ರಾಜ ವೈಭವ ಮೇಳೈಸುವ ಖಾಸಗಿ ದರ್ಬಾರ್
ಮೈಸೂರು ದಸರಾಕ್ಕೆ ಚಾಮುಂಡಿಬೆಟ್ಟದಲ್ಲಿ ವಿದ್ಯುಕ್ತ ಚಾಲನೆ ದೊರೆಯುತ್ತಿದ್ದಂತೆಯೇ ಮೈಸೂರು ನಗರದ ಅಂಬಾವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭಗೊಂಡಿದೆ. ಹಾಗಾಗಿ ಇದೀಗ ಅಂಬಾವಿಲಾಸ ಅರಮನೆಯಲ್ಲಿ ಗತದಿನಗಳ ರಾಜವೈಭವ ಮತ್ತೆ ನಮ್ಮ ಕಣ್ಮುಂದೆ ಬರುತ್ತಿದೆ.
ನವರಾತ್ರಿ ಸಂದರ್ಭ ಅರಮನೆಯ ಸಂಪ್ರದಾಯದಂತೆ ಪೂಜಾಕಾರ್ಯವನ್ನು ನೆರವೇರಿಸಿ ಒಡೆಯರ್ ಮನೆತನದ ರಾಜರಾದ ಮಾಜಿ ಸಂಸದ ಶ್ರೀ ಕಂಠದತ್ತ ನರಸಿಂಹರಾಜ ಒಡೆಯರ್ ಅವರು ಸಿಂಹಾಸನವನ್ನು ಅಲಂಕರಿಸುತ್ತಾರೆ.
ಈ ಸಂದರ್ಭ ಪಳಪಳನೆ ಹೊಳೆಯುವ ರೇಷ್ಮೆ ವಸ್ತ್ರಕ್ಕೆ ಚಿನ್ನದ ಜರಿ ಕೂರಿಸಿದ ರಾಜಪೋಷಾಕು ಅಲ್ಲದೆ, ಜರಿಪೇಟ, ಅತ್ಯಮೂಲ್ಯ ಆಭರಣ ಧರಿಸಿದ ಒಡೆಯರ್ ದರ್ಬಾರ್ ಹಾಲ್‍ಗೆ ಬರುತ್ತಿದ್ದಂತೆಯೇ ಇಂದ್ರನ ಐಭೋಗವನ್ನು ನೆನಪಿಸುವಂತೆ ಮಾಡುತ್ತದೆ.
ನವರಾತ್ರಿಯ ಮೊದಲ ದಿನ ಅಂದರೆ ಪಾಡ್ಯದ ದಿನ ಶ್ರೀಕಂಠದತ್ತ ಒಡೆಯರ್ ಅವರಿಗೆ ಬೆಳಿಗ್ಗೆ ಎದ್ದ ತಕ್ಷಣ ಆರತಿ ಎತ್ತಿ ಎಣ್ಣೆ ಶಾಸ್ತ್ರ ಮಾಡಿ, ಅರಮನೆಗೆ ಬರುವ ಕ್ಷೌರಿಕರಿಂದ ಚೌಲ ಮಾಡಿಸಿ ನಂತರ ಮಂಗಳ ಸ್ನಾನ ಮಾಡಲಾಗುತ್ತದೆ. ಮುತೈದೆಯರು ಹಾಗೂ ಪುರೋಹಿತ ಮನೆತನದ ಮಹಿಳೆಯರು ಒಡೆಯರ್‍ಗೆ ಆರತಿ ಬೆಳಗುತ್ತಾರೆ.
ಇದಾದ ನಂತರ ಒಡೆಯರ್ ಪೂಜೆಗೆ ಅಣಿಯಾಗುತ್ತಾರೆ. ಚಾಮುಂಡಿತೊಟ್ಟಿಯಲ್ಲಿ ಗಣಪತಿಗೆ ಪೂಜೆ ಮಾಡಿ ನಂತರ ಕಳಶಪೂಜೆ, ಕಂಕಣಪೂಜೆ ನಡೆಸಿ, ಕುಲದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕಂಕಣ ಧರಿಸುತ್ತಾರೆ. ಒಡೆಯರ್ ಜೊತೆಗೆ ಅವರ ಶ್ರೀಮತಿ ಪ್ರಮೋದಾದೇವಿ ಸಹ ರಾಜಮನೆತನದ ಪದ್ಧತಿಯಂತೆ ಕಂಕಣ ಧರಿಸುತ್ತಾರೆ. ಇಲ್ಲಿಂದಲೇ ಎಲ್ಲಾ ರೀತಿಯ ಕಠಿಣ ವ್ರತಗಳು ಪ್ರಾರಂಭವಾಗುತ್ತವೆ. ವ್ರತ ಮುಂದೆ ಯಾವ ಆಚರಣೆ ನಡೆಯಲಿದೆ ಓದಿ

ರತ್ನಖಚಿತ ಸಿಂಹಾಸನ
ಅರಮನೆಯ ದರ್ಬಾರ್ ಹಾಲ್ ನಲ್ಲಿರುವ ರತ್ನ ಖಚಿತ ಸಿಂಹಾಸನವು ಆಕರ್ಷಕವಾಗಿದ್ದು, ಇದನ್ನು ದಸರಾ ಸಂದರ್ಭ ಮಾತ್ರ ಜೋಡಿಸಲಾಗುತ್ತದೆ. ಈ ಕಾರ್ಯಕ್ಕೆ ಮೈಸೂರಿಗೆ ಸಮೀಪದ ಗೆಜ್ಜಗಳ್ಳಿ ಗ್ರಾಮದಿಂದ ಆಯ್ದ ಕೆಲವರನ್ನು ಮಾತ್ರ ಕರೆತರಲಾಗುತ್ತದೆ.
ಇದು ತಲತಲಾಂತರದಿಂದ ನಡೆದು ಬಂದಿದೆ. ನವರಾತ್ರಿಯ ದಿನಗಳಲ್ಲಿ ಶ್ರೀಕಂಠದತ್ತನರಸಿಂಹರಾಜ ಒಡೆಯರ್ ಆರೋಹಣ ಮಾಡಿ ಖಾಸಗಿ ದರ್ಬಾರ್ ನಡೆಸುತ್ತಾರೆ. ಸಿಂಹಾಸನ ಕುರಿತ ಸಂಪೂರ್ಣ ವಿವರ ಇಲ್ಲಿ ಓದಿ

ಹಲವು ಪೂಜಾವಿಧಿಗಳು
ಚಂಡಿಕಾಹೋಮ, ಬಲಿ, ಮಹಿಷವಧೆ, ಶಮೀವೃಕ್ಷ ಪೂಜೆ ಸೇರಿದಂತೆ ಹಲವು ಪೂಜಾವಿಧಿಗಳು ಸಾಂಗೋಪವಾಗಿ ನಡೆಯುತ್ತದೆಯಲ್ಲದೆ, ದೇವಿ ಭಾಗವತವನ್ನು ಪಾರಾಯಣ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಸಾಂಕೇತಿಕವಾಗಿ ಮಹಿಷಾಸುರನನ್ನು ಸಂಹರಿಸಲಾಗುತ್ತದೆ.

ಅರಸನಿಗೆ ಪೂಜೆ
ಕಂಕಣಧಾರಿಗಳಾದ ಒಡೆಯರ್ ದಂಪತಿಗಳಿಗೆ ಪೂಜೆ ಮಾಡಲಾಗುತ್ತದೆ. ಜೊತೆಗೆ ದರ್ಬಾರ್ ಗೆ ಬರುವ ಮುನ್ನ ಪತ್ನಿ ಪ್ರಮೋದಾದೇವಿಯವರು ಸುಮಂಗಲೆಯರೊಂದಿಗೆ ಒಡೆಯರ ಪಾದಪೂಜೆ ಮಾಡಿ ಹಣೆಗೆ ತಿಲಕ ಇಡುತ್ತಾರೆ. ಇದು ಅರಮನೆಯ ಕಲ್ಯಾಣಮಂಟಪದ ಮೇಲ್ಭಾಗದಲ್ಲಿ ದಿನನಿತ್ಯ ನಡೆಯುತ್ತದೆ.

ರಾಜಗತ್ತಿನಲ್ಲಿ ಒಡೆಯರ್
ದರ್ಬಾರ್ ಹಾಲ್ ಗೆ ಆಗಮಿಸುವ ಒಡೆಯರ್ ಸಿಂಹಾಸನಕ್ಕೆ ಪೂಜೆ ಮಾಡಿ ಬಳಿಕ ರಾಜಗಾಂಭೀರ್ಯದಿಂದ ಸಿಂಹಾಸನವನ್ನೇರಿ ಆ ಸ್ಥಾನಕ್ಕೆ ಬಲಗೈಯಿಂದ ಸೆಲ್ಯೂಟ್ ಹೊಡೆದು ರಾಜಗತ್ತಿನಲ್ಲಿ ಆಸೀನರಾಗುತ್ತಾರೆ. ಈ ಸಂದರ್ಭ ಹೊಗಳು ಭಟರಿಂದ ಬಹುಪರಾಕ್ ಕೇಳಿ ಬರುತ್ತದೆ. ನವರಾತ್ರಿಯ ಮೊದಲ ದಿನ ಅಂದರೆ ಪಾಡ್ಯದಂದು ಬೆಳಿಗ್ಗೆಯಿಂದ ಖಾಸಗಿ ದರ್ಬಾರ್ ನಡೆದರೆ, ಉಳಿದಂತೆ ಸಂಜೆ ವೇಳೆಯಲ್ಲಿ ನಡೆಯುತ್ತದೆ.

ಹತ್ತು ದಿನಗಳ ಕಾಲ
ಪ್ರತಿ ದಿನ ಖಾಸಗಿ ದರ್ಬಾರ್ ನಡೆಯುವ ಮುನ್ನ ಕೆಲವು ವಿಧಿವಿಧಾನಗಳು ಕೂಡ ಇಲ್ಲಿ ನಡೆಯುತ್ತದೆ. ಅದರಂತೆ ಪಟ್ಟದ ಆನೆ, ಹಸು, ಕುದುರೆಗಳಿಗೆ ಅಲಂಕಾರ ಮಾಡಿ ಕೋಟೆ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಲಾಗುತ್ತದೆ. ಬಳಿಕ ಅರಮನೆಗೆ ಇವುಗಳ ಪ್ರವೇಶವಾಗುತ್ತದೆ ನಂತರ ದರ್ಬಾರ್ ಆರಂಭವಾಗುತ್ತದೆ. ಹತ್ತು ದಿನಗಳ ಕಾಲ ನಡೆಯುವ ಈ ಖಾಸಗಿ ದರ್ಬಾರ್ ದಸರಾದ ಅತ್ಯಕರ್ಷಣೆಯಾಗಿರುತ್ತದೆ. ಈ ಸಂದರ್ಭ ಅರಮನೆ ಬಣ್ಣದ ಬೆಳಕಿನಿಂದ ಜಗಮಗಿಸುತ್ತಿರುತ್ತದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications