ಮೈಸೂರಿನಲ್ಲಿ ಕಲುಷಿತ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಮೈಸೂರು, ಜುಲೈ.26 :ಕಲುಷಿತ ಆಹಾರವನ್ನು ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ನಡೆದಿದೆ.
ನಗರದ ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿನ ವಿದ್ಯಾರ್ಥಿಗಳು ರಾತ್ರಿ ಊಟ ಸೇವನೆ ಬಳಿಕ ಅಸ್ವಸ್ಥಗೊಂಡಿದ್ದಾರೆ. ವಿದ್ಯಾರ್ಥಿಗಳನ್ನು ತಕ್ಷಣವೇ ಸಮೀಪದ ಕಾಮಾಕ್ಷಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಂಧ್ರ ಶೈಲಿಯ ರಾಜಾ ಕರಿಯಲ್ಲಿ ಹುಳುಗಳು ಕಂಡು ಬಂದಿತ್ತು ಎನ್ನಲಾಗಿದೆ. ಹುಳುಗಳಿದ್ದರೂ ವಿಧಿ ಇಲ್ಲದೆ ವಿದ್ಯಾರ್ಥಿಗಳು ಆಹಾರವನ್ನು ಸೇವಿಸಿದ್ದರು. ಊಟ ಮಾಡಿದ ಒಂದೇ ಗಂಟೆಯಲ್ಲಿ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಅದರಲ್ಲಿ 5 ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಈ ಕುರಿತಾಗಿ ಜಯಲಕ್ಷ್ಮೀ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.












Click it and Unblock the Notifications