ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮತದಾನ
ಮೈಸೂರು, ಮೇ 12: ಮೈಸೂರು-ಕೊಡಗು ಬಿಜೆಪ ಸಂಸದ ಪ್ರತಾಪ್ ಸಿಂಹ ಅವರು ಅವರ ಪತ್ನಿ ಸಮೇತರಾಗಿ ಬಂದು ಮತದಾನ ಮಾಡಿದರು.
ಪತ್ನಿ ಅರ್ಪಿತಾ ಸಿಂಹ ಅವರ ಜೊತೆಯಾಗಿ ಬಂದ ಪ್ರತಾಪ್ ಸಿಂಹ ಅವರು ವಿಜಯನಗರ ಕಾನ್ ಕಾರ್ಡ್ ಇಂಟರ್ನ್ಯಾಷನಲ್ ಸ್ಕೂಲ್ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಮತದಾನ ಮಾಡಿರುವ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಅವರು, ಮತದಾನ ಮಾಡಿ ಅದರ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿ ಎಂದು ಕೇಳಿದ್ದಾರೆ.

ಪ್ರತಾಪ್ ಸಿಂಹ ಅವರು ಮೈಸೂರಿನ ಹಲವು ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದರು, ಮೈಸೂರು ಭಾಗದಲ್ಲಿ ಬಿಜೆಪಿ ಗೆದ್ದೆ ಗೆಲ್ಲುತ್ತದೆ ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರ ಹಿಡಿಯಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.












Click it and Unblock the Notifications