MUDA Case: ಮುಡಾ ಹಗರಣ; ನಿವೃತ್ತ ಐಎಎಸ್‌ ಅಧಿಕಾರಿ ವಿಚಾರಣೆಗೆ ಹಾಜರು

ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಡಿಸೆಂಬರ್ ವೇಳೆಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕಾಗಿರುವ ಕಾರಣ, ಎಲ್ಲಾ ರೀತಿಯಿಂದಲೂ ವಿಚಾರಣೆ ಮಾಡುತ್ತಿದ್ದಾರೆ. ಇತ್ತೀಚೆಗೆ ತಾನೆ ಹಿಂದೆ ಇಲ್ಲಿ ಡಿಸಿಯಾಗಿದ್ದ ಕುಮಾರನಾಯ್ಕ್ ವಿಚಾರಣೆ ಬಂದು ಹೋಗಿದ್ದರು. ಇದೀಗ ನಿವೃತ್ತ ಐಎಎಸ್ ಅಧಿಕಾರಿ ಎಸ್.ಪಾಲಯ್ಯ ಅವರು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ಪಾಲಯ್ಯ 2004-05ರಲ್ಲಿ ಮೈಸೂರಿನ ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಕೆಲ ಕಾಲ ಮುಡಾದ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವಮೈದುನ ಮಲ್ಲಿಕಾರ್ಜುನ ಸ್ವಾಮಿ ಅವರು ದೇವರಾಜು ಅವರಿಂದ ಕೆಸರೆ ಗ್ರಾಮದ ಸರ್ವೆ ಸಂಖ್ಯೆ 464ರಲ್ಲಿನ ಜಮೀನು ಖರೀದಿಸಿದ ವೇಳೆ ಜಮೀನು ಪರಭಾರೆ, ಖಾತೆ ಸೇರಿದಂತೆ ಕೆಲವು ಕಡತಗಳಿಗೆ ಪಾಲಯ್ಯ ಅವರು ಅಪರ ಜಿಲ್ಲಾಧಿಕಾರಿ ಕರ್ತವ್ಯ ನಿರ್ವಹಿಸಿದ್ದ ವೇಳೆ ಸಹಿ ಮಾಡಿದ್ದರಿಂದ ಅವರನ್ನು ವಿಚಾರಣೆ ನಡೆಸಲಾಗಿದೆ.

muda case lokayukta police investigate retired ias officer

ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಸಂಬಂಧ ವಿಚಾರಣೆ ನಡೆಸುತ್ತಿರುವ ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್ ಮತ್ತು ತಂಡ, ಮೈಸೂರಿನಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಪಾಲಯ್ಯ ಅವರಿಗೂ ಈ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು.

ಮೊದಲ ಬಾರಿ ನೋಟಿಸ್‌ ನೀಡಿದ್ದರೂ ಬಾರದ ಹಿನ್ನೆಲೆ ಮತ್ತೊಮ್ಮೆ ನೋಟಿಸ್ ನೀಡಲಾಗಿತ್ತು. ಗುರುವಾರ ಬೆಳಗ್ಗೆ 11.15ಕ್ಕೆ ಲೋಕಾಯುಕ್ತ ಕಚೇರಿಗೆ ಆಗಮಿಸಿದ ಪಾಲಯ್ಯ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಪ್ರಕರಣ ಸಂಬಂಧ ಒಂದೂವರೆ ಗಂಟೆ ವಿಚಾರಣೆ ನಡೆಸಿ ಅಗತ್ಯ ಮಾಹಿತಿ ಪಡೆದುಕೊಂಡಿದ್ದಾರೆ.

ವಿಚಾರಣೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ನಿವೃತ್ತ ಐಎಎಸ್ ಅಧಿಕಾರಿ ಪಾಲಯ್ಯ, ಅಧಿಕಾರಿಗಳು ಮೊದಲ ನೋಟಿಸ್ ಕೊಟ್ಟಾಗ ಬೇರೆ ಕೆಲಸ ಇದ್ದ ಕಾರಣ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಲಿಲ್ಲ. ಇಂದು ವಿಚಾರಣೆಗೆ ಹಾಜರಾಗಿದ್ದೇನೆ, ಜಮೀನಿನ ವಿಚಾರದಲ್ಲಿ ನಾನು ಸಹಿ ಮಾಡಿದ ಕಡತಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಪ್ರಶ್ನೆಗಳನ್ನು ಕೇಳಿದ್ದು, ಉತ್ತರಿಸಿದ್ದೇನೆ ಎಂದು ಮಾಹಿತಿ ನೀಡಿದರು.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಹೆಸರು ಕೇಳಿ ಬಂದ ಬಳಿಕ ಪ್ರಕರಣ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಕೋರ್ಟ್ ಸಿದ್ದರಾಮಯ್ಯ ಅವರ ಅರ್ಜಿಯನ್ನು ತಿರಸ್ಕರಿಸಿ, ಡಿಸೆಂಬರ್ 22ರ ಒಳಗಾಗಿ ತನಿಖಾ ವರದಿಯನ್ನು ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ಕೊಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+