ಶೀಘ್ರವೇ ಎರಡನೇ ಹಂತದ ಪರಿಹಾರ ಗ್ಯಾರಂಟಿ; ಶ್ರೀನಿವಾಸ್ ಪ್ರಸಾದ್

ಮೈಸೂರು, ಅಕ್ಟೋಬರ್ 22: "ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಕೂಡಲೇ ಎರಡನೇ ಹಂತದ ಪರಿಹಾರ ನೀಡಲಿದೆ" ಎಂದು ಖಚಿತವಾಗಿ ಹೇಳಿದ್ದಾರೆ ಸಂಸದ ವಿ.ಶ್ರೀನಿವಾಸ್ ಪ್ರಸಾದ್. ಮುಖ್ಯಮಂತ್ರಿಗಳು ಹಾಗೂ ರಾಜ್ಯದ ಸಂಸದರು ಕೇಂದ್ರದ ಮೇಲೆ ಒತ್ತಡ ತಂದು ಹಣ ಬಿಡುಗಡೆ ಮಾಡಿಸಲಿದ್ದೇವೆ ಎಂದು ತಿಳಿಸಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಈಗಾಗಲೇ ಕೇಂದ್ರ ಮೊದಲ ಹಂತದಲ್ಲೇ 1200 ಕೋಟಿ ರೂ ಹಣ ಬಿಡುಗಡೆ ಮಾಡಿದೆ. ಆ ಹಣವನ್ನು ರಾಜ್ಯ ಸರ್ಕಾರ ನಿರಾಶ್ರಿತರಿಗೆ ತಲುಪಿಸುವ ಕೆಲಸ ಮಾಡುತ್ತಿದೆ. ಆದರೆ ನೆರೆಪರಿಹಾರ ವಿಚಾರದಲ್ಲಿ ವಿರೋಧ ಪಕ್ಷದವರು ವಿನಾ ಕಾರಣ ಟೀಕಿಸುತ್ತಿದ್ದಾರೆ. ರಾಜ್ಯ ಸರ್ಕಾರ ಸಂಪನ್ಮೂಲ ಕ್ರೋಢೀಕರಿಸಿ ಕೇಂದ್ರ ನೀಡಿದ ಪರಿಹಾರದ ಜೊತೆ ಹೆಚ್ಚಿನ ಹಣವನ್ನು ವಿತರಿಸುವ ಆಲೋಚನೆಯಲ್ಲಿದೆ. ನಿರಾಶ್ರಿತರು ಆತಂಕ ಪಡುವ ಪ್ರಮೇಯವಿಲ್ಲ" ಎಂದು ಭರವಸೆ ನೀಡಿದರು.

Recommended Video

      ಒಕ್ಕಲಿಗರ ಪ್ರತಿಭಟನಾ ರ‍್ಯಾಲಿಗೆ ಕುಮಾರಸ್ವಾಮಿ ಗೈರಾದ ಹಿಂದಿನ ಕಾರಣ ಬಯಲು | Oneindia Kannada

      ಹುಣಸೂರು ಉಪ ಚುನಾವಣಾ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಂಸದರು, "ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ನನ್ನದೇನೂ ಪಾತ್ರವಿಲ್ಲ. ರಾಜ್ಯದ ನಾಯಕರು ಹಾಗೂ ಸ್ಥಳೀಯ ನಾಯಕರು ಅಭ್ಯರ್ಥಿ ಯಾರೆಂದು ನಿರ್ಧರಿಸಲಿದ್ದಾರೆ. ಆದರೆ ಚುನಾವಣಾ ಪ್ರಚಾರದಲ್ಲಿ ಮಾತ್ರ ಸಕ್ರಿಯವಾಗಿ ಪಾಲ್ಗೊಂಡು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇನೆ" ಎಂದು ತಿಳಿಸಿದರು.

      MP Srinivas Prasad Assured That Government Will Give 2nd Stage Relief Fund

      ಮಹಾರಾಷ್ಟ್ರ ಹಾಗೂ ಹರಿಯಾಣ ಚುನಾವಣೆಯ ಸಮೀಕ್ಷೆ ವಿಚಾರ ಕುರಿತು ಪ್ರತಿಕ್ರಿಯಿಸಿ, "ಮಹಾರಾಷ್ಟ್ರ ಹಾಗೂ ಹರಿಯಾಣ ಸೇರಿದಂತೆ ದೇಶದಲ್ಲಿ ನಡೆಯುವ ಎಲ್ಲ ಉಪ ಚುನಾವಣೆಗಳಲ್ಲೂ ಬಿಜೆಪಿ ಭರ್ಜರಿ ಗೆಲುವು ದಾಖಲಿಸಲಿದೆ ಎಂದು ಎಲ್ಲಾ ಸಮೀಕ್ಷೆಗಳು ತಿಳಿಸಿವೆ. ಈ ಫಲಿತಾಂಶದಿಂದ ಬಿಜೆಪಿ ದೇಶದಲ್ಲಿ ಮತ್ತಷ್ಟು ಗಟ್ಟಿಗೊಳ್ಳಲಿದೆ. ಈ ಫಲಿತಾಂಶವು ದೇಶದ ಜನರ ಭಾವನೆಯಲ್ಲಿ ಬಿಜೆಪಿ ಇರುವ ಕುರಿತು ಸ್ಪಷ್ಟಪಡಿಸುತ್ತಿದೆ" ಎಂದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+