ಹೊರಹಾಕಿದ ಸೋಮಶೇಖರ್

      ಮೈಸೂರಿನ ನರಸಿಂಹರಾಜ ಕ್ಷೇತ್ರದಲ್ಲಿ ಸೋಂಕು ಸಮುದಾಯ ಹರಡುವಿಕೆ ಆಗಿದೆ. ಈ ಭಾಗದಲ್ಲಿ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಜಾಸ್ತಿಯಾಗಿದೆ. ಇಲ್ಲಿನ‌ ಜನರು ಪರೀಕ್ಷೆ ಮಾಡಿಸಿಕೊಳ್ಳಲು ಮುಂದೆ ಬರುತ್ತಿಲ್ಲ. ನಮ್ಮ ಅಧಿಕಾರಿಗಳಿಗೆ ಸಹಕಾರ‌ ನೀಡುತ್ತಿಲ್ಲ. ಅಲ್ಲಿನ ಶಾಸಕರು, ಇತರ ಮುಖಂಡರೊಂದಿಗೆ ಮಾತನಾಡಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

       ಮೈಸೂರು ಕೊರೊನಾ ವಾರಿಯರ್ಸ್ ‌‌ಗೆ ಪ್ರತ್ಯೇಕ ಆಸ್ಪತ್ರೆ

      ಮೈಸೂರು ಕೊರೊನಾ ವಾರಿಯರ್ಸ್ ‌‌ಗೆ ಪ್ರತ್ಯೇಕ ಆಸ್ಪತ್ರೆ

      ಮೈಸೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್ ‌‌ಗೆ ಚಿಕಿತ್ಸೆ ನೀಡಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಮಾಹಿತಿ ನೀಡಿದ್ದಾರೆ. ಈಗಾಗಲೇ 90 ಬೆಡ್‌ಗಳ ಆಸ್ಪತ್ರೆ ಸಿದ್ಧವಾಗಿದೆ. ಖಾಸಗಿ ಆಸ್ಪತ್ರೆಯವರ ಸಹಭಾಗಿತ್ವದಲ್ಲಿ ಎಲ್ಲಾ ಸಿದ್ಧತೆ ನಡೆಯುತ್ತಿದೆ. ಕೊರೊನಾ ಸಂದರ್ಭದಲ್ಲಿ ಪ್ರಾಣದ ಹಂಗು ತೊರೆದು ಇವರು ಕೆಲಸ ಮಾಡಿದ್ದಾರೆ. ಅವರಿಗೆ ವಿಶೇಷ ಸೇವೆ ನೀಡುವುದು ನಮ್ಮ ಕರ್ತವ್ಯ. ಹೀಗಾಗಿ ಅವರಿಗೆ ವಿಶೇಷ ಆಸ್ಪತ್ರೆ ವ್ಯವಸ್ಥೆ ಮಾಡಿದ್ದೇವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

       ಮೈಸೂರಿನ ಕೆಎಸ್ಒಯು ಭವನ ಇದೀಗ ಕೋವಿಡ್ ಸೆಂಟರ್

      ಮೈಸೂರಿನ ಕೆಎಸ್ಒಯು ಭವನ ಇದೀಗ ಕೋವಿಡ್ ಸೆಂಟರ್

      ಮೈಸೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ಹೊರವಲಯದ ಕೋವಿಡ್ ಕೇರ್ ಸೆಂಟರ್ ಸ್ಥಾಪನೆಗೆ ನಿರ್ಧರಿಸಲಾಗಿದೆ. ಮಂಡಕಳ್ಳಿಯಲ್ಲಿರುವ KSOU ಅಕಾಡೆಮಿಕ್ ಭವನ ಇದೀಗ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ ಮಾಡಲಾಗಿದೆ. ನೂತನ ಕೋವಿಡ್ ಕೇರ್ ಸೆಂಟರ್‌ ಇಂದು ಮೈಸೂರು‌ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.‌ ಸೋಮಶೇಖರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಚಿವ ಸೋಮಶೇಖರ್ ಗೆ ಶಾಸಕ ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಸೇರಿದಂತೆ ಮತ್ತಿತರ ಪ್ರಮುಖರು ಸಾಥ್ ನೀಡಿದರು.

       ಸಿದ್ದರಾಮಯ್ಯ ಆರೋಪಕ್ಕೆ ಸಚಿವ ಎಸ್‌ಟಿಎಸ್ ತಿರುಗೇಟು

      ಸಿದ್ದರಾಮಯ್ಯ ಆರೋಪಕ್ಕೆ ಸಚಿವ ಎಸ್‌ಟಿಎಸ್ ತಿರುಗೇಟು

      ಮೆಡಿಕಲ್ ಕಿಟ್ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂದು ಹೇಳಿಕೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯಗೆ ಎಸ್.ಟಿ.ಸೋಮಶೇಖರ್ ತಿರುಗೇಟು ನೀಡಿದ್ದಾರೆ. "ರೆಸಾರ್ಟ್‌ನಲ್ಲಿ ಕುಳಿತು ಆರೋಪಗಳನ್ನು ಮಾಡಬೇಡಿ. ವಿಧಾನಸೌಧಕ್ಕೆ ಬನ್ನಿ, ನಿಮಗೆ ಬೇಕಾದ ದಾಖಲೆ ಕೊಡುತ್ತೇವೆ. ಕೊರೊನಾ ವಿಚಾರದಲ್ಲಿ ಅವ್ಯವಹಾರ ಮಾಡುವವರು ಮನುಷ್ಯತ್ವ ಇಲ್ಲದವರು. ನಾವು ವೆಚ್ಚ ಮಾಡಿರುವುದೇ 550 ಕೋಟಿ. ಹೀಗಿರುವಾಗ 2 ಸಾವಿರ ಕೋಟಿ ಅವ್ಯವಹಾರ ಎನ್ನುತ್ತಿದ್ದಾರೆ. ಇದು ಹೇಗೆ ಸಾಧ್ಯ?" ಎಂದು ಪ್ರಶ್ನಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+