ಜೈಭಜರಂಗಿ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಪ್ರತಾಪ್ ಸಿಂಹ, ರಿಷಿಕುಮಾರ ಸ್ವಾಮೀಜಿ
ಮೈಸೂರು, ಡಿಸೆಂಬರ್ 23: ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಮೆರವಣಿಗೆಯಲ್ಲಿ ಸಂಸದ ಪ್ರತಾಪ್ ಸಿಂಹ, ರಿಷಿಕುಮಾರ ಸ್ವಾಮೀಜಿ ಜೈಭಜರಂಗಿ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ್ದಾರೆ.
ಪಟ್ಟಣದ ಕಲ್ಕುಣಿಕೆ ರಂಗನಾಥ ಬಡಾವಣೆಯಲ್ಲಿ 11 ಅಡಿ ಎತ್ತರದ ಆಂಜನೇಯಮೂರ್ತಿ, ವಾರಣಾಸಿಯಿಂದ ತರಿಸಿದ ಶ್ರೀರಾಮ, ಸೀತೆ ಹಾಗೂ ಲಕ್ಷ್ಮಣರ ಪಂಚಲೋಹ ಮೂರ್ತಿ, 6 ಅಡಿ ಪಂಚಲೋಹದ ಆಂಜನೇಯ ಮೂರ್ತಿಗೆ ಸಂಸದ ಪ್ರತಾಪ ಸಿಂಹ, ಶಾಸಕ ಎಚ್.ವಿಶ್ವನಾಥ್, ಮಾಜಿ ಶಾಸಕ ಎಚ್.ಪಿ.ಮಂಜುನಾಥ್, ನಗರಸಭಾಧ್ಯಕ್ಷ ಎಚ್.ವೈ.ಮಹದೇವ್ ಇನ್ನಿತರರು ಪುಷ್ಪಾರ್ಚನೆ ಮಾಡಿ 26ನೇ ಹನುಮ ಜಯಂತಿಯ ಭವ್ಯ ಮೆರವಣಿಗೆಗೆ ಚಾಲನೆ ನೀಡಿದರು.
ಮೆರವಣಿಗೆ ಆರಂಭವಾಗುತ್ತಿದ್ದಂತೆ ತಾಲ್ಲೂಕಿನ ವಿವಿಧ ಕಡೆಗಳಿಂದ ಯುವಕರು ಜಮಾವಣೆಗೊಂಡರು. ಸುಮಾರು 20 ಸಾವಿರಕ್ಕೂ ಹೆಚ್ಚು ಮಂದಿ ಮೆರವಣಿಗೆಗೆ ಸಾಕ್ಷಿಯಾದರು. ಮೆರವಣಿಗೆಯಲ್ಲಿ ಕೇಸರಿ ಬಾವುಟಗಳು ಹಾರಾಡಿದವು. ಯುವಕರು ಬಾವುಟಗಳನ್ನು ಹಿಡಿದು ಜೈಕಾರ ಕೂಗುತ್ತಾ ಸಂತಸಪಟ್ಟರು. ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಕೇಸರಿ ಬಾವುಟ ಹಿಡಿದು ಪಿರಮಿಡ್ ರಚಿಸಿ 'ಜೈ ಭಜರಂಗಬಲಿ' ಎಂದು ಘೋಷಣೆಗಳನ್ನು ಕೂಗಿದರು.
ಮೆರವಣಿಗೆಯಲ್ಲಿ ಕೇರಳದಿಂದ ಕರೆಸಿದ್ದ ಚೆಂಡೆ ವಾದನಕ್ಕೆ ಜನ ಕುಣಿದು ಕುಪ್ಪಳಿಸಿದರು. ಪಟ್ಟಣ ವ್ಯಾಪ್ತಿಯ ಕಲ್ಕುಣಿಕೆ ಕನಕದಾಸ, ವಾಲ್ಮೀಕಿ ಗರಡಿಮನೆ, ಕರೀಗೌಡರ ಬೀದಿ, ಸರಸ್ವತಿಪುರಂ, ಬನ್ನೀಬೀದಿ ಗರಡಿಮನೆ ಬಡಾವಣೆಗಳ ಆಂಜನೇಯ ವಿಗ್ರಹಗಳುನ್ನು ಮೆರವಣಿಗೆಯಲ್ಲಿ ಕರೆತರಲಾಯಿತು.

ಮೆರವಣಿಗೆಯಲ್ಲಿ ಸಾಗಿದ ಜನಪ್ರತಿನಿಧಿಗಳು
ಯುವಪಡೆ ಆಂಜನೇಯನ ವೇಷ ತೊಟ್ಟು ಎಲ್ಲರ ಗಮನಸೆಳೆದರು. ಈ ಬಾರಿ ಮೆರವಣಿಗೆಯಲ್ಲಿ ಜನಪ್ರತಿನಿಧಿಗಳಿಗೆ ವಾಹನ ಬಳಕೆ ನಿಷೇಧಿಸಿದ್ದರಿಂದ ಸಂಸದ, ಶಾಸಕರು ಹಾಗೂ ಜನಪ್ರತಿನಿಧಿಗಳು ಮೆರವಣಿಗೆಯಲ್ಲಿ ಸಾಗಿದರು.

ರಕ್ಷಣೆಗೆ ಮುಂದಾದ ಪೊಲೀಸರು
ಮೆರವಣಿಗೆಯಲ್ಲಿ ಸಂಸದ ಪ್ರತಾಪ ಸಿಂಹ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಯುವಕರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಪೊಲೀಸರು ರಕ್ಷಣೆಗೆ ಮುಂದಾದರು. ರಕ್ಷಣೆ ದೃಷ್ಟಿಯಿಂದ ಪ್ರತಾಪ ಸಿಂಹ ಅವರನ್ನು ಆಟೊದಲ್ಲಿ ಹತ್ತಿಸಿದರು.

ಭಕ್ತಿ ಹೆಚ್ಚುತ್ತಿರುವುದು ಖುಷಿಯ ವಿಷಯ
ಮೆರವಣಿಗೆ ಆರಂಭಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಪ್ರತಾಪ ಸಿಂಹ, ಈ ಬಾರಿ ಸೌಹಾರ್ದತಯುತವಾಗಿ, ಯಾವುದೇ ಗೊಂದಲವಿಲ್ಲದೇ ಹನುಮ ಜಯಂತಿ ಆಚರಣೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದು ಸಂತಸದ ವಿಷಯವಾಗಿದೆ. ಹುಣಸೂರಿನಲ್ಲಿ ಮಾತ್ರ ನಡೆಯುತ್ತಿದ್ದ ಹನುಮ ಜಯಂತಿ ಈಗ ಪಿರಿಯಾಪಟ್ಟಣ, ಕೆ.ಆರ್.ನಗರ, ಎಚ್.ಡಿ.ಕೋಟೆ, ನಂಜನಗೂಡು ತಾಲ್ಲೂಕಿನಲ್ಲೂ ನಡೆಯುತ್ತಿದೆ. ಹನುಮ ಜಯಂತಿಯ ಮೂಲಕ ಜನರಲ್ಲಿ ಧಾರ್ಮಿಕ ಶ್ರದ್ಧೆ, ಭಕ್ತಿ ಹೆಚ್ಚುತ್ತಿರುವುದು ಖುಷಿಯ ವಿಷಯ ಎಂದರು.

ಕಾಳಿ ಸ್ವಾಮಿ ಡ್ಯಾನ್ಸ್
ಜೈ ಭಜರಂಗಿ ಹಾಡಿಗೆ ಸಂಸದ ಪ್ರತಾಪ್ ಸಿಂಹ ಡಾನ್ಸ್ ಮಾಡುತ್ತಿದ್ದ ವೇಳೆ ಕಾಳಿ ಸ್ವಾಮಿ ಕೂಡ ಸಖತ್ ಡ್ಯಾನ್ಸ್ ಮಾಡಿದರು. ಇವರ ನೃತ್ಯ ಕಂಡು ಯುವಕರು ಕೂಡ ಹುಚ್ಚೆದ್ದು ಕುಣಿದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications