ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಶೇ.100ಕ್ಕಿಂತ ಹೆಚ್ಚು ಕೋವಿಡ್-19 ಪರೀಕ್ಷೆ: ಡಿಸಿ ರೋಹಿಣಿ ಸಿಂಧೂರಿ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಅಕ್ಟೋಬರ್ 8: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೋಂಕು ಹರಡುವಿಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮೈಸೂರಿನಲ್ಲಿ ಶೇ.100ಕ್ಕಿಂತ ಹೆಚ್ಚು ಕೋವಿಡ್-19 ಪರೀಕ್ಷೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾಹಿತಿ ನೀಡಿದ್ದಾರೆ.

ಮೈಸೂರಿನಲ್ಲಿ ಕಳೆದ ಸೆಪ್ಟೆಂಬರ್ ನಲ್ಲಿ ನಡೆಸಲಾದ ಕೋವಿಡ್-19 ಪರೀಕ್ಷೆಯ ಪ್ರಮಾಣ ಅತೃಪ್ತಿಕರವಾಗಿದ್ದು, ನಿಗದಿತ ಗುರಿಯ ಶೇ.45 ಮಾತ್ರವೇ ಪರೀಕ್ಷೆ ನಡೆಸಲಾಗಿತ್ತು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಎರಡು ವಾರ ಸಮಯ ಕೊಡಿ, ಕೊರೊನಾ ನಿಯಂತ್ರಣ ಮಾಡುತ್ತೇವೆ: ಮೈಸೂರು ಡಿಸಿ ರೋಹಿಣಿ ಸಿಂಧೂರಿಎರಡು ವಾರ ಸಮಯ ಕೊಡಿ, ಕೊರೊನಾ ನಿಯಂತ್ರಣ ಮಾಡುತ್ತೇವೆ: ಮೈಸೂರು ಡಿಸಿ ರೋಹಿಣಿ ಸಿಂಧೂರಿ

ಕೋವಿಡ್ ಪರೀಕ್ಷೆ ಮಾಡುವುದರಿಂದ ಕೊರೊನಾ ಸೋಂಕಿತರನ್ನು ಮೊದಲೇ ಗುರುತಿಸಲು ಮತ್ತು ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲು ಸಹಕಾರಿಯಾಗಿದೆ. ಪರೀಕ್ಷೆ ನಡೆಸುವುದರಿಂದ ಸೋಂಕು ಹರಡುವುದನ್ನು ತಡೆಯಬಹುದಾಗಿದೆ ಎಂದರು.

More Than 100% Covid-19 Test In Mysuru: DC Rohini Sindhuri

ಪ್ರಸ್ತುತ ಮೈಸೂರಿನಲ್ಲಿ ಪ್ರತಿನಿತ್ಯ ಶೇ.100 ಕ್ಕಿಂತ ಹೆಚ್ಚು ಕೋವಿಡ್-19 ಪರೀಕ್ಷೆ ನಡೆಸಲಾಗಿದ್ದು, ಅಕ್ಟೋಬರ್ 7 ರಂದು 124% ಸಾಧಿಸಲಾಗಿದೆ. ಕೋವಿಡ್ ಪರೀಕ್ಷೆ ನಡೆಸುವ ಸಲುವಾಗಿ ವಿಶೇಷ ಪರೀಕ್ಷಾ ತಂಡಗಳು, ಅಧಿಕಾರಿಗಳನ್ನು ನಗರ ಮತ್ತು ಜಿಲ್ಲೆಯ ಉಳಿದ ಭಾಗಗಳಿಗೆ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮೈಸೂರಿನಲ್ಲಿ ಕೋವಿಡ್-19 ನಿರ್ವಹಣೆಗೆ 4 ವಲಯಗಳಾಗಿ ವಿಂಗಡಿಸಲಾಗಿದೆ. ಇದಕ್ಕಾಗಿ ಹಿರಿಯ ಅಧಿಕಾರಿಗಳನ್ನು ತಂಡದೊಂದಿಗೆ ನೇಮಿಸಲಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಕಡಿವಾಣ ಹಾಕಲು ಎಲ್ಲಾ ಪ್ರಯತ್ನಗಳನ್ನು ಮುಂದುವರಿಸಲಿದೆ ಎಂದರು.

Recommended Video

Political Popcorn with Lavanya : Satish Jarkiholi, ರಾಗಿ ಮುದ್ದೆ ಗು ಸೈ ಜೋಳದ ರೊಟ್ಟಿಗೆ ಜೈ | part 02

ಇದರ ಜೊತೆ ಸಾರ್ವಜನಿಕರು ಸಹ ಸೋಂಕು ಹರಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು, ಜನದಟ್ಟಣೆ ತಪ್ಪಿಸುವ ಜತೆಗೆ ನೈರ್ಮಲ್ಯ ಕಾಪಾಡಿಕೊಳ್ಳುವಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ.

English summary
District Collector Rohini Sindhuri has informed that more than 100% Covid-19 is being tested in Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X