'ರೋಹಿಣಿ ಸಿಂಧೂರಿಯ ಮೇಲ್ಮನವಿಯನ್ನೇ ಅಸಿಂಧುಗೊಳಿಸೋದಂದ್ರೆ... ಛೇ..!': ಪ್ರತಾಪ್ ಸಿಂಹ ಟಾಂಗ್

ಮೈಸೂರು, ಜುಲೈ 27: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.

ಚಾಮುಂಡಿ ಬೆಟ್ಟದ ತಪ್ಪಲಿನ ಕುರುಬಾರಹಳ್ಳಿ, ಆಲನಹಳ್ಳಿ, ಚೌಡಹಳ್ಳಿಯ ಭೂ ಮಾಲೀಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಹಿಂದಿನ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು.

ಈ ಹಿನ್ನೆಲೆಯಲ್ಲಿ ಮಹಿಳಾ IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಟಾಂಗ್ ಕೊಟ್ಟಿರುವ ಸಂಸದ ಪ್ರತಾಪ್ ಸಿಂಹ, "ಸಿಂಧೂರಿಯ ಮೇಲ್ಮನವಿಯನ್ನೇ ಅಸಿಂಧುಗೊಳಿಸೋದಂದ್ರೆ... ಛೇ..!, ಇದು ಫೇಸ್‌ಬುಕ್ ಪಂಡಿತರಿಗಾದ ಮುಖಭಂಗ ಅಲ್ವೇ..! ನ್ಯಾಯವಂತರಿಗಿದು ಕಾಲ ಅಲ್ಲ ಸ್ವಾಮಿ" ಎಂದು ಕಾಲೆಳೆದಿದ್ದಾರೆ.

Mysuru: MP Pratap Simha Reaction About Mysuru Dynasty Land Dispute Case

ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರತಾಪ್ ಸಿಂಹ, ರೋಹಿಣಿ ಸಿಂಧೂರಿ ಹಾಗೂ ಅವರ ಬೆಂಬಲಿಗರಿಗೆ ಪರೋಕ್ಷ ಟಾಂಗ್ ಕೊಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+