ನನ್ನ ತಂದೆ ಸಿಎಂ ಆಗಬೇಕು: ಯತೀಂದ್ರ ಸಿದ್ದರಾಮಯ್ಯ
ಮೈಸೂರು, ಮೇ 13: ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಹಿನ್ನೆಲೆ ಮತ ಎಣಿಕೆ ಆರಂಭವಾಗಿದ್ದು ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮುನ್ನಡೆ ಸಾಧಿಸಿದ್ದಾರೆ. ಇವರ ವಿರುದ್ಧ ವಿ ಸೋಮಣ್ಣ ಹಿನ್ನಡೆ ಕಾಣುತ್ತಿದ್ದಾರೆ.
ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ನಾವು ಏನು ಬೇಕಾದರೂ ಮಾಡುತ್ತೇವೆ.ಕರ್ನಾಟಕದ ಹಿತದೃಷ್ಟಿಯಿಂದ ನನ್ನ ತಂದೆ ಸಿಎಂ ಆಗಬೇಕು ಎಂದು ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಫಲಿತಾಂಶ ಇಂದು ಹೊರಬರಲಿದೆ. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರದ ಗದ್ದುಗೆ ಏರಲಿದೆ ಎಂಬ ಕುತೂಹಲ ಕೆರಳಿಸಿದೆ. ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ಗಳು ಸ್ಪರ್ಧೆಯ ಕಣದಲ್ಲಿವೆ. ಆದರೆ, ಸಿದ್ದರಾಮಯ್ಯ ಬೆಂಬಲಿಗರು ಮಾತ್ರ ಅವರು ಸಿಎಂ ಆಗಲೇಬೇಕೆಂದು ಬ್ಯಾಟ್ ಬೀಸಿದ್ದಾರೆ.
#WATCH | "We will do anything to keep BJP out of power...In the interest of Karnataka, my father should become the CM," says Yathindra Siddaramaiah, Congress leader and son of former CM Siddaramaiah. pic.twitter.com/sTHMMEqwz3
— ANI (@ANI) May 13, 2023
ಈ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಪೇಸಿಎಂ ಕ್ಯಾಂಪೇನ್ ಅನ್ನು ಕಾಂಗ್ರೆಸ್ ಕೈಗೊಂಡಿತ್ತು. ಬಿಜೆಪಿಯ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿತ್ತು. ಈ ಪ್ರಚಾರ ತಂತ್ರವು ದೇಶದಾದ್ಯಂತ ಭಾರೀ ಪರ-ವಿರೋಧ ಚರ್ಚೆಗೆ ಗ್ರಾಸವಾಗಿತ್ತು. ಈಗ ಫಲಿತಾಂಶದ ಹೊತ್ತಿನಲ್ಲಿ ಕಾಂಗ್ರೆಸ್ ಪರ ಅಲೆ ಎಂಬ ನಂಬಿಕೆಯನ್ನು ಕೈ ಬೆಂಬಲಿಗರು ವ್ಯಕ್ತಪಡಿಸಿದ್ದಾರೆ. ಆ ಕಾರಣಕ್ಕಾಗಿ ಅವರು 'MyCM' ಕ್ಯಾಂಪೇನ್ ಅನ್ನು ಆರಂಭಿಸಿದ್ದಾರೆ. ಕಾಂಗ್ರೆಸ್‌ಗೆ ಬಹುಮತ ಬಂದರೆ ಸಿದ್ದರಾಮಯ್ಯನವರೇ ಸಿಎಂ ಆಗಬೇಕೆಂದು ಬೆಂಬಲಗರು ಒತ್ತಾಯಿಸುತ್ತಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯನವರು ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಅವರ ವಿರುದ್ಧ ಸಚಿವ ವಿ ಸೋಮಣ್ಣ ಅವರು ಕಣಕ್ಕಿಳಿದಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು, 'ಕರ್ನಾಟಕದಲ್ಲಿ ಕಾಂಗ್ರೆಸ್ ಸಂಪೂರ್ಣ ಬಹುಮತ ಪಡೆದು ಸರ್ಕಾರ ರಚಿಸಲಿದೆ. ಸ್ವಂತ ಬಲದಿಂದ ಸರ್ಕಾರ ರಚಿಸುವ ವಿಶ್ವಾಸವಿದೆ' ಎಂದು ತಿಳಿಸಿದ್ದಾರೆ.












Click it and Unblock the Notifications