ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ದಸರಾ; ಸಿಎಂಗೆ ಅಧಿಕೃತ ಆಹ್ವಾನ ನೀಡಿದ ನಿಯೋಗ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಸೆಪ್ಟೆಂಬರ್ 14: ಈ ಸೆಪ್ಟೆಂಬರ್ 30ರಿಂದ ಅಕ್ಟೋಬರ್ 8ರವರೆಗೆ ನಡೆಯುವ ನಾಡ ಹಬ್ಬ ಮೈಸೂರು ದಸರಾಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಅಧಿಕೃತವಾಗಿ ಆಹ್ವಾನಿಸಲಾಯಿತು.

ದಸರಾದ ಯುವಸಂಭ್ರಮ ಉದ್ಘಾಟಿಸಲಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್ದಸರಾದ ಯುವಸಂಭ್ರಮ ಉದ್ಘಾಟಿಸಲಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್

ಮೈಸೂರು ‌ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ, ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ , ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್, ಹರ್ಷವರ್ಧನ್ ನೇತೃತ್ವದ ನಿಯೋಗ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ 2019ರ ದಸರಾ ಮಹೋತ್ಸವಕ್ಕೆ ಆಹ್ವಾನಿಸಿದೆ.

Mysore Dasara Welcome Committee Invited CM Officially

"ಮೈಸೂರು ದಸರಾ ಸ್ವಾಗತ ಸಮಿತಿಯಿಂದ ಸಿಎಂ ಯಡಿಯೂರಪ್ಪ ಅವರನ್ನು ಆಹ್ವಾನಿಸಿದ್ದೇವೆ. ಮೈಸೂರಿನ‌ ಎಲ್ಲ ಪಕ್ಷಗಳ ಶಾಸಕರು, ಜಿಲ್ಲಾಧಿಕಾರಿಗಳು ಸೇರಿ ಸಿಎಂ ಅವರನ್ನು ಆಹ್ವಾನಿಸಿದ್ದೇವೆ. ಸೆ.29ರ ಬೆಳಿಗ್ಗೆ 9ಕ್ಕೆ ಚಾಮುಂಡೇಶ್ವರಿ ಪೂಜೆ ಬಳಿಕ ದಸರಾ ಉದ್ಘಾಟನೆ ನಡೆಯಲಿದೆ. ರಾಜ್ಯಪಾಲರು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಈಗಾಗಲೇ ಆಹ್ವಾನ ಕೊಟ್ಟಿದ್ದೇವೆ. ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧೂ ಅವರನ್ನು ಆಹ್ವಾನಿಸಲು ಒಂದು ನಿಯೋಗ ಹೋಗಿದೆ' ಎಂದು ತಿಳಿಸಿದರು ಸಚಿವ ವಿ.ಸೋಮಣ್ಣ.

English summary
Chief Minister Yediyurappa was officially invited to the Mysore Dasara which will be held from September 30 to October 8.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X