ಯತೀಂದ್ರನ ಮೇಲೆ ಆರೋಪ ಹೊರಿಸಿದರೆ ತಕ್ಕ ಶಾಸ್ತಿ ಮಾಡ್ತೀನಿ: ಸಿಎಂ
ಮೈಸೂರು, ಅಕ್ಟೋಬರ್ 7: ತಮ್ಮ ಪುತ್ರ ಡಾ. ಯತೀಂದ್ರ ವಿರುದ್ಧ ಬಿಜೆಪಿ ನಾಯಕರು ಮಾಡಿರುವ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಮ್ಮ ಪುತ್ರನ ವಿರುದ್ಧ ಬಿಜೆಪಿ ನಾಯಕರು ಮಾಡಿರುವ ಆರೋಪಗಳು ಸಂಪೂರ್ಣ ನಿರಾಧಾರವಾದುದು. ಚುನಾವಣೆ ಹತ್ತಿರ ಬರುತ್ತಿರುವುದರಿಂದ ಬಿಜೆಪಿ ನಾಯಕರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ತಮ್ಮ ಪುತ್ರನ ವಿರುದ್ಧ ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು. ನನ್ನ ಮಗನ ಕೈಲೇ ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆಂದು ಗುಡುಗಿದರು.

ಮಾಜಿ ಸಂಸದ ಸಿ.ಎಚ್ ವಿಜಯಶಂಕರ್ ಕಾಂಗ್ರೆಸ್ ಗೆ ಸೇರ್ಪಡೆಯಾಗುವಂತೆ ಕೋರಿ ನಾನು ಯಾವುದೇ ರೀತಿಯ ಮಾತುಕತೆ ನಡೆಸಿಲ್ಲ. ನಾನು ವಿಜಯಶಂಕರ್ ಒಟ್ಟಾಗಿ ಕುಳಿತಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವುದು ಹಳೆಯ ಫೋಟೋ. ಬಹುಶಃ ಅದು ನನ್ನ ಮಗ ರಾಕೇಶ್ ಸಾವನ್ನಪ್ಪಿದ ಸಂದರ್ಭದಲ್ಲಿ ವಿಜಯಶಂಕರ್ ಟಿ. ಕಾಟೂರಿಗೆ ಬಂದಿದ್ದಾಗ ತೆಗೆದಿರುವ ಫೋಟೋ ಆಗಿರಬಹುದು ಎಂದರು.












Click it and Unblock the Notifications