ಐತಿಹಾಸಿಕ ಮೈಸೂರು ದಸರಾ ಉತ್ಸವಕ್ಕೆ ಚಾಲನೆ
ಮೈಸೂರು, ಅ.5 : ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ 2013ಕ್ಕೆ ಚಾಲನೆ ದೊರಕಿದೆ. ಶನಿವಾರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ ಹತ್ತುದಿನಗಳ ದಸರಾ ಉತ್ಸವಕ್ಕೆ ಚಾಲನೆ ನೀಡಿದರು. ಸಿಎಂ ಸಿದ್ದರಾಮಯ್ಯ ಮುಂತಾದವರು ಉಪಸ್ಥಿತರಿದ್ದರು.
ಶನಿವಾರ ಬೆಳಗ್ಗೆ 10.45ರ ಸುಮಾರಿಗೆ ಚಾಮುಂಡಿ ಬೆಟ್ಟದಲ್ಲಿ ನಾಡದೇವಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ದಸರಾ ಉತ್ಸವಕ್ಕೆ ಚಾಲನೆ ನೀಡಲಾಯಿತು. ಈ ಮೂಲಕ ಹತ್ತು ದಿನಗಳ ಉತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆಯಿತು.

ದಸರಾ ಉದ್ಘಾಟಿಸಿ ಮಾತನಾಡಿ ಡಾ.ಚಂದ್ರಶೇಖರ ಕಂಬಾರ, ಕರ್ನಾಟಕ ಜನರಿಗೆ ದಸರ ಹಬ್ಬದ ಶುಭಾಶಯ ಸಲ್ಲಿಸಿದರು. ಹಳೆ ಬೇರು, ಹೊಸ ಚಿಗುರುಗಳ ಮಿಲನವಾಗಿರುವ ದಸರಾ ಮಹೋತ್ಸವವನ್ನು ಉದ್ಘಾಘಟಿಸಲು ಅತೀವ ಹರ್ಷವಾಗುತ್ತದೆ ಎಂದು ಹೇಳಿದರು.
ಹಳತು ಹೊಸತರ ನಡುವೆ ನಮ್ಮೆಲ್ಲರ ಜೀವನ ನಾಟಕ ಜರುಗುತ್ತದೆ. ಬದಲಾವಣೆಯೊಂದೇ ನಿರಂತರ ಸತ್ಯ. ಬದವಲಾವಣೆಗಳನ್ನು ತಡೆಯುವುದು ಬೀಸುವ ಗಾಳಿಯನ್ನು ಹಿಡಿದಿಡುವ ಹಾಗೆ. ಇದಕ್ಕಾಗಿ ನಾವು ಕಳವಳಿಸಬೇಕಿಲ್ಲ.
ಆದರೆ, ಬದಲಾವಣೆಯ ಭರಾಟೆಯಲ್ಲಿ ಇಂದು ಅನಗತ್ಯವಾದುದರ ಜತೆಗೆ ಸಾರ್ವಕಾಲಿಕ ಮೌಲ್ಯಗಳುಳ್ಳ ಗತದ ಅನರ್ಘ್ಯ ಅಂಶಗಳು ಅಳಿದುಹೋಗದಂತೆ ಎಚ್ಚರ ವಹಿಸುವುದು ಬಲು ಮುಖ್ಯವಾದುದು ಎಂದು ಅಭಿಪ್ರಾಯಪಟ್ಟರು.
ಇದೇ ಸಂದರ್ಭದಲ್ಲಿ ಅರಮನೆಯಲ್ಲಿ ರಾಜವಂಶಸ್ತ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸಿಂಹಾಸನಕ್ಕೆ ಪೂಜೆ ಸಲ್ಲಿಸುವ ಮೂಲಕ ಖಾಸಗಿ ದಸರಾ ದರ್ಬಾರ್ ಗೆ ಚಾಲನೆ ನೀಡಿದರು.
ಸಾಂಸ್ಕೃತಿಕ ಕಾರ್ಯಕ್ರಮ : ದಸರಾ ಅಂಗವಾಗಿ ಆಯೋಜಿಸಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಜೆ 6 ಗಂಟೆಗೆ ಅರಮನೆ ಆವರಣದಲ್ಲಿ ಖ್ಯಾತ ರಂಗಕರ್ಮಿ ನಾಡೋಜ ಡಾ.ಏಣಗಿ ಬಾಳಪ್ಪ ಚಾಲನೆ ನೀಡಲಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಲಿದೆ.
ಚಲನಚಿತ್ರೋತ್ಸವ : ಕಲಾ ಮಂದಿರದಲ್ಲಿ ಸಂಜೆ ದಸರಾ ಚಲನಚಿತ್ರೋತ್ಸವಕ್ಕೆ ವಾರ್ತಾ ಸಚಿವ ಸಂತೋಷ್ ಲಾಡ್ ಚಾಲನೆ ನೀಡಲಿದ್ದಾರೆ. ಪಾರ್ವತಮ್ಮ ರಾಜ್‌ಕುಮಾರ್, ಬಿ.ಸರೋಜಾದೇವಿ, ಲೀಲಾವತಿ, ತಾರಾ, ಉಪೇಂದ್ರ, ಪ್ರಿಯಾಂಕ, ದರ್ಶನ್, ವಿನೋದ್‌ರಾಜ್, ದಿಗಂತ್, ನಟಿ ಐಂದ್ರಿತಾ ರೇ ಮುಂತಾದವರು ಭಾಗವಹಿಸಲಿದ್ದಾರೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications