ಶೌಚಾಲಯ ನಿರ್ಮಾಣಕ್ಕೆ ಆನ್‌ಲೈನ್ ಮೂಲಕ ಅರ್ಜಿ-ಮೈಸೂರು ಸಿಇಓ ಕೆ.ಎಂ.ಗಾಯತ್ರಿ
ಮೈಸೂರು, ನವೆಂಬರ್ 19: ಜಿಲ್ಲೆಯಲ್ಲಿ ಈಗಲೂ ಕೆಲವು ಪ್ರದೇಶದಲ್ಲಿ ಶೌಚಾಲಯಗಳ ನಿರ್ಮಾಣದ ಜೊತೆಗೆ ಅದನ್ನು ಬಳಸುವಂತೆ ಮಾಡುವುದು ಸವಾಲಿನ ಸಂಗತಿಯಾಗಿದ್ದು, ಜಿಲ್ಲೆಯಲ್ಲಿ ಬಯಲು ಶೌಚಾಲಯ ಇಲ್ಲದಂತೆ ಮಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆಗಳು ನಿಗಾವಹಿಸಬೇಕಿದೆ ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ.ಎಂ. ಗಾಯತ್ರಿ ತಿಳಿಸಿದರು.
ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನಮ್ಮ ಶೌಚಾಲಯ ನಮ್ಮ ಗೌರವ ಶೀರ್ಷಿಕೆಯಡಿಯಲ್ಲಿ ಅಂದದ ಶೌಚಾಲಯ - ಆನಂದದ ಜೀವನ ಎಂಬ ಘೋಷವಾಕ್ಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಶೌಚಾಲಯ ಬಳಕೆ ಮಾಡಬೇಕಿದ್ದು, ಜಾಗತಿಕ ತಾಪಮಾನದ ಬದಲಾವಣೆಯಲ್ಲಿ ಶೌಚಾಲಯ ಬಳಕೆಯೂ ಮುಖ್ಯವಾಗಿದೆ. ಶೌಚಾಲಯ ಬಳಕೆ ಗೌರವದ ಪ್ರಶ್ನೆಯೂ ಆಗಿದೆ. ಹೀಗಾಗಿ ಜಿಲ್ಲೆ, ತಾಲೂಕು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಾರ್ಯಕ್ರಮ ನಡೆಸುವ ಮೂಲಕ ಶೌಚಾಲಯ ಬಳಕೆ ಕುರಿತು ಅರಿವು ಮೂಡಿಸಲಾಗುತ್ತದೆ.
ಶೌಚಾಲಯ ನಿರ್ಮಾಣಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಬಳಿಕ ಪಿಡಿಒಗಳು ಮನೆಗಳಿಗೆ ತೆರಳಿ ಪರಿಶೀಲಿಸುವರು. ಅರ್ಹರಿಗೆ ಶೌಚಾಲಯ ನಿರ್ಮಿಸಿಕೊಡಲಾಗುವುದು. ಆದರೆ ಶೌಚಾಲಯಗಳ ನಿರ್ಮಾಣದ ಜತೆಗೆ ಅದರ ಬಳಕೆ ಮಾಡುವಂತೆ ಮಾಡುವುದು ಸವಾಲಿನ ಸಂಗತಿಯಾಗಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯ ಇದ್ದರೂ ಸಹ ಅದರ ಬಳಕೆಯ ಕಡಿಮೆ ಇದೆ. ಇದಕ್ಕೆ ನೀರಿನ ಸಮಸ್ಯೆ ಮುಖ್ಯ ಕಾರಣವಾಗಿದ್ದು, ಈ ಬಗ್ಗೆ ಅರಿವು ಮೂಡಿಸಿದರೆ ಅದರ ಬಳಕೆ ಪ್ರಮಾಣ ಹೆಚ್ಚಲಿದೆ. ಗ್ರಾಮೀಣ ಪ್ರದೇಶದಲ್ಲಿ 8ನೇ ತರಗತಿ ನಂತರದಲ್ಲಿ ಬಹುತೇಕ ಹೆಣ್ಣು ಮಕ್ಕಳು ಮನರೇಗಾ ಮೂಲಕ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ ಮಾಡುವ ಕೆಲಸ ಮಾಡಲಾಗುತ್ತಿದೆ. ಬಿಇಒಗಳು ಶೌಚಾಲಯದಲ್ಲಿ ಸಮಸ್ಯೆ ಇದ್ದರೆ ಅದರ ಸರ್ವೇ ನಡೆಸಿ ಮಾಹಿತಿ ನೀಡಿದರೆ ಶೌಚಾಲಯ ನಿರ್ಮಾಣಕ್ಕೆ ಕ್ರಮವಹಿಸಲಾಗುವುದು.
ಇದಲ್ಲದೇ ಆರೋಗ್ಯ ಇಲಾಖೆ ಮೂಲಕ ಬಯಲು ಶೌಚಾಲಯ ಬಳಿಕೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಬೇಕು. ಶೌಚಾಲಯದ ಸ್ವಚ್ಛತೆ ಕಾಪಾಡುವ ಬಗ್ಗೆ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ನೆರವಿನೊಂದಿಗೆ ಅರಿವು ಮೂಡಿಸಬೇಕು. ಮಹಿಳಾ ಮತ್ತು ಮಕ್ಕಳ ಇಲಾಖೆ ಮೂಲಕ ಮಹಿಳೆಯರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು ಉದ್ಘಾಟಿಸಿದರು. ನಂತರ ಶೌಚಾಲಯದ ಬಳಕೆ, ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆ ಕುರಿತಂತೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೃಷ್ಣರಾಜು, ಹಿರಿಯ ಪತ್ರಕರ್ತರಾದ ಸಿ.ಕೆ.ಮಹೇಂದ್ರ ಹಾಗೂ ಸೇರಿದಂತೆ ಇತರೆ ಅಧಿಕಾರಿಗಳು, ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications