ಮುಡಾ ಹಗರಣ: ಬಳ್ಳಾರಿಯಲ್ಲಿ ಬಿಜೆಪಿ ಬೃಹತ್ ಸಮಾವೇಶ
ಮೈಸೂರು ಆಗಸ್ಟ್ 5: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ರಾಜಾದ್ಯಂತ ಪಾದಯಾತ್ರೆ ನಡೆಸಲು ಚಿಂತನೆ ನಡೆಸಿದೆ. ಈಗಾಗಲೇ ಬಿಜೆಪಿ ಮೈಸೂರು ಚಲೋ ಪಾದಯಾತ್ರೆ ಆರಂಭಿಸಿ ಎರಡು ದಿನಗಳು ಕಳೆದಿವೆ. ಇದಾದ ಬಳಿಕ ಬಳ್ಳಾರಿಯಲ್ಲೂ ಬೃಹತ್ ಸಮಾವೇಶ ನಡೆಸಲು ಬಿಜೆಪಿ ಯೋಚಿಸಿದೆ.
ಹೌದು... ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹಿಸಿದೆ. ಸಿಎಂ ವಿರುದ್ಧ ಹೋರಾಟ ಮುಂದುವರೆಸಿರುವ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, 'ನಮ್ಮ ಹೋರಾಟ ಯಾವುದೇ ವ್ಯಕ್ತಿಯ ವಿರುದ್ಧವಲ್ಲ. ಆದರೆ ಭ್ರಷ್ಟಾಚಾರ ಮತ್ತು ಅಧಿಕಾರದ ದುರುಪಯೋಗದ ವಿರುದ್ಧ' ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಚಿವ ವಿ ಸುನೀಲ್, 'ನಮ್ಮ ಪಾದಯಾತ್ರೆ ಮುಗಿದ ನಂತರ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಅವ್ಯವಹಾರದಲ್ಲಿ ಶಾಮೀಲಾಗಿರುವ ಸಿಎಂ ರಾಜೀನಾಮೆಗೆ ಒತ್ತಡ ಹೇರಲಿದ್ದೇವೆ' ಎಂದರು. ಅಲ್ಲದೆ ಇದೇ ವಿಚಾರವಾಗಿ ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ಆರಂಭಿಸಲು ಬಿಜೆಪಿ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಪುರಾವೆ ಇಲ್ಲದೆ ಆರೋಪ!
ರಾಜ್ಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಮತ್ತು ಅವರ ಪುತ್ರ ಬಿವೈ ವಿಜಯೇಂದ್ರ ಇಬ್ಬರೂ ಭ್ರಷ್ಟಾಚಾರದಲ್ಲೊ ತೊಡಗಿದ್ದರೂ ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ವಿಎಸ್ ಉಗ್ರಪ್ಪ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಯಾವುದೇ ಪುರಾವೆಗಳಿಲ್ಲ. ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ರಾಜ್ಯಪಾಲರು ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೇಳದರು. ಬಿಡಿಎಯಿಂದ ಭೂ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಯಡಿಯೂರಪ್ಪ ಮತ್ತು ಅವರ ಪುತ್ರ ಆರ್‌ಟಿಜಿಎಸ್ ಮೂಲಕ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ ಉಗ್ರಪ್ಪ, ಸಿದ್ದರಾಮಯ್ಯ ತಮ್ಮ ಪತ್ನಿ ಪಾರ್ವತಿ ಅವರಿಗೆ ಮುಡಾ ನಿವೇಶನ ಹಂಚಿಕೆ ಮಾಡಲು ನೇರವಾಗಿ ಅಥವಾ ಪರೋಕ್ಷವಾಗಿ ಮೇಲೆ ಪ್ರಭಾವ ಬೀರಿಲ್ಲ. ಮುಡಾದಲ್ಲಿ ದೊಡ್ಡ ಅವ್ಯವಹಾರ ನಡೆದಿದ್ದು 220 ಎಕರೆಗೂ ಹೆಚ್ಚು ಜಮೀನು ಮಂಜೂರು ಮಾಡಲಾಗಿದೆ ಎಂದಿದ್ದಾರೆ.
ಆದರೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಅಕ್ರಮವಾಗಿ ವರ್ಗಾವಣೆಯಾಗಿರುವುದು 189 ಕೋಟಿ ರೂಪಾಯಿ ಅಲ್ಲ, 89 ಕೋಟಿ ರೂಪಾಯಿ ಎಂದು ನೀವೇ ಹೇಳಿದ್ದೀರಿ ಸಿಎಂ ಸಿದ್ದರಾಮಯ್ಯ ಅವರೇ. ಹೀಗಾಗಿ ನೀವು ಹುದ್ದೆಗೆ ರಾಜೀನಾಮೆ ನೀಡಬೇಕು ಎಮದು ವಿಜಯೇಮದ್ರ ಆಗ್ರಹಿಸಿದ್ದಾರೆ.












Click it and Unblock the Notifications