ಮೈಸೂರು ನಗರದಲ್ಲೂ ಪೆರಿಫೆರಲ್‌ ರಿಂಗ್‌ ರಸ್ತೆ ನಿರ್ಮಾಣ

ಮೈಸೂರು, ಆಗಸ್ಟ್ 11; ಮೈಸೂರು ನಗರಕ್ಕೆ ಪೆರಿಫೆರಲ್‌ ರಿಂಗ್‌ ರಸ್ತೆ ನಿರ್ಮಾಣ ಮಾಡುವ ಯೋಜನೆಗೆ ಚಾಲನೆ ಸಿಕ್ಕಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಯೋಜನೆ ಡಿಪಿಆರ್ ತಯಾರು ಮಾಡಲು ಪ್ರಸ್ತಾವನೆಯನ್ನು ಆಹ್ವಾನಿಸಿದೆ.

ಮುಡಾ ಪೆರಿಫೆರಲ್‌ ರಿಂಗ್‌ ರಸ್ತೆ ನಿರ್ಮಾಣದ ಕುರಿತು ವಿಸ್ತೃತ ಯೋಜನಾ ವರದಿ (ಡಿಪಿಆರ್) ಮತ್ತು ಕಾರ್ಯಸಾಧ್ಯತೆಯ ಅಧ್ಯಯನ ವರದಿಯನ್ನು ತಯಾರು ಮಾಡಲು ತಜ್ಞರಿಗೆ ಆಹ್ವಾನ ಕೊಟ್ಟಿದೆ.

MUDA Invited Proposals For Prepare DPR For Mysuru Peripheral Ring Road

ಎಲ್ಲಾ ಪ್ರಸ್ತಾವನೆಗಳನ್ನು ಸ್ವೀಕಾರ ಮಾಡಿದ ಬಳಿಕ ಕಡಿಮೆ ವೆಚ್ಚದ ಆಯ್ಕೆ ವಿಧಾನ (ಎಲ್‍ಸಿಎಸ್)ದಲ್ಲಿ ಒಬ್ಬರನ್ನು ಆಯ್ಕೆ ಮಾಡಲಾಗುತ್ತದೆ. 2023ರಲ್ಲಿ ಮೈಸೂರು ನಗರದ ವಾಹನ ಸಂಚಾರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಪೆರಿಫೆರಲ್‌ ರಿಂಗ್‌ ರಸ್ತೆ ನಿರ್ಮಾಣ ಯೋಜನೆ ರೂಪಿಸಲಾಗುತ್ತಿದೆ.

ರಿಂಗ್ ರಸ್ತೆ ಮೀರಿ ಬೆಳೆದ ನಗರ; ಮೈಸೂರು ನಗರ ರಿಂಗ್ ರಸ್ತೆಯ ವ್ಯಾಪ್ತಿಯನ್ನು ಮೀರಿ ಬೆಳೆದಿದೆ. ನಗರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿಗಳನ್ನು ಸಂಪರ್ಕಿಸುವ ರೀತಿಯಲ್ಲಿ ಪೆರಿಫೆರಲ್‌ ರಿಂಗ್‌ ರಸ್ತೆ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುತ್ತಿದೆ.

ಸುಮಾರು 73.25 ಕಿ. ಮೀ. ಉದ್ದದ ಪೆರಿಫೆರಲ್‌ ರಿಂಗ್‌ ರಸ್ತೆ 6 ಪಥವನ್ನು ಒಳಗೊಂಡಿರಲಿದೆ. ಈಗಿರುವ ರಿಂಗ್ ರಸ್ತೆ ಮತ್ತು ಹೊಸದಾಗಿ ನಿರ್ಮಾಣವಾಗುವ ಪೆರಿಫೆರಲ್‌ ರಿಂಗ್‌ ರಸ್ತೆ ನಡುವೆ ವಾಣಿಜ್ಯ ಕ್ಲಸ್ಟರ್ ನಿರ್ಮಾಣ ಮಾಡಲು ಮುಡಾ ಚಿಂತನೆ ನಡೆಸಿದೆ.

ಐಟಿ & ಬಿಟಿ, ಫಾರ್ಮಾಸಿಟಿಕಲ್, ಶಿಕ್ಷಣ ಮತ್ತು ಆರೋಗ್ಯ ಹೀಗೆ ವಿವಿಧ ಮಾದರಿಯ ಕ್ಲಸ್ಟರ್ ನಿರ್ಮಾಣ ಮಾಡುವ ಗುರಿ ಇದೆ. ನಗರದ ಆರ್ಥಿಕ ಬೆಳವಣಿಗೆ ಪ್ರಕೃತಿ ಸೌಂದರ್ಯಕ್ಕೆ ಯಾವುದೇ ರೀತಿಯ ಧಕ್ಕೆ ಉಂಟು ಮಾಡದಂತೆ ನೋಡಿಕೊಳ್ಳಬೇಕು ಎಂದು ಮುಡಾ ಹೇಳಿದೆ.

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ 2022ರಲ್ಲಿಯೇ ಪೆರಿಫೆರಲ್‌ ರಿಂಗ್‌ ರಸ್ತೆ ನಿರ್ಮಾಣ ಮಾಡುವ ಕುರಿತು ಮುಡಾ ಅಧಿಕಾರಿಗಳ ಜೊತೆ ಸಭೆಯನ್ನು ನಡೆಸಿದ್ದರು. 2023ರಲ್ಲಿ ಟೆಂಡರ್ ಕರೆಯಲು ಸಹ ಸಭೆಯಲ್ಲಿ ತೀರ್ಮಾನ ಮಾಡಲಾಗಿತ್ತು.

ಸಭೆಯ ಬಳಿಕ ಮಾತನಾಡಿದ್ದ ಸಂಸದರು, "ಮೈಸೂರಿಗೆ ಪೆರಿಫೆರಲ್‌ ರಿಂಗ್‌ ರಸ್ತೆ ನಿರ್ಮಾಣ ಮಾಡುವ ಕುರಿತು ಹಿಂದಿನಿಂದಲೂ ಪ್ರಸ್ತಾಪಗಳಾಗಿವೆ. ಆದರೆ ಯಾವುದೇ ಸ್ಪಷ್ಟ ನಿರ್ಧಾರ ಆಗಿರಲಿಲ್ಲ. ಆರು ತಿಂಗಳಿನಿಂದ ಈಚೆಗೆ ನಾವು ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ" ಎಂದು ಹೇಳಿದ್ದರು.

"ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರನ್ನು ಈ ಕುರಿತು ಭೇಟಿ ಮಾಡಿ ಅನುದಾನ ಕೇಳಿದ್ದೆವು. ಅನುದಾನ ನೀಡುವ ಭರವಸೆ ನೀಡಿದ್ದ ಅವರು, ಆರೋಗ್ಯ, ಶಿಕ್ಷಣ, ಕೈಗಾರಿಕೆ ಮೊದಲಾದವುಗಳಿಗೆ ಅನುಕೂವಾಗುವಂತೆ ಕ್ಲಸ್ಟರ್ ಮಾಡುವಂತೆಯೂ ಸೂಚಿಸಿದ್ದರು" ಎಂದು ಸಂಸದರು ತಿಳಿಸಿದ್ದರು.

ಪೆರಿಫೆರಲ್‌ ರಿಂಗ್‌ ರಸ್ತೆ ನಿರ್ಮಾಣ ಮಾಡುವ ಜೊತೆಗೆ ಕ್ಲಸ್ಟರ್‌ಗಳನ್ನು ನಿರ್ಮಾಣ ಮಾಡಿದರೆ ಮುಡಾಗೆ ಆದಾಯವೂ ಬರಲಿದೆ. ಇಂತಹ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಡಿಪಿಆರ್ ಮತ್ತು ಕಾರ್ಯಸಾಧ್ಯತೆಯ ಅಧ್ಯಯನ ವರದಿ ತಯಾರು ಮಾಡಿ ಯೋಜನೆಯನ್ನು ಕೈಗೆತ್ತಿಕೊಳ್ಳುವ ನಿರೀಕ್ಷೆ ಇದೆ.

ಭವಿಷ್ಯದ ದೃಷ್ಟಿಯಿಂದ ಮೈಸೂರು ನಗರಕ್ಕೆ ಪೆರಿಫೆರಲ್‌ ರಿಂಗ್‌ ರಸ್ತೆ ನಿರ್ಮಾಣ ಅಗತ್ಯವಾಗಿದೆ. ಈ ಯೋಜನೆ ನಗರದ ಆರ್ಥಿಕ ಮಟ್ಟ ಸುಧಾರಣೆಗೆ ಸಹ ಸಹಕಾರಿಯಾಗಿದೆ ಎಂದು ಅಂದಾಜಿಸಲಾಗಿದೆ. ಮುಡಾ ಪೆರಿಫೆರಲ್‌ ರಿಂಗ್‌ ರಸ್ತೆ ನಿರ್ಮಾಣ ಮಾಡುವ ಕುರಿತು ಡಿಪಿಆರ್ ತಯಾರು ಮಾಡಲು ಅನುಮತಿ ನೀಡುವಂತೆ ಸರ್ಕಾರಕ್ಕೆ ಈ ಹಿಂದೆಯೇ ಮನವಿ ಮಾಡಿತ್ತು.

ಈಗ ಮೈಸೂರಿನವರೇ ಆದ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವ ಕಾರಣಕ್ಕೆ ಪೆರಿಫೆರಲ್‌ ರಿಂಗ್‌ ರಸ್ತೆ ನಿರ್ಮಾಣ ಯೋಜನೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಒಂದು ಕಡೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯೂ ಪೂರ್ಣಗೊಂಡು, ಲೋಕಾರ್ಪಣೆಯಾಗಿದ್ದು, ನಗರಕ್ಕೆ ಭೇಟಿ ನೀಡುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+