ಕೆ ಆರ್ ಎಸ್ ನಲ್ಲಿ ಹೆಚ್ಚು ನೀರಿನ ಸಂಗ್ರಹ : ರೈತರ ಮೊಗದಲ್ಲಿ ಸಂತಸ

ಮೈಸೂರು, ಮಾರ್ಚ್ 16 :ಕೆಆರ್‌ಎಸ್‌ ಮತ್ತು ಕಬಿನಿ ಜಲಾಶಯಗಳಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಈ ಸಲ ಹೆಚ್ಚಿನ ನೀರಿನ ಸಂಗ್ರಹವಿದ್ದು ಮೈಸೂರು, ಬೆಂಗಳೂರು ಮತ್ತು ಮಂಡ್ಯ ಭಾಗದಲ್ಲಿ ಕುಡಿಯುವ ನೀರಿಗೆ ಬರ ಎದುರಾಗದು.

ಕೆಆರ್‌ಎಸ್‌ ಜಲಾಶಯದಲ್ಲಿ ಪ್ರಸ್ತುತ ನೀರಿನ ಮಟ್ಟ 102 ಅಡಿಗಳಷ್ಟಿದೆ. 45.05 ಟಿಎಂಸಿ ಅಡಿ ಸಾಮರ್ಥ್ಯದ ಜಲಾಶಯದಲ್ಲಿ 20.14 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ. ಕಳೆದ ವರ್ಷ ಇದೇ ಅವಧಿ ಯಲ್ಲಿ 9.57 ಟಿಎಂಸಿ ಅಡಿ ನೀರು ಇತ್ತು. ಬೆಂಗಳೂರು, ಮೈಸೂರು ನಗರ ಸೇರಿದಂತೆ ಇತರ 47 ಪಟ್ಟಣಗಳು, 625 ಗ್ರಾಮಗಳ ಜನರು ದಿನಬಳಕೆ ಮತ್ತು ಕುಡಿಯುವ ನೀರಿಗೆ ಕೆಆರ್‌ಎಸ್ ಜಲಾಶಯ ಅವಲಂಬಿಸಿದ್ದಾರೆ.

ಕೆಆರ್‌ಎಸ್‌ನಲ್ಲಿ ಹೆಚ್ಚಿನ ನೀರು ಇರುವುದರಿಂದ ಕುಡಿಯುವ ನೀರಿನ ಕೊರತೆ ಎದುರಾಗದು . ಬೆಂಗಳೂರು, ಮೈಸೂರು ಮತ್ತು ಇತರ ಪಟ್ಟಣಗಳ ನೀರಿನ ಅವಶ್ಯಕತೆ ಪೂರೈಸಲು ಪ್ರತಿ ತಿಂಗಳು ಮೂರು ಟಿಎಂಸಿ ಅಡಿ ನೀರಿನ ಅಗತ್ಯವಿದೆ. ಮುಂದಿನ ಮೂರು ತಿಂಗಳಿಗೆ 9 ಟಿಎಂಸಿ ಅಡಿ ನೀರು ಬೇಕು. ಈಗ ಇರುವ ನೀರನ್ನು ಇತರ ಚಟುವಟಿಕೆಗಳಿಗೆ ಬಳಸದೇ ಇದ್ದರೆ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗದು ಎಂದು ಹೇಳಿದ್ದಾರೆ.

more water storage in KRS and Kabini reservoir

ಕೃಷಿ ಚಟುವಟಿಕೆಗಳಿಗೆ ಬಿಡುವ ನೀರಿನ ಪ್ರಮಾಣವನ್ನು ಕಡಿಮೆಗೊಳಿಸಲಾಗಿದೆ. ಕಾವೇರಿ ಕಣಿವೆಯಲ್ಲಿ ಉತ್ತಮ ಮಳೆಯಾಗಿದ್ದರಿಂದ ಜುಲೈ ಎರಡನೇ ವಾರದಲ್ಲೇ ಜಲಾಶಯ ಭರ್ತಿಯಾಗಿತ್ತು. ಕಬಿನಿ ಜಲಾಶಯದಲ್ಲೂ ಕಳೆದ ಬಾರಿಗಿಂತ ಹೆಚ್ಚಿನ ನೀರಿನ ಸಂಗ್ರಹ ಇದೆ. 15.67 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 8.67 ಟಿಎಂಸಿ ಅಡಿ ನೀರಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 4.74 ಟಿಎಂಸಿ ಅಡಿ ನೀರು ಇತ್ತು. ಆದರೆ, ಹೇಮಾವತಿ, ಹಾರಂಗಿ ಜಲಾಶಯಗಳಲ್ಲಿ ಕಳೆದ ವರ್ಷಕ್ಕಿಂತಲೂ ಕಡಿಮೆ ನೀರಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+